ನೂತನ ಶಿಕ್ಷಣ ನೀತಿಗೆ ವಿರೋಧ
ಕೇಂದ್ರ ಸರ್ಕಾರದ ವಿರುದ್ಧ ಎಸ್‌ಎಫ್ಐ ಪ್ರತಿಭಟನೆ • ರಸ್ತೆ ತಡೆ ನಡೆಸಿ ಆಕ್ರೋಶ
Team Udayavani, Aug 9, 2019, 2:46 PM IST
ನಗರದ ಅಂಬೇಡ್ಕರ್ ವೃತ್ತದಲ್ಲಿ ಎಸ್‌ಎಫ್ಐ ಕಾರ್ಯಕರ್ತರು ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿಯ ಕರಡು ಪ್ರತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರ: ಕೇಂದ್ರದ ನೂತನ ಶಿಕ್ಷಣ ನೀತಿ ಸಂಪೂರ್ಣವಾಗಿ ಖಾಸಗೀಕರಣ ಹಾಗೂ ಕೋಮುವಾದೀಕರಣದಿಂದ ಕೂಡಿದ್ದು, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿ ಗುರುವಾರ ಜಿಲ್ಲಾ ಕೇಂದ್ರದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್ಐ) ಕಾರ್ಯಕರ್ತರು ಕೇಂದ್ರದ ನೂತನ ಶಿಕ್ಷಣ ನೀತಿಯ ಕರಡು ಪ್ರತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನಾ ನಡೆಸಿ ಕೆಲಕಾಲ ರಸ್ತೆ ತಡೆ ನಡೆಸಿದ ಎಸ್‌ಎಫ್ಐ ಕಾರ್ಯಕರ್ತರು, ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿಯ ಧೋರಣೆಗಳ ವಿರುದ್ಧ ಧಿಕ್ಕಾರ ಕೂಗಿದರು.
ಅಸಮಾನತೆ ಸೃಷ್ಟಿಸಲು ಯತ್ನ: ಕೇಂದ್ರ ಸರ್ಕಾರ ಬಂಡವಾಳಶಾಹಿಗಳಿಗೆ ಪೂರಕವಾಗಿ ದೇಶದ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಲು ಹೊರಟಿದೆ. ಕೇಂದ್ರದ ಹೊಸ ಶಿಕ್ಷಣ ನೀತಿ ಸಾರ್ವತ್ರಿಕ ಶಿಕ್ಷಣ ನೀತಿಗೆ ವಿರುದ್ಧವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿಯೂ ಕೂಡ ಅಸಮಾನತೆ ಸೃಷ್ಟಿಸಲು ಕೇಂದ್ರ ಹೊರಟಿದೆ ಎಂದು ಪ್ರತಿಭಟನಕಾರರು ಕಿಡಿಕಾರಿದರು.
ಬಡವರು, ಮಧ್ಯಮ ವರ್ಗಕ್ಕೆ ಕಷ್ಟ: ಎಸ್‌ಎಫ್ಐ ರಾಜ್ಯಾಧ್ಯಕ್ಷ ವಿ.ಅಂಬರೀಶ್ ಮಾತನಾಡಿ, ಕೇಂದ್ರ ಸರ್ಕಾರವು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಿರುವ ರಾಷ್ಟ್ರೀಯ ಶಿಕ್ಷಣ ನೀತಿ -2019 ದೇಶದ ಮುಂದಿನ 20 ವರ್ಷಗಳ ದೇಶದ ಶಿಕ್ಷಣ ನೀತಿಯ ಸ್ವರೂಪವನ್ನು ನಿರ್ಧರಿಸುವ ಒಂದು ಮಹತ್ವದ ಶೈಕ್ಷಣಿಕ ವರದಿಯಾಗಿದೆ.
ಆದರೆ ಕೇಂದ್ರದ ಹೊಸ ಶಿಕ್ಷಣ ನೀತಿ ಖಾಸಗೀಕರಣಕ್ಕೆ ಪೂರಕವಾಗಿರುವುದರಿಂದ ಭವಿಷ್ಯದ ದಿನಗಳಲ್ಲಿ ಶಿಕ್ಷಣ ಬಡವರಿಗೆ, ಮಧ್ಯಮ ವರ್ಗದ ರೈತಾಪಿ ಕೂಲಿ ಕಾರ್ಮಿಕರ ಮಕ್ಕಳಿಗೆ ಇನ್ನಷ್ಟು ದುಬಾರಿಯಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಬಹುರಾಷ್ಟ್ರೀಯ ಕಂಪನಿಗಳಿಗೆ ಪೂರಕ: ಕೊಠಾರಿ ಆಯೋಗದ ಪ್ರಕಾರ ದೇಶದ ಒಟ್ಟು ಜಿಡಿಪಿಯಲ್ಲಿ ಶೇ. 6ರಷ್ಟು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದುವರೆಗೂ ಆ ಕೆಲಸವನ್ನು ಯಾವ ಸರ್ಕಾರ ಕೂಡ ಮಾಡಲಿಲ್ಲ. ದೇಶದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಗಬೇಕಾದ ಆದ್ಯತೆ, ಹಣಕಾಸು ಬೆಂಬಲ ಸಿಗದೇ ಉಳ್ಳವರಿಗೆ ಮಾತ್ರ ಶಿಕ್ಷಣ ಎನ್ನುವಂತಾಗಿದೆ. ಇದೀಗ ಹೊಸ ಶಿಕ್ಷಣ ನೀತಿ ಕೂಡ ಬಹುರಾಷ್ಟ್ರೀಯ ಕಂಪನಿಗಳಿಗೆ ಪೂರಕವಾದ ಶಿಕ್ಷಣ ವ್ಯವಸ್ಥೆಯನ್ನು ಪೋಷಿಸಲು ಕೇಂದ್ರ ಸರ್ಕಾರ ಹೊರಟಿದೆ ಎಂದು ವಿ.ಅಂಬರೀಶ್ ಕಿಡಿಕಾರಿದರು.
ಹುದ್ದೆ ಭರ್ತಿಗೆ ಆಗ್ರಹ: ಎಸ್‌ಎಫ್ಐ ರಾಜ್ಯ ಸಮಿತಿ ಸದಸ್ಯ ಎ.ಸೋಮಶೇಖರ್ ಮಾತನಾಡಿ, ಕೇಂದ್ರ ಸರ್ಕಾರ ರೂಪಿಸಿರುವ ಹೊಸ ಶಿಕ್ಷಣ ನೀತಿಯಲ್ಲಿ ಕೇಂದ್ರಿಯ ಶಿಕ್ಷಣ ಸಲಹಾ ಮಂಡಳಿಯನ್ನು ರದ್ದುಗೊಳಿಸಿ ರಾಷ್ಟ್ರೀಯ ಶಿಕ್ಷಣ ಆಯೋಗ ರಚನೆಗೆ ಮುಂದಾಗಿರುವುದು ಸರಿಯಲ್ಲ ಎಂದರು.
ಸ್ವಯಂ ಸೇವೆಯ ಆಧಾರದಲ್ಲಿ ಬೋಧನೆಗೆ ಅವಕಾಶ ನೀಡುವ ಅಂಶವನ್ನು ಕರಡುನಿಂದ ಕೈ ಬಿಡಬೇಕೆಂದ ಅವರು, ಕೇಂದ್ರ ಸರ್ಕಾರ ಪ್ರತಿ ವರ್ಷ ಮಂಡಿಸುವ ಬಜೆಟ್‌ನಲ್ಲಿ ಶೇ.10 ರಷ್ಟು ಅನುದಾನ ಮೀಸಲಿಡುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು.
ಕೇಂದ್ರ ಸರ್ಕಾರ ಕೂಡಲೇ ಗುಣಾತ್ಮಕ ಶಿಕ್ಷಣ ಸಾಧಿಸಲು ದೇಶದಲ್ಲಿ ಮಂಜೂರಾಗಿರುವ ಖಾಲಿ ಇರುವ ಎಲ್ಲಾ ಹಂತಗಳ ಎಲ್ಲಾ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸಬೇಕೆಂದು ಆಗ್ರಹಿಸಿದರು.
ವಿದ್ಯಾರ್ಥಿ ಮುಖಂಡರಾದ ರಮೇಶ್, ಪಲ್ಲವಿ, ಸುಧಾ, ಸುಕನ್ಯ, ಸರೋಜಾ, ಶ್ರೀದೇವಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.