ಕಾಲುಬಾಯಿ ಜ್ವರ ಲಸಿಕಾ ಅಭಿಯಾನಕ್ಕೆ ಸಜ್ಜು


Team Udayavani, May 31, 2018, 12:46 PM IST

chikk-1.jpg

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಜೂ.1 ರಿಂದ 20ರ ವರೆಗೂ ಕೇಂದ್ರ ಪುರಸ್ಕೃತ ಯೋಜನೆಯಡಿ ಕಾಲುಬಾಯಿ ಜ್ವರದ ವಿರುದ್ಧ ಜಿಲ್ಲೆಯ ಒಟ್ಟು 2,27,262 ಜಾನುವಾರುಗಳಿಗೆ 14ನೇ ಸುತ್ತಿನ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆಂದು ಡಿಸಿ ದೀಪ್ತಿ ಆದಿತ್ಯ ಕಾನಡೆ ತಿಳಿಸಿದರು.

 ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಬುಧವಾರ ಕಾಲು ಬಾಯಿ ಜ್ವರ ಲಸಿಕಾ ಅಭಿಯಾನಕ್ಕೆ ಕೈಗೊಂಡಿರುವ ಪೂರ್ವ ಸಿದ್ಧತೆಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಳೆದ ವರ್ಷ ನವೆಂಬರ್‌ ತಿಂಗಳಲ್ಲಿ ಹಮ್ಮಿಕೊಂಡಿದ್ದ 13ನೇ ಸುತ್ತಿನ ಲಸಿಕಾ ಅಭಿಯಾನದಲ್ಲಿ ಜಿಲ್ಲಾದ್ಯಂತ ಶೇ.94 ರಷ್ಟು ಪ್ರಗತಿ ಸಾಧಿಸಿ 2,13,909 ಜಾನುವಾರುಗಳಿಗೆ ಲಸಿಕೆ ಹಾಕಿ ಉಳಿದ ರಾಸುಗಳಿಗೆ ಕೂಂಬಿಂಗ್‌ ಲಸಿಕಾ ಕಾರ್ಯಕ್ರಮದಡಿ ಲಸಿಕೆ ಹಾಕಿಸಿ ಶೇ.100 ರಷ್ಟು ಪ್ರಗತಿ ಸಾಧಿಸಲಾಗಿತ್ತು. ಕಾಲುಬಾಯಿ ಜ್ವರ ನಿಯಂತ್ರಿಸಲು ಪ್ರತಿ ಆರು ತಿಂಗಳಗೊಮ್ಮೆ ನಿರಂತರವಾಗಿ ಲಸಿಕೆ ಹಾಕಬೇಕಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಪಶು ಪಾಲನಾ ಇಲಾಖೆ ಹಾಗೂ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ವತಿಯಿಂದ 14ನೇ ಸುತ್ತಿನ ಲಸಿಕಾ ಅಭಿಯಾನವನ್ನು ನಾಳೆಯಿಂದ 20 ದಿನಗಳ ಕಾಲ ಹಮ್ಮಿಕೊಂಡಿದ್ದು, ಜಿಲ್ಲೆಯ ರೈತರು ತಮ್ಮ ಬಳಿ ಇರುವ ದನ, ಎಮ್ಮೆ, ಹಂದಿ ಮತ್ತಿತರ ರಾಸುಗಳಿಗೆ ತಪ್ಪದೇ ಲಸಿಕೆ ಹಾಕಿಸಿ ಎಂದು ಮನವಿ ಮಾಡಿದರು.

ಅಭಿಯಾನಕ್ಕೆ 26 ತಂಡಗಳ ರಚನೆ: ಜಿಲ್ಲೆಯಲ್ಲಿ ಒಟ್ಟು ಗುರುತಿಸಲಾಗಿರುವ 2,27,262 ರಾಸುಗಳಿಗೆ ಕಾಲುಬಾಯಿ ಜ್ವರದ ಲಸಿಕೆ ಹಾಕಲು ಒಟ್ಟು 26 ತಾಂತ್ರಿಕ ಲಸಿಕಾ ತಂಡಗಳನ್ನು ರಚಿಸಲಾಗಿದೆ. ಪ್ರತಿ ತಂಡಕ್ಕೆ ಪಶು ವೈದ್ಯಾಧಿಕಾರಿಯು ಮುಖ್ಯಸ್ಥರಾಗಿದ್ದು, ಲಸಿಕಾ ಅಭಿಯಾನದಲ್ಲಿ ರೈತರಿಗೆ ರೋಗದ ಬಗ್ಗೆ ಅರಿವು ಮೂಡಿಸಲು ಪೋಸ್ಟರ್‌, ಕರಪತ್ರಗಳನ್ನು ಈಗಾಗಲೇ ಜಿಲ್ಲೆಯ ಪ್ರತಿ ಹಳ್ಳಿಗೆ ಹಾಲು ಉತ್ಪಾದಕ ಸಹಕಾರ ಸಂಘಗಳ ಮೂಲಕ ಹಾಗೂ ಪಶು ಆಸ್ಪತ್ರೆಗಳ ಮೂಲಕ ಪ್ರಚುರಪಡಿಸಲಾಗಿದೆ.

ರಾಸುಗಳಿಗೆ ಲಸಿಕೆ ಹಾಕುವ ಕುರಿತು ಒಂದು ದಿನ ಮೊದಲು ಪ್ರತಿ ಹಳ್ಳಿಯಲ್ಲಿ ಟಾಂಟಾಂ ಹಾಕಿಸಿ ಪ್ರಚಾರ ನಡೆಸಲಾಗುವುದು. ಪ್ರತಿ ಲಸಿಕಾ ತಂಡದ ವಾಹನಕ್ಕೆ ಧ್ವನಿವರ್ಧಕಗಳನ್ನು ಅಳವಡಿಸಿಕೊಂಡಿದ್ದು, ಇವುಗಳ ಮುಖಾಂತರವು ರೈತರಲ್ಲಿ ಪ್ರಚಾರ ನಡೆಸಲಾಗುವುದು, ಜಿಲ್ಲೆಯ ಬಾಗೇಪಲ್ಲಿ 4, ಚಿಕ್ಕಬಳ್ಳಾಪುರ 5, ಚಿಂತಾಮಣಿ 5, ಗೌರಿಬಿದನೂರು 6, ಗುಡಿಬಂಡೆ 2 ಹಾಗೂ ಶಿಡ್ಲಘಟ್ಟ4 ಸೇರಿ ಒಟ್ಟು 26 ತಂಡಗಳನ್ನು ರಚಿಸಲಾಗಿದೆ. ಆರು ತಾಲೂಕುಗಳಲ್ಲಿ 2,014 ಬ್ಲಾಕ್‌ಗಳನ್ನು ಗುರುತಿಸಲಾಗಿದೆ ಎಂದರು. 

ಪ್ರತಿ ದಿನವು ಪ್ರಗತಿ ವರದಿ: ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಡಾ.ಪಾಡುರಂಗಪ್ಪ ಮಾತನಾಡಿ, ಕಳೆದ ಸುತ್ತಿನಂತೆ ಈ ಬಾರಿಯು ಅನ್‌ಲೈನ್‌ ಮೂಲಕ ಪ್ರತಿ ದಿನದ ಲಸಿಕಾ ಪ್ರಗತಿಯನ್ನು ಅಯಾ ತಾಲೂಕುಗಳ ಪಶುಆಸ್ಪತ್ರೆಗಳಲ್ಲಿ ದಾಖಲಿಸಲಾಗುವುದು. ಇದಕ್ಕೆ ಪೂರ್ವಕವಾಗಿ ಎಲ್ಲಾ ಆರು ತಾಲೂಕುಗಳಲ್ಲಿ ಆನ್‌ ಲೈನ್‌ ವಿಲೇಜ್‌ ಮ್ಯಾಪಿಂಗ್‌ ಅನ್ನು ಪೂರ್ಣಗೊಳಿಸಲಾಗಿದೆ ಎಂದರು. ಅಲ್ಲದೇ ಜಿಲ್ಲಾದ್ಯಂತ ಲಸಿಕಾ ಅಭಿಯಾನಕ್ಕೂ ಮೊದಲ ದಿನ ಹಾಗೂ ಲಸಿಕೆ ಹಾಕಿದ 28 ದಿನಗಳ ನಂತರ ಪ್ರತಿ ತಾಲೂಕಿನ ನಿರ್ದಿಷ್ಟ ಗ್ರಾಮಗಳ ರಾಸುಗಳಲ್ಲಿ ರಾಸುಗಳ ಸೀರಂ ಮಾದರಿ ಸಂಗ್ರಹಿಸಿ ಪ್ರಯೋಗ ಶಾಲೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗುವುದು ಎಂದರು. ಜಿಲ್ಲಾ ಪಶು ಪಾಲನಾ ಹಾಗೂ ಪಶು ವೈದ್ಯ ಸೇವಾ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಡಾ.ಪಾಡುರಂಗಪ್ಪ, ಕುಟುಂಬ ಕಲ್ಯಾಣಾಧಿಕಾರಿ ಡಾ. ಬಿ.ಎಂ. ರವಿಶಂಕರ ಇತರರು ಹಾಜರಿದ್ದರು.  

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.