ಪ್ಯಾಕೇಜ್ ಟೆಂಡರ್, ಜಿಎಸ್ಟಿಯಿಂದ ಗುತ್ತಿಗೆದಾರರಿಗೆ ಸಂಕಷ್ಟ
Team Udayavani, Sep 3, 2017, 2:41 PM IST
ಚಿಕ್ಕಬಳ್ಳಾಪುರ: ಗುತ್ತಿಗೆದಾರರನ್ನು ಆರ್ಥಿಕವಾಗಿ ಸಂಕಷ್ಟಕ್ಕೆ ತಳ್ಳುತ್ತಿರುವ ಪ್ಯಾಕೇಜ್ ಟೆಂಡರ್ ಪದ್ಧತಿಯನ್ನು ಕೂಡಲೇ ರದ್ದುಗೊಳಿಸುವಂತೆ ಹಾಗೂ ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿರುವ ಜಿಎಸ್‌ಟಿಯಲ್ಲಿ ಗೊಂದಲ ನಿವಾರಣೆಗೆ ಆಗ್ರಹಿಸಿ ಸೆ.22, 23ರಂದು ಎರಡು ದಿನಗಳ ಕಾಲ
ಬೆಂಗಳೂರಿನಲ್ಲಿ ರಾಜ್ಯ ಗುತ್ತಿಗೆದಾರರ ಮಹಾ ಸಮ್ಮೇಳನ ಸಂಘಟಿಸಲಾಗಿದೆ ಎಂದು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎಚ್.ವಿ.ಚಿಕ್ಕಗೆರಿಗಿರೆಡ್ಡಿ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಕ್ಕೆ ರೈತರು ಯಾವ ರೀತಿ ಅನ್ನದಾತರಾಗಿ ಬೆನ್ನಲುಬಾಗಿ ನಿಂತಿದ್ದಾರೆ. ಅದೇ ರೀತಿ ದೇಶ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಗುತ್ತಿಗೆದಾರರು ಕೂಡ ದೇಶಕ್ಕೆ ಬೆನ್ನಲುಬಾಗಿದ್ದಾರೆ.
ಆದರೆ, ಸರ್ಕಾರಗಳು ಅನುಸರಿಸುತ್ತಿರುವ ಕೆಲ ನೀತಿಗಳು ಗುತ್ತಿಗೆದಾರರಿಗೆ ಕಂಟಕವಾಗಿದ್ದು, ಆರ್ಥಿಕ ಸಂಕಷ್ಟದ ಸುಳಿ ಯಲ್ಲಿ ಸಿಲುಕುವಂತಾಗಿದೆ ಎಂದು ಬೇಸರ ವ್ಯಕ್ತಪಡಸಿದರು.
ದೇಶದ ಬೆಳವಣಿಗೆಯಲ್ಲಿ ಗುತ್ತಿಗೆದಾರರ ಪಾತ್ರ ಅಮೂಲ್ಯ ವಾಗಿದೆ. ರಾಜ್ಯದಲ್ಲಿ ಶೇ.30 ರಿಂದ 40 ರಷ್ಟು ದುಡಿಯುವ ಜನತೆಗೆ ಕೂಲಿ ಕೆಲಸ ನೀಡುತ್ತಿರುವ ಗುತ್ತಿಗೆದಾರರು ಸಹಸ್ರಾರು ಕುಟುಂಬಗಳ ಜೀವನಾಧಾರಕ್ಕೆ ಭದ್ರ ಬುನಾದಿ ಕಲ್ಪಿಸಿದ್ದಾರೆ. ಆದರೆ ಸರ್ಕಾರ ಇತ್ತೀಚಿನ ದಿನಗಳಲ್ಲಿ
ಕಾಮಗಾರಿಗಳನ್ನು ಪ್ಯಾಕೇಜ್ ಟೆಂಡರ್ ಕೆರೆಯುವ ಮೂಲಕ ಗುತ್ತಿಗೆದಾರರಿಗೆ ಕೆಲಸ ಇಲ್ಲದಂತಾಗಿದೆ. ಇದರಿಂದ ಲಕ್ಷಾಂತರ ರೂ. ಬಂಡ ವಾಳ ಹಾಕಿ ಖರೀಸಿರುವ ಯಂತ್ರೋಪಕರಣ
ಗಳಿಗೆ ಕೆಲಸ ಇಲ್ಲದೇ ಬ್ಯಾಂಕಿನಲ್ಲಿ ಮಾಡಿದ ಸಾಲ ತೀರಿಸಲಾಗದೇ ಇತ್ತ ಕೂಲಿ ಕಾರ್ಮಿಕರಿಗೂ ಸಮರ್ಪಕ ಕೆಲಸ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಸಮ್ಮೇಳನಕ್ಕೆ ಸಿಎಂ ಚಾಲನೆ: ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಶೀಷ್ ಮಹಲ್‌ನಲ್ಲಿ ಸೆ.22, 23 ರಂದು ನಡೆಯಲಿರುವ 2 ದಿನಗಳ ಗುತ್ತಿಗಾರರ ಮಹಾ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಲೋಕೋಪಯೋಗಿ ಸಚಿವ ಡಾ.
ಎಚ್.ಸಿ. ಮಹಾದೇವಪ್ಪ, ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ಸೇರಿದಂತೆ ರಾಜ್ಯ ಸಚಿವ ಸಂಪುಟದ ಅನೇಕ ಸಚಿವರು ಭಾಗವಹಿಸಲಿದ್ದಾರೆ. ಎರಡನೇ ದಿನ ನಡೆಯುವ ಸಮ್ಮೇಳನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ. ಕೇಂದ್ರ
ಸಚಿವರಾದ ಡಿ.ವಿ.ಸದಾನಂದಗೌಡ, ಅನಂತಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ. ಸಮ್ಮೇಳನದ ಭಾಗವಾಗಿ ಗುತ್ತಿಗೆದಾರರಿಗೆ ವಿವಿಧ ವಿಷಯಗಳ ಕುರಿತು ನುರಿತ ತಜ್ಞರಿಂದ ವಿಚಾರ ಸಂಕಿರಣ ಹಾಗೂ ಸಂವಾದ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗಿದ್ದು, ಸುಮಾರು ಲಕ್ಷ ಗುತ್ತಿಗೆದಾರರು ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಸಮ್ಮೇಳನದ ಹಕ್ಕೊತ್ತಾಯಗಳೇನು?: ರಾಜ್ಯ ಸರ್ಕಾರ ಕಾಮಗಾರಿ ಶುಲ್ಕಗಳನ್ನು ಪ್ರತ್ಯೇಕವಾಗಿ ದರಪಟ್ಟಿಯಲ್ಲಿ ಸೇರ್ಪಡೆಗೊಳಿಸಬೇಕು. ಪ್ಯಾಕೇಜ್ ಟೆಂಡರ್ ಪದ್ಧತಿಯನ್ನು ರದ್ದುಗೊಳಿಸಬೇಕು, ಇ-ಟೆಂಡರ್ ಪದ್ಧತಿಯಲ್ಲಿ ಇನ್ನಷ್ಟು ಸುಧಾರಣೆ ಹಾಗೂ ಪಾರದರ್ಶಕತೆಯನ್ನು ರೂಪಿಸ ಬೇಕು, ಜಿಎಸ್‌ಟಿ ಗೊಂದಲಗಳ ನಿವಾರಣೆಗೆ ಜತೆಗೆ ಗುತ್ತಿಗೆದಾರರಿಗೆ ಜಿಎಸ್‌ಟಿಯಿಂದ ವಿನಾಯಿತಿ ನೀಡಬೇಕು
ಎಂಬುದು ಸೇರಿದಂತೆ ಗುತ್ತಿಗೆದಾರರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಮಾರ್ಗೋಪಾಯಗಳನ್ನು ಕಂಡುಕೊಳ್ಳು ವುದರ ಜತೆಗೆ ಗುತ್ತಿಗೆದಾರರ ಸಂಘಟನೆಯನ್ನು ಬಲಪಡಿಸುವ ಉದ್ದೇಶ ದಿಂದ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಎರಡು ದಿನಗಳ ಗುತ್ತಿಗೆದಾರರ ಮಹಾ ಸಮ್ಮೇಳನ
ಆಯೋಜಿಸಲಾಗಿದೆ ಎಂದು ಎಚ್.ವಿ.ಚಿಕ್ಕಗೆರಿಗಿರೆಡ್ಡಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಗುತ್ತಿಗೆದಾರರ ಸಂಘದ ಉಪ ಕಾರ್ಯದರ್ಶಿ ಕೆ.ಗೋಪಿನಾಥ್, ಖಜಾಂಚಿ ಹೆಚ್.ಮುನೇಗೌಡ, ಪದಾಧಿಕಾರಿಗಳಾದ ಜೆ.ಕೆ. ಚಂದ್ರಶೇಖರರೆಡ್ಡಿ, ಅಡ್ಡಗಲ್ ಶ್ರೀಧರ್, ಮುರಳಿಬಾಬು, ಕಾಳಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.