15 ದಿನದೊಳಗೆ ಜನರ ಸಮಸ್ಯೆ ಪರಿಹಾರ; ಜಿಲ್ಲಾಧಿಕಾರಿ ವೆಂಕಟ್‌ರಾಜಾ
ಅರ್ಜಿಗಳನ್ನು ಇಲಾಖೆ ಅಧಿಕಾರಿಗಳು ಕಾಲಾವಕಾಶದಲ್ಲಿ ಪರಿಹಾರ ನೀಡಲಿದ್ದಾರೆ.
Team Udayavani, May 28, 2022, 5:29 PM IST
ಶ್ರೀನಿವಾಸಪುರ: ಜನರ ಬಳಿಗೆ ಅಡಳಿತ ಕೊಂಡೊಯ್ಯುವ ಮೂಲಕ ಸ್ಥಳೀಯವಾಗಿ ಆಯಾ ಇಲಾಖೆ ಅಧಿಕಾರಿಗಳು ಹಾಜರಿದ್ದು, ಸಮಸ್ಯೆ ಪರಿಹರಿಸುವ ಮಹತ್ವರ ಕಾರ್ಯಕ್ರಮವೇ ಗ್ರಾಮ ವಾಸ್ತವ್ಯವಾಗಿದೆ. ಗ್ರಾಮದಲ್ಲಿ ಬೇಡಿಕೆ, ಸಮಸ್ಯೆ ಪರಿಹಾರವನ್ನು 15 ದಿನದೊಳಗೆ ಈಡೇರಿಸುವುದಾಗಿ ಕೋಲಾರ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಭರವಸೆ ನೀಡಿದರು.
ತಾಲೂಕಿನ ಸೋಮಯಾಜಲಪಲ್ಲಿ ಗ್ರಾಪಂ ವ್ಯಾಪ್ತಿಯ ನೆರ್ನಹಳ್ಳಿ ಗ್ರಾಮದಲ್ಲಿ ಕಂದಾಯ ಇಲಾಖೆ, ಜಿಲ್ಲಾಧಿಕಾರಿಗಳು ಹಾಗು ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ, ತಮ್ಮ ತಮ್ಮ ಕುಂದುಕೊರತೆಗಳನ್ನು ಆಲಿಸಿ ಬಗೆಹರಿಸಲಿದ್ದಾರೆ.
ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಾರ್ವಜನಿಕ ರುದ್ರಭೂಮಿಗೆ ರಸ್ತೆ, ಅಂಗನವಾಡಿ ಕಟ್ಟಡ ನಿರ್ಮಾಣ, ವಿದ್ಯುತ್ ಪರಿವರ್ತಕ, ಚರಂಡಿ ಸೌಲಭ್ಯ ಇತ್ಯಾದಿಗಳ ಬಗ್ಗೆ ನನ್ನ ಗಮನಕ್ಕೆ ಬರಲಾಗಿದೆ. ತಾವು ಹೇಳಿದ ಕೆಲಸಗಳನ್ನು ಕೆಲವು ಒಂದು ವಾರ ಅಥವಾ 15 ದಿನಗಳೊಳಗೆ ಕಾಮಗಾರಿ ಪ್ರಾರಂಭಿಸಲಾಗುವುದು. ಸೋಮವಾರದಿಂದ ಗ್ರಾಮಕ್ಕೆ ಬಸ್ ಬರುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಗ್ರಾಮಗಳಲ್ಲಿ ಮೂಲ ಸೌಲಭ್ಯ ಅಗತ್ಯ: ಗ್ರಾಮಗಳ ಅಭಿವೃದ್ಧಿ ಮತ್ತು ಮೂಲ ಸೌಲಭ್ಯ ಕಲ್ಪಿಸಲು ಸರ್ಕಾರದಿಂದ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕುಡಿಯುವ ನೀರು, ರಸ್ತೆ, ಚರಂಡಿ, ವಸತಿ, ಸ್ವತ್ಛತೆ ಗ್ರಾಮಗಳಲ್ಲಿ ಅಗತ್ಯವಿದೆ. ಹೀಗಾಗಿ ಯಾರಿಗೆ ಸೌಲಭ್ಯಗಳು ಸಿಗುತ್ತಿಲ್ಲವೋ ಅವರು ಅರ್ಜಿ ನೀಡಿದರೆ, ಪರಿಹಾರ ಹುಡಕಲಾಗುತ್ತದೆ ಎಂದರು.
ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಿ: ಮುಖ್ಯವಾಗಿ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಬೇಕಾಗಿದೆ. ಗ್ರಾಮದಲ್ಲಿ ನೀರು ನಿಲ್ಲದಂತೆ ಮಾಡುವುದು, ಚರಂಡಿಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಗ್ರಾಮದಲ್ಲಿ ಪ್ಲಾಸ್ಟಿಕ್ ನಿಷೇಧಕ್ಕಾಗಿ ಜನರು ಜಾಗೃತರಾಗಬೇಕು. ಇದರಿಂದ ಜನರ ಆರೋಗ್ಯಕ್ಕೆ ಸಹಕಾರಿಯಾಗಲಿದೆ. ಪ್ರತಿ ಕುಟುಂಬ, ಪ್ರತಿ ವ್ಯಕ್ತಿ ಗ್ರಾಮವನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಮೂಲಕ ಈ ಗ್ರಾಮ ಜಿಲ್ಲೆಗೆ ಮಾದರಿಯಾಗಬೇಕು ಎಂದು ಹೇಳಿದರು.
ಅರ್ಜಿಗಳನ್ನು ಇಲಾಖೆ ಅಧಿಕಾರಿಗಳು ಕಾಲಾವಕಾಶದಲ್ಲಿ ಪರಿಹಾರ ನೀಡಲಿದ್ದಾರೆ. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ತಮ್ಮ ಇಲಾಖೆಗೆ ಬಂದಿರುವ ಅರ್ಜಿಗಳನ್ನು ತ್ವರಿತಗತವಾಗಿ ಪರಿಶೀಲಿಸಿ, ವಿಲೇವಾರಿ ಮಾಡಬೇಕು ಎಂದು ಹೇಳಿದರು. ತಹಶೀಲ್ದಾರ್ ಶಿರೀನ್ ತಾಜ್, ತಾಪಂ ಇಒ ಎಸ್. ಆನಂದ್, ಸೋಮಯಾಜಲಹಳ್ಳಿ ಗ್ರಾಪಂ ಅಧ್ಯಕ್ಷೆ ವಂದನಾ, ಪಿಡಿಒ ಸುಬ್ರಮಣಿ, ಶಿವಕುಮಾರ್, ಎಂ.ಶ್ರೀನಿವಾಸನ್, ಕೃಷ್ಣಪ್ಪ, ಮಂಜುನಾಥ ರೆಡ್ಡಿ, ಜಗದೀಶ್, ಮುನಿರಾಜು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಬೇಕಾಗಿದೆ. ಗ್ರಾಮದಲ್ಲಿ ನೀರು ನಿಲ್ಲದಂತೆ ಮಾಡುವುದು, ಚರಂಡಿಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಗ್ರಾಮದಲ್ಲಿ ಪ್ಲಾಸ್ಟಿಕ್ ನಿಷೇಧಕ್ಕಾಗಿ ಜನರು ಜಾಗೃತರಾಗಬೇಕು. ಇದರಿಂದ ಜನರ ಆರೋಗ್ಯಕ್ಕೆ ಸಹಕಾರಿಯಾಗಲಿದೆ. ಪ್ರತಿ ಕುಟುಂಬ, ಪ್ರತಿ ವ್ಯಕ್ತಿ ಗ್ರಾಮವನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಮೂಲಕ ಈ ಗ್ರಾಮ ಜಿಲ್ಲೆಗೆ ಮಾದರಿಯಾಗಬೇಕು.
●ವೆಂಕಟ್‌ರಾಜಾ, ಕೋಲಾರ ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.