Permanent irrigation: ಜಿಲ್ಲೆಯಲ್ಲಿ ಮತ್ತೆ ಶಾಶ್ವತ ನೀರಾವರಿ ಕೂಗು

Team Udayavani, Nov 20, 2023, 2:59 PM IST

Permanent irrigation: ಜಿಲ್ಲೆಯಲ್ಲಿ ಮತ್ತೆ ಶಾಶ್ವತ ನೀರಾವರಿ ಕೂಗು

ಚಿಕ್ಕಬಳ್ಳಾಪುರ: ತೀವ್ರ ಮಳೆ ಬೆಳೆ ಕೊರತೆಯಿಂದಾಗಿ ಬರಗಾಲ ಆವರಿಸಿರುವ ಬೆನ್ನಲೇ ಜಿಲ್ಲೆಯಲ್ಲಿ ಮತ್ತೆ ಶಾಶ್ವತ ನೀರಾವರಿ ಹೋರಾಟದ ಕೂಗು ಕೇಳಲಾರಂಭಿಸಿದ್ದು, ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಬರದ ಜಿಲ್ಲೆಯ ನೀರಿನ ಬವಣೆ ನೀಗಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳ ಅಧಿವೇಶನದಲ್ಲಿ ಒಗ್ಗಟ್ಟಿನಿಂದ ಧ್ವನಿ ಎತ್ತುವಂತೆ ಒತ್ತಡ ತರಲು ಶಾಶ್ವತ ನೀರಾವರಿ ಹೋರಾಟ ಸಮಿತಿ ವೇದಿಕೆ ಸಜ್ಜುಗೊಳಿಸುತ್ತಿದೆ.

ಹೌದು, ಜಿಲ್ಲೆಯ ಶಾಶ್ವತ ನೀರಾವರಿ ಹೋರಾಟ ಸಮಿತಿ, ಜಿಲ್ಲೆಗೆ ನಿರಂತರವಾಗಿ ನೀರಾವರಿ ವಿಚಾರದಲ್ಲಿ ಆಗುತ್ತಿರುವ ಆನ್ಯಾಯವನ್ನು ಪ್ರಬಲವಾಗಿ ಖಂಡಿಸಿ ಹೋರಾಟವನ್ನು ಇನ್ನಷ್ಟು ಚುರುಕುಗೊಳಿಸಲು ಮುಂದಾಗಿದ್ದು, ಇದೇ ತಿಂಗಳ ನ.25ಕ್ಕೆ ಜಿಲ್ಲಾ ಕೇಂದ್ರದಲ್ಲಿ ಮೂರು ಜಿಲ್ಲೆಗಳ ಸಂಸದರ, ಸಚಿವರ, ಶಾಸಕರನ್ನು ಒಳಗೊಂಡಂತೆ ನೀರಾವರಿ ಹೋರಾಟಗಾರರ, ಸಂಘ, ಸಂಸ್ಥೆಗಳ ಬೃಹತ್‌ ದುಂಡು ಮೇಜಿನ ಸಭೆ ಆಯೋಜಿಸಿದೆ.

ಹೋರಾಟ ಸಕ್ರಿಯಗೊಳಿಸಲು ನಿರ್ಧಾರ: ನೂರಾರು ದಿನಗಳ ಕಾಲ ಅನಿರ್ದಿಷ್ಟಾವಧಿ ಧರಣಿ, ಪಾದಯಾತ್ರೆ, ಬೆಂಗಳೂರಿಗೆ ಐತಿಹಾಸಕ ಟ್ರ್ಯಾಕ್ಟರ್‌ ರ್ಯಾಲಿ ಸೇರಿದಂತೆ ಹಲವು ರೀತಿಯ ಸಂಘರ್ಷತ್ಮಾಕ ಹೋರಾಟಗಳ ಮೂಲಕ ಸರ್ಕಾರದ ಮೇಲೆ ನಿರಂತರವಾಗಿ ಜಿಲ್ಲೆಯ ನೀರಿನ ಬವಣೆಯನ್ನು ಶಾಶ್ವತವಾಗಿ ನೀಗಿಸಲು ಪಣತೊಟ್ಟು ಹೋರಾಡುತ್ತಿರುವ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ, ಬೆಳಗಾವಿ ಅಧಿವೇಶನಕ್ಕೆ ಸರ್ಕಾರ ಸಿದ್ಧತೆ ನಡೆಸುತ್ತಿರುವ ಬೆನ್ನಲೇ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಂಸದರು, ಶಾಸಕರನ್ನು ಒಂದೇ ವೇದಿಕೆಯಡಿ ಕರೆ ತಂದು ಜಿಲ್ಲೆಗಳ ಮುಂದಿನ ನೀರಿನ ಭವಿಷ್ಯದ ಬಗ್ಗೆ ಚಿಂತನ, ಮಂಥನ ನಡೆಸಲು ರೂಪರೇಷ ಸಿದ್ಧ ಪಡಿಸಿ ದುಂಡು ಮೇಜಿನ ಸಭೆಗೆ ಭರದ ಸಿದ್ದತೆ ನಡೆಸುತ್ತಿದೆ. ಆ ಮೂಲಕ ಮತ್ತೆ ಮೂರು ಜಿಲ್ಲೆಗಳನ್ನು ಕೇಂದ್ರೀಕರಿಸಿಕೊಂಡು ಭವಿಷ್ಯದ ದಿನಗಳಲ್ಲಿ ಸರ್ಕಾರದ ಮೇಲೆ ಶಾಶ್ವತ ನೀರಾವರಿ ಯೋಜನೆಗಳ ಜಾರಿಗಾಗಿ ಆಗ್ರಹಿಸಿ ಹೋರಾಟವನ್ನು ಸಕ್ರಿಯಗೊಳಿಸಲು ಹೋರಾಟ ಸಮಿತಿ ನಿರ್ಧರಿಸಿದೆ.

ದುಂಡು ಮೇಜಿನ ಸಭೆ ಅಜೆಂಡಾ ಏನು?: ಮುಖ್ಯವಾಗಿ ಜಿಲ್ಲೆಗೆ ಶಾಶ್ವತವಾದ ನೀರಾವರಿ ಕಲ್ಪಿಸಬೇಕು, ಕುಡಿಯುವ ನೀರಿನ ಜತೆಗೆ ಕೃಷಿಗೆ ನೀರಾವರಿ ಕಲ್ಪಿಸಬೇಕು, ಈಗಾಗಲೇ ಅಂತರ್ಜಲ ವೃದ್ಧಿ ಹೆಸರಲ್ಲಿ ಜಿಲ್ಲೆಯ ಕೆರೆಗಳಿಗೆ ಹರಿಸುತ್ತಿರುವ ಹೆಬ್ಟಾಳ, ನಾಗವಾರ ಸಂಸ್ಕರಿತ ತ್ಯಾಜ್ಯ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಿಸಿ ಹರಿಸಬೇಕು. ಆಂಧ್ರದ ಗಡಿಗೆ ಹರಿದು ಬಂದಿರುವ ಕೃಷ್ಣಾ ನದಿ ನೀರನ್ನು ದಶಕಗಳಿಂದ ಬರಗಾಲಕ್ಕೆ ತುತ್ತಾಗಿರುವ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹರಿಸಬೇಕು, ಜನರಿಗೆ ಶುದ್ಧ ಕುಡಿಯುವ ನೀರಿನ ಖಾತ್ರಿ ಕೊಡುವ ದಿಕ್ಕಿನಲ್ಲಿ ರಾಜ್ಯ ಸರ್ಕಾರ ಕೂಡಲೇ ಮುಂದಾಗಿ ಈ ಭಾಗದ ಶಾಶ್ವತವಾಗಿ ಉಳಿದಿರುವ ನೀರಿನ ಬವಣೆಯನ್ನು ನೀಗಿಸುವ ನಿಟ್ಟಿನಲ್ಲಿ ಸರ್ಕಾರದ ಮೇಲೆ ಮೂರು ಜಿಲ್ಲೆಗಳ ಶಾಸಕರು, ಸಂಸದರು, ಉಸ್ತುವಾರಿ ಸಚಿವರು ಒತ್ತಡ ತರಬೇಕಾಗಿದೆ.

ನ.25ಕ್ಕೆ ಶಾಶ್ವತ ನೀರಾವರಿ ದಂಡು ಮೇಜಿನ ಸಭೆ:

ದಶಕಗಳಿಂದ ಜಿಲ್ಲೆಗೆ ಶಾಶ್ವತ ನೀರಾವರಿ ಕಲ್ಪಿಸಬೇಕೆಂಬ ಮಹತ್ವಕಾಂಕ್ಷೆಯನ್ನು ಹೊತ್ತು ಹೋರಾಟ ನಡೆಸುತ್ತಿರುವ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಇದೀಗ ಮತ್ತೆ ನೀರಾವರಿ ಹೋರಾಟವನ್ನು ಇನ್ನಷ್ಟು ಚುರುಕುಗೊಳಿಸಲು ನ.25 ರಂದು ಶನಿವಾರ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳನ್ನೊಳಗೊಂಡಂತೆ ಶಾಶ್ವತ ನೀರಾವರಿ ದುಂಡು ಮೇಜಿನ ಸಭೆಯಲ್ಲಿ ಚಿಕ್ಕಬಳ್ಳಾಪುರ ನಗರದ ಕೆಇಬಿ ಸಮುದಾಯ ಭವನದಲ್ಲಿ ಆಯೋಜಿಸಿದೆ. ದಂಡು ಮೇಜಿನ ಸಭೆಗೆ ಮೂರು ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಶಾಸಕರಿಗೆ, ಸಂಸದರಿಗೂ ಮುಕ್ತವಾಗಿ ಈಗಾಗಲೇ ಶಾಶ್ವತ ನೀರಾವರಿ ಹೋರಾಟ ಸಮಿತಿ ಆಹ್ವಾನ ನೀಡಿದೆ. ಅಲ್ಲದೇ ಶಾಶ್ವತ ನೀರಾವರಿ ಹೋರಾಟದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಎಲ್ಲಾ ಕನ್ನಡಪರ, ದಲಿತಪರ, ರೈತಪರ ಸಂಘಟನೆ ಗಳಿಗೆ, ಯುವ ಶಕ್ತಿ ಪದಾಧಿಕಾರಿಗಳಿಗೆ, ಮಹಿಳಾ ಸಂಘಟನೆಗಳಿಗೆ ಹೋರಾಟ ಸಮಿತಿ ಆಹ್ವಾನ ನೀಡಿದೆ.

ಶಾಶ್ವತ ನೀರಾವರಿ ಹೋರಾಟ ಸಮಿತಿ ಆಂಜನೇಯರೆಡ್ಡಿ ಹೇಳಿದ್ದೇನು?:

ಜಿಲ್ಲೆಯು ದಶಕಗಳಿಂದ ಶಾಶ್ವತ ನೀರಾವರಿ ಯೋಜನೆಗಳ ಜಾರಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿದೆ. ಇದರ ಮಧ್ಯೆ ಸರ್ಕಾರ ಅಪಾಯಕಾರಿ ಎಚ್‌.ಎನ್‌. ವ್ಯಾಲಿ ನೀರನ್ನು ಮೂರನೇ ಹಂತದಡಿ ಶುದ್ಧೀಕರಣಗೊಳಿಸಿದೇ ಜಿಲ್ಲೆಯ ಕೆರೆಗಳಿಗೆ ತುಂಬಿಸುವ ಅವೈಜ್ಞಾನಿಕ ನಿರ್ಧಾರ ಕೈಗೊಂಡಿದೆ. ಬಯಲು ಸೀಮೆ ಜಿಲ್ಲೆಗಳಾದ ಕೋಲಾರ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಜಿಲ್ಲೆಗಳಿಗೆ ಶುದ್ಧ ನೀರಿನ ಖಾತ್ರಿ ಇಲ್ಲವಾಗಿದೆ. ಆದ್ದರಿಂದ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಮೂರು ಜಿಲ್ಲೆಗಳ ಚುನಾಯಿತ ಜನಪ್ರತಿನಿಧಿಗಳಿಗೆ ಜಿಲ್ಲೆಗಳ ನೀರಿನ ಬವಣೆ ಬಗ್ಗೆ ಮನವರಿಕೆ ಮಾಡಿಕೊಡುವ ಜೊತೆಗೆ ನೀರಾವರಿ ಯೋಜನೆಗಳ ಸಾಧ್ಯತೆಗಳ ಕುರಿತು ಹಾಗೂ ಹೆಬ್ಟಾಳ ಹಾಗೂ ನಾಗವಾರ ಏತ ನೀರಾವರಿ ಯೋಜನೆಯ ಸಾಧಕಭಾದಕಗಳ ಬಗ್ಗೆ ಮುಂದಿನ ಜಿಲ್ಲೆಗಳ ನೀರಿನ ಬವಣೆ ಕುರಿತು ಅರಿವು ಮೂಡಿಸಿ, 3 ಜಿಲ್ಲೆಗಳಿಗೆ ಸಮಗ್ರ ನೀರಾವರಿ ಒದಗಿಸುವ ನಿಟ್ಟಿನಲ್ಲಿ ಹೋರಾಟ ಸಮಿತಿ ಹಲವು ವಿಚಾರಗಳನ್ನು ದಾಖಲೆಗಳ ಸಮೇತ ಚುನಾಯಿತ ಜನಪ್ರತಿನಿಧಿಗಳ ಮುಂದೆ ಶಾಶ್ವತ ನೀರಾವರಿ ದುಂಡು ಮೇಜಿನ ಸಭೆಯಲ್ಲಿಟ್ಟು, ಈ ಭಾಗಕ್ಕೆ ಶಾಶ್ವತ ನೀರಾವರಿ ಒದಗಿಸಲು ಒತ್ತಾಯಸಲು ದಂಡು ಮೇಜಿನ ಸಭೆಯನ್ನು ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ನೀರಾವರಿ ಹೋರಾಟವನ್ನು ಇನ್ನಷ್ಟು ಪ್ರಖರವಾಗಿ ನಡೆಸಲು ದಂಡು ಮೇಜಿನ ಸಭೆಯಲ್ಲಿ ತಿರ್ಮಾನ ಕೈಗೊಳ್ಳಲಾಗುವುದೆಂದು ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಆರ್‌.ಆಂಜನೇಯರೆಡ್ಡಿ ಉದಯವಾಣಿಗೆ ತಿಳಿಸಿದರು.

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.