ಜಾಗೃತಿಯಿಂದ ಯೋಜನೆ ಫಲಪ್ರದ
Team Udayavani, Dec 25, 2019, 3:00 AM IST
ಚಿಕ್ಕಬಳ್ಳಾಪುರ: ಸರ್ಕಾರಗಳು, ಬಡವರ ಹಾಗೂ ರೈತಾಪಿ ಕೂಲಿಕಾರರ ಕಲ್ಯಾಣಕ್ಕಾಗಿ ಕೈಗೊಳ್ಳುವ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಯೋಜನೆಗಳ ಬಗ್ಗೆ ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಅರಿವು ಮೂಡಿಸಿದಾಗ ಮಾತ್ರ ಯೋಜನೆಗಳ ಗುರಿ ಫಲಪ್ರದವಾಗುತ್ತದೆ ಎಂದು ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ತಿಳಿಸಿದರು. ನಗರದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಮಂಗಳವಾರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿದ್ದ ರಾಜ್ಯ ಸರ್ಕಾರದ 100 ದಿನಗಳ ವಿವಿಧ ಜನಪರ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸವಲತ್ತು ಸಿಗಲಿ: ಸರ್ಕಾರಗಳು ವಿಶೇಷವಾಗಿ ಕೃಷಿ, ಕೂಲಿ ಕಾರ್ಮಿಕರ, ರೈತರ ಹಾಗೂ ವಿದ್ಯಾರ್ಥಿ, ಯುವ ಜನಾಂಗದ ಮತ್ತು ಮಹಿಳಾ ಸಬಲೀಕರಣದ ದೃಷ್ಟಿ ಇಟ್ಟುಕೊಂಡು ರೂಪಿಸಿ ಅನುಷ್ಠಾನಗೊಳಿಸುವ ಕಾರ್ಯಕ್ರಮಗಳನ್ನು ಹೆಚ್ಚು ಪ್ರಚುರಪಡಿಸಿದಷ್ಟು ಜನ ಸಾಮಾನ್ಯರಿಗೆ ಸರ್ಕಾರದ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗುತ್ತದೆ. ಕಟ್ಟಕಡೆಯ ವ್ಯಕ್ತಿಗೂ ಸಹ ಸರ್ಕಾರದ ಸೌಲಭ್ಯಗಳು ಸುಲಭವಾಗಿ ದೊರೆಯಬೇಕು ಎಂದರು. ಛಾಯಾಚಿತ್ರಗಳ ಪ್ರದರ್ಶನ ಜನ ಸಾಮಾನ್ಯರ ಮೇಲೆ ಹಾಗೂ ವಿದ್ಯಾರ್ಥಿ ಯವ ಸಮೂಹದ ಮೇಲೆ ವಿಶೇಷ ಪರಿಣಾಮ ಬೀರುತ್ತದೆ ಎಂದರು.
ಸರ್ಕಾರದ ಯೋಜನೆಗಳ ಮಾಹಿತಿ: ಛಾಯಾಚಿತ್ರ ಪ್ರದರ್ಶನದಲ್ಲಿ ವಿಶೇಷವಾಗಿ ರಾಜ್ಯ ಸರ್ಕಾರವು 100 ದಿನಗಳಲ್ಲಿ ನೆರವೇರಿಸಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರದ ಜೊತೆಗೆ ರಾಜ್ಯದ ಕೊಡುಗೆ, ಕಾರ್ಮಿಕ ಇಲಾಖೆ ಸಾಧನೆ, ಮೀನುಗಾರರ ಸಾಲಮನ್ನಾ ಮಾಡಿರುವುದು, ಕೈಗಾರಿಕೆಗಳಿಗೆ ಉತ್ತೇಜನ ನೀಡಿರುವುದು, ಪ್ರವಾಸೋದ್ಯಮಕ್ಕೆ ಉತ್ತೇಜನ, ಕಲ್ಯಾಣ ಕರ್ನಾಟಕ ಪರ್ವಕ್ಕೆ ಚಾಲನೆ ನೀಡಿರುವುದು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಾಧನೆ, ಸಂಕಷ್ಟಕ್ಕೊಳಗಾಗಿರುವ ನೇಕಾರರ ಆರ್ಥಿಕ ಸಬಲೀಕರಣಕ್ಕಾಗಿ ಸಾಲಮನ್ನಾ, ಐಟಿ-ಬಿಟಿ ಅಭಿವೃದ್ಧಿಗೆ ಆವಿಷ್ಕಾರ ಪ್ರಾಧಿಕಾರದ ಗಣನೀಯ ಸಾಧನೆ, ಪ್ರವಾಹ ಸಂತ್ರಸ್ತರ ಸ್ಪಂದನೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಿಂದ ಶಿಕ್ಷಕರ ವೃತ್ತಿಪರ ಕೌಶಲಗಳನ್ನು ಹೆಚ್ಚಿಸಲು ಗುರು ಚೇತನ ತರಬೇತಿ.
10 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಕ್ಷೀರಭಾಗ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಅತಿವೃಷ್ಟಿಯಿಂದ ತತ್ತರಿಸಿದ ರಾಜ್ಯದ 103 ಪ್ರವಾಹ ಪೀಡಿತ ತಾಲೂಕುಗಳಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ 1577 ಕೋಟಿ ರೂ. ವೆಚ್ಚ, ವಸತಿ ಇಲಾಖೆ ವತಿಯಿಂದ ಪ್ರಸಕ್ತ ಹಣಕಾಸು ವರ್ಷದಲ್ಲಿ 1.50 ಲಕ್ಷ ಮನೆಗಳ ನಿರ್ಮಾಣದ ಗುರಿ ಈವರೆಗೆ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ 5021 ಮನೆಗಳಿಗೆ ಅನುಮೋದನೆ ನೀಡಿರುವ ಬಗ್ಗೆ ಛಾಯಾಚಿತ್ರ ಪ್ರದರ್ಶನದಲ್ಲಿ ಮೂಡಿ ಬಂದಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿಪಂ ಸಿಇಒ ಬಿ. ಫೌಝೀಯಾ ತರುನ್ನುಮ್, ಕೆಎಸ್‌ಆರ್‌ಟಿಸಿಯ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜು, ಕೆಎಸ್‌ಆರ್‌ಟಿಸಿ ಸಂಚಲನಾಧಿಕಾರಿ ಮಂಜುನಾಥ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಎಂ.ಜುಂಜಣ್ಣ, ವಾರ್ತಾ ಸಹಾಯಕಿ ಸಿ.ಮೈನಾಶ್ರೀ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಾಳೆವರೆಗೂ ಛಾಯಾಚಿತ್ರ ಪ್ರದರ್ಶನ: ರಾಜ್ಯ ಸರ್ಕಾರವು 100 ದಿನಗಳನ್ನು ಪೂರೈಸಿರುವ ಅವಧಿಯಲ್ಲಿ ಕೈಗೊಂಡ ವಿವಿಧ ಜನಪರ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ನೆರೆ ಪ್ರವಾಹದ ಸಂದರ್ಭದಲ್ಲಿ ಕೈಗೊಂಡ ಪರಿಹಾರ ಕಾರ್ಯಗಳ ಕುರಿತ ಛಾಯಾಚಿತ್ರ ಪ್ರದರ್ಶನವನ್ನು ಮಂಗಳವಾರದಿಂದ ಗುರುವಾರದವರೆಗೂ ಏರ್ಪಡಿಸಿದೆ. ರಾಜ್ಯ ಸರ್ಕಾರದ ಸಾಧನೆ ಬಿಂಬಿಸುವ ಛಾಯಾಚಿತ್ರ ಪ್ರದರ್ಶನವನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಜಿಲ್ಲೆಯ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಛಾಯಾಚಿತ್ರಗಳನ್ನು ವೀಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
Gudibande: ಹೆಸರಿಗಷ್ಟೇ ಬಸ್ ನಿಲ್ದಾಣ; ಬಸ್‌ಗಳೇ ಬರಲ್ಲ
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ಹೊಸ ಸೇರ್ಪಡೆ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.