ನಂದಿಬೆಟ್ಟದಲ್ಲಿ ಜೂ.5ರಿಂದ ಪ್ಲಾಸ್ಟಿಕ್ ನಿಷೇಧ
Team Udayavani, May 31, 2018, 6:30 AM IST
ಚಿಕ್ಕಬಳ್ಳಾಪುರ: ಬರುವ ಜೂನ್ 5, ವಿಶ್ವ ಪರಿಸರ ದಿನದಿಂದ ಜಿಲ್ಲೆಯ ವಿಶ್ವವಿಖ್ಯಾತ ನಂದಿಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಜಿಲ್ಲಾಡಳಿತ ಮುಂದಾಗಿದೆ. ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗಿರಿಧಾಮದ ಪ್ರಾಕೃತಿಕ ಸೌಂದರ್ಯಕ್ಕೆ ಘಾಸಿ ಮಾಡುತ್ತಿರುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವುದು ಇದರ ಮುಖ್ಯ ಉದ್ದೇಶ.
ಪ್ರೇಮಿಗಳ ಪಾಲಿನ ನೆಚ್ಚಿನ ತಾಣ, ಪರಿಸರ ಪ್ರಿಯರ ಅಚ್ಚುಮೆಚ್ಚಿನ ತಾಣವಾದ ನಂದಿ ಗಿರಿಧಾಮಕ್ಕೆ ಕಾನೂನಾತ್ಮಕವಾಗಿ ವಿಶೇಷ ಸ್ಥಾನಮಾನ ಕಲ್ಪಿಸುವ ಮೂಲಕ ಗಿರಿಧಾಮದ ಪ್ರಾಕೃತಿಕ ಸೊಬಗನ್ನು ಭವಿಷ್ಯದ ಪೀಳಿಗೆಗೆ ಉಳಿಸಬೇಕೆಂಬ ನಿಟ್ಟಿನಲ್ಲಿ ಪಣತೊಟ್ಟು ಖ್ಯಾತ ಪರಿಸರವಾದಿ ಡಾ. ಯಲ್ಲಪ್ಪರೆಡ್ಡಿ ನೇತೃತ್ವದಲ್ಲಿ ಪರಿಸರ ಚಿಂತಕರ ತಂಡ ಕಾನೂನು ಸಮರಕ್ಕೆ ಸಜ್ಜಾಗುತ್ತಿದೆ. ಇದರ ಬೆನ್ನಲ್ಲೇ ಜಿಲ್ಲಾಡಳಿತ ಕೂಡ ಇಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ಮುಂದಾಗಿದೆ. ಸರಿ ಸುಮಾರು 90 ಎಕರೆ ವಿಸ್ತೀಣದಲ್ಲಿರುವ ನಂದಿಗಿರಿಧಾಮ, ಐತಿಹಾಸಿಕವಾಗಿ ಅನೇಕ ವೈಶಿಷ್ಟéತೆಯ ಕುರುಹಗಳಿಗೆ ಸಾಕ್ಷಿಯಾಗಿ ನಿಂತಿದ್ದು, ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಪೂರಕವಾಗುವ ನಿಟ್ಟಿನಲ್ಲಿ ಈಗ ಜಿಲ್ಲಾಡಳಿತ ಇಕೋ ಟೂರಿಸಂನ್ನು ಬಲವರ್ಧನೆಗೊಳಿಸುವ ದಿಸೆಯಲ್ಲಿ ದಿಟ್ಟ ಹೆಜ್ಜೆ ಇಡುತ್ತಿದೆ.
ಸಮುದ್ರಮಟ್ಟದಿಂದ ಬರೋಬ್ಬರಿ 4,851 ಅಡಿಗಳಷ್ಟು ಎತ್ತರಕ್ಕೆ, ಏಕಶಿಲೆಯಿಂದ ರೂಪುಗೊಂಡಿರುವ ನಂದಿಬೆಟ್ಟದ ಸೌಂದರ್ಯಕ್ಕೆ ಧಕ್ಕೆ ತರುವ ಕೆಲಸಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಗಿರಿಧಾಮದ ಸುತ್ತ ನಡೆಯುತ್ತಿರುವ ಅಕ್ರಮ
ಗಣಿಗಾರಿಕೆ, ಖಾಸಗಿ ರೆಸಾರ್ಟ್‌ಗಳ ಹಾವಳಿಯಿಂದ ಹಾಗೂ ಪ್ರವಾಸಿಗರು ಯಾವುದೇ ಅಡೆತಡೆ ಇಲ್ಲದೆ ಬಳಸುತ್ತಿರುವ ಪ್ಲಾಸ್ಟಿಕ್ ಕೈ ಚೀಲಗಳು, ತಿಂದು ಬಿಸಾಡಿದ ಆಹಾರದ ಪ್ಯಾಕೇಟ್‌ಗಳು, ನೀರಿನ ಬಾಟಲುಗಳಿಂದ ಗಿರಿಧಾಮದಲ್ಲಿ ಎತ್ತ ನೋಡಿದರೂ ಕಸದ ರಾಶಿಗಳು ಬಿದ್ದಿವೆ.
ಇದರಿಂದಾಗಿ ಕಸದ ಸಮಸ್ಯೆ ಬೆಟ್ಟದ ಮೇಲೆ ಬೃಹದಾಕಾರವಾಗಿ ಬೆಳೆದು, ಗಿರಿಧಾಮದ ಸೌಂದರ್ಯಕ್ಕೆ ಕಂಟಕವಾಗಿದೆ.
ಗಿರಿಧಾಮ ಸದ್ಬಳಕೆಗಿಂತ ದುರ್ಬಳಕೆಗೆ ಹೆಚ್ಚಾಗಿ ಬಳಕೆಯಾಗುತ್ತಿರುವುದು ಪರಿಸರವಾದಿಗಳ ಆತಂಕಕ್ಕೆ ಕಾರಣವಾಗಿದೆ. ಜೊತೆಗೆ, ಕಸದ ವಿಲೇವಾರಿ ಕೂಡ ಗಿರಿಧಾಮದ ನಿರ್ವಹಣೆಯ ಹೊಣೆ ಹೊತ್ತಿರುವ ತೋಟಗಾರಿಕೆ ಇಲಾಖೆಗೆ ದೊಡ್ಡ ಸವಾಲಾಗುತ್ತಿದೆ. ಹೀಗಾಗಿ, ಗಿರಿಧಾಮದಲ್ಲಿ ಜೂನ್ 5, ವಿಶ್ವ ಪರಿಸರ ದಿನದಿಂದ ಪ್ರವಾಸಿಗರು ಬಳಕೆ ಮಾಡುವ ಎಲ್ಲಾ ರೀತಿಯ ಪ್ಲಾಸ್ಟಿಕ್ ನಿಷೇಧಕ್ಕೆ ಜಿಲ್ಲಾಡಳಿತ ಬಿಗಿ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.
ಈಗಾಗಲೇ ಇದಕ್ಕೆ ಪೂರ್ವ ಸಿದ್ದತೆಗಳನ್ನು ಮಾಡಿ ಕೊಂಡಿರುವ ಜಿಲ್ಲಾಡಳಿತ, ತೋಟಗಾರಿಕಾ ಇಲಾಖೆಯನ್ನು ಸಂಪರ್ಕಿಸಿ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಪ್ರವಾಸಿಗರಲ್ಲಿ ಈಗನಿಂದಲೇ ಅರಿವು ಮೂಡಿಸುವ ಕೆಲಸ ಆರಂಭಿಸಿದೆ.
ಪ್ಲಾಸ್ಟಿಕ್ ವಸ್ತುಗಳ ಬಳಕೆ ಮೇಲೆ ಸಂಪೂರ್ಣ ನಿಷೇಧ ಹೇರಲಾಗುತ್ತಿದೆ. ಪ್ರವಾಸಿಗರು ಪ್ಲಾಸ್ಟಿಕ್ ಬಳಕೆ ಮಾಡುವುದು
ಕಂಡು ಬಂದರೆ ದಂಡ ವಿಧಿಸುವುದು ಮಾತ್ರವಲ್ಲ, ಕಾನೂನುಬದ್ಧವಾಗಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.
– ದೀಪ್ತಿ ಕಾನಡೆ, ಜಿಲ್ಲಾಧಿಕಾರಿ
– ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.