ಕೊಳವೆ ಬಾವಿ ಬಗ್ಗೆ ಮಾಹಿತಿ ನೀಡಿ
Team Udayavani, Jun 25, 2020, 6:22 AM IST
ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರದ ಜಲ ಸಂಪನ್ಮೂಲ ಇಲಾಖೆಯ ಸಣ್ಣ ನೀರಾವರಿ ಅಂಕಿ ಅಂಶಗಳ ಸಮನ್ವಯೀಕರಣ ಯೋಜನೆಯಡಿ ಪ್ರತಿ 5 ವರ್ಷಗಳಿಗೊಮ್ಮೆ ಸಣ್ಣ ನೀರಾವರಿ ಗಣತಿಯನ್ನು ಜಿಲ್ಲಾದ್ಯಂತ ಕೈಗೊಳ್ಳಲಾಗುತ್ತಿದ್ದು ಸಾರ್ವಜನಿಕರು ಹಾಗೂ ರೈತರು ಕೊಳವೆ ಬಾವಿಗಳು, ಅಗೆದ ಬಾವಿಗಳ ಬಗ್ಗೆ ಅಧಿಕಾರಿಗಳಿಗೆ ಸಮರ್ಪಕವಾಗಿ ಮಾಹಿತಿ ನೀಡಿ ಸಹಕರಿಸಬೇಕು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.
ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 6ನೇ ಸಣ್ಣ ನೀರಾವರಿ ಗಣತಿ ಪೂರ್ವ ಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಗಣತಿ ವೇಳೆ ಅಧಿಕಾರಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಗಣತಿ ಮಾಡಲು ಆಯಾ ತಾಲೂಕು ಕೇಂದ್ರಗಳಲ್ಲಿ ತರಬೇತಿ ನೀಡಲು ಕ್ರಮ ಕೈಗೊಳ್ಳಬೇಕೆಂದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶಿವಕುಮಾರ್, ಗಣತಿದಾರರು ಗ್ರಾಮ ಲೆಕ್ಕಾಧಿಕಾರಿಗಳು ರೈತರೊಂದಿಗೆ ವೈಯಕ್ತಿಕ ವಿಚಾರಣೆ, ಯೋಜನಾ ಸ್ಥಳಕ್ಕೆ ಭೇಟಿ ನೀಡಿ ಭೌತಿಕ ಪರಿಶೀಲನೆ ನಡೆಸುವುದರೊಂದಿಗೆ ಪತ್ರಗಳಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತದೆ. ಈ ಗಣತಿಯಲ್ಲಿ ಸಂಗ್ರಹಿಸಲಾದ ಮಾಹಿತಿಯಿಂದ ಅಂತರ್ಜಲ ಪ್ರಮಾಣ ಅಂದಾಜಿಸಬಹುದಾಗಿದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ತಹಶೀಲ್ದಾರ್‌ಗಳಾದ ನಾಗ ಪ್ರಶಾಂತ್, ಅರುಂಧತಿ ಚಿಕ್ಕಬಳ್ಳಾಪುರ ನಗರಸಭೆ ಆಯುಕ್ತರಾದ ಲೋಹಿತ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.