ರೈತರ ಟ್ರ್ಯಾಕ್ಟರ್ ರ್ಯಾಲಿಗೆ ಪೊಲೀಸರ ಬ್ರೇಕ್
Team Udayavani, Jan 27, 2021, 12:29 PM IST
ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಮಂಗಳವಾರ ರೈತಪರ ಹಾಗೂ ಪ್ರಗತಿಪರ ಸಂಘಟನೆಗಳಿಂದ ಜನಗಣ ರಾಜ್ಯೋತ್ಸವ ಟ್ರ್ಯಾಕ್ಟರ್ ರ್ಯಾಲಿಗೆ ಪೊಲೀಸರು ಬ್ರೇಕ್ ಹಾಕಿದ್ದು, ರೈತರು ರಾಷ್ಟ್ರ ಧ್ವಜದೊಂದಿಗೆ ಕಾರ್ ಇನ್ನಿತರೆ ವಾಹನಗಳ ಮೂಲಕ ಫ್ರೀಡಂ ಪಾರ್ಕ್‌ಗೆ ತೆರಳಿದರು.
ಜಿಲ್ಲೆಯಲ್ಲಿ ಬೆಳಗಿನ ಜಾವ ದಟ್ಟವಾದ ಮಂಜು ಮತ್ತು ಚಳಿ ಲೆಕ್ಕಿಸದೆ ರೈತರು ಟ್ರ್ಯಾಕ್ಟರ್‌ಗಳೊಂದಿಗೆ ಬೆಂಗಳೂರಿನತ್ತ ಪ್ರಯಾಣ ಬೆಳೆಸಲು ಸಿದ್ಧತೆ ಮಾಹಿತಿ ಅರಿತ ಪೊಲೀಸರು ತಾಲೂಕು ಕೇಂದ್ರಗಳಲ್ಲಿ ಟ್ರ್ಯಾಕ್ಟರ್‌ಗಳನ್ನು ತಡೆಗಟ್ಟಿ ಬೇರೆ ವಾಹನಗಳ ಮೂಲಕ ಬೆಂಗಳೂರಿಗೆ ತೆರಳಲು ಅವಕಾಶ ಮಾಡಿಕೊಟ್ಟರು.
ಕೃಷಿಗೆ ಮಾರಕವಾಗಿರುವ ಕಾಯ್ದೆಗಳನ್ನು ಜಾರಿಗೊಳಿಸಿಹಠಮಾರಿ ಧೋರಣೆ ಅನುಸರಿಸುತ್ತಿದ್ದು, ಇದರಿಂದ ದೇಶಾದ್ಯಂತ ರೈತರು ಬೀದಿಗಿಳಿದು ಹೋರಾಟ ಮಾಡುವ ಶೋಚನೀಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ
ದಸಂಸ ಬೆಂಬಲ: ಕೇಂದ್ರದ ನೀತಿಗಳನ್ನು ವಿರೋಧಿಸಿ ರೈತರು ನಡೆಸಿದ ಹೋರಾಟ ಬೆಂಬಲಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಫ್ರೀಡಂ ಪಾರ್ಕ್ ಚಲೋ ನಡೆಸಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಆನಂದ್‌ಕುಮಾರ್ ನೇತೃತ್ವದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಕಾರ್ಯಕರ್ತರು, ರೈತರ ಹೋರಾಟಗಳಿಗೆ ಬೆಂಬಲಿಸುವುದಾಗಿ ತಿಳಿಸಿದರು.
ಶಿಡ್ಲಘಟ್ಟ: ರೈತ ಸಂಘದ ಹಾಗೂ ಹಸಿರುಸೇನೆಯ ಪುಟ್ಟಣ್ಣಯ್ಯ ಬಣದ ಸದಸ್ಯರು ಶಿಡ್ಲಘಟ್ಟ ನಗರದ ಪ್ರವಾಸಿ ಮಂದಿರ ಬಳಿ ಜಮಾವಣೆಗೊಂಡು ನಂತರ ಬಸ್‌ಗಳ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಅರುಣ್‌ಕುಮಾರ್, ಪ್ರಧಾನ ಕಾರ್ಯದರ್ಶಿ ವೆಂಕಟಸ್ವಾಮಿ, ತಾಲೂಕು ಅಧ್ಯಕ್ಷ ರವಿಕುಮಾರ್ ಉಪಸ್ಥಿತರಿದ್ದರು. ರೈತ ಸಂಘ ಹಾಗೂ ಹಸಿರು ಸೇನೆಯ (ಪ್ರೊ.ನಂಜುಂಡಸ್ವಾಮಿ ಬಣ) ಕಾರ್ಯಕರ್ತರು ಜಿಲ್ಲಾಧ್ಯಕ್ಷ ಯಣ್ಣೂರು ಬಸವರಾಜ್ ನೇತೃತ್ವದಲ್ಲಿ ಶಿಡ್ಲಘಟ್ಟದಲ್ಲಿ ಟ್ರ್ಯಾಕ್ಟರ್ ನಿಲ್ಲಿಸಿ ವಾಹನಗಳ ಮೂಲಕ ಬೆಂಗಳೂರಿನ ಪ್ರೀಡಂಪಾರ್ಕ್‌ಗೆ ಪ್ರಯಾಣ ಬೆಳೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.