ಡಿಕೆಶಿ ವಿರುದ್ಧ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ


Team Udayavani, Sep 11, 2019, 3:00 AM IST

dk-virudda

ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಾ ಜಾರಿ ನಿರ್ದೇಶನಾಲಯದ ಮುಖಾಂತರ ಬಂಧಿಸಿದೆ. ಸರ್ಕಾರದ ಧೋರಣೆ ಖಂಡಿಸಿ ಸೆ.11 ರಂದು ಬೆಂಗಳೂರಿನಲ್ಲಿ ರಾಜ್ಯದ ಎಲ್ಲಾ ಒಕ್ಕಲಿಗ ಸಂಘ, ಸಂಸ್ಥೆಗಳ ನೇತೃತ್ವದಲ್ಲಿ ರಾಜ ಭವನ ಚಲೋ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಯಲುವಹಳ್ಳಿ ರಮೇಶ್‌ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಈ ಕುರಿತು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘ, ಸಂಸ್ಥೆಗಳ ಪದಾಧಿಕಾರಿಗಳಾದ ಬಾಲಕುಂಟಹಳ್ಳಿ ಮುನಿಯಪ್ಪ, ಅಡ್ಡಗಲ್‌ ಶ್ರೀಧರ್‌ ಸೇರಿದಂತೆ ಮತ್ತಿತರರು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ಧಾಳಿ ನಡೆಸಿದರು.

ಪ್ರತೀಕಾರ: ಗುಜರಾತ್‌ನ ಕಾಂಗ್ರೆಸ್‌ ಶಾಸಕರನ್ನು ರಕ್ಷಣೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಕೇಂದ್ರದ ಗೃಹ ಸಚಿವ ಅಮಿತ್‌ ಶಾ, ಇ.ಡಿ. ಮೇಲೆ ಒತ್ತಡ ತಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದರು.

ಇಲಾಖೆಗಳು ದುರ್ಬಳಕೆ: ಬಂಧಿಸಿದ ನಂತರವು ಅವರಿಗೆ ಮೂಲ ಸೌಕರ್ಯ ಒದಗಿಸದೇ ಕಿರುಕುಳ ನೀಡಲಾಗುತ್ತಿದೆ. ಬಿಜೆಪಿ ದ್ವೇಷದ ರಾಜಕಾರಣದ ಮೂಲಕ ತನ್ನ ವಿರೋಧಿ ರಾಜಕೀಯ ಪಕ್ಷಗಳ ನಾಯಕರನ್ನು ದಮನ ಮಾಡಲು ಹೊರಟಿದೆ. ಇದಕ್ಕೆ ಡಿ.ಕೆ.ಶಿವಕುಮಾರ್‌ ಬಂಧನವೇ ಸಾಕ್ಷಿ, ಹಲವಾರು ಬಾರಿ ಬಿಜೆಪಿ ಸೇರುವಂತೆ ಒತ್ತಡ ಹೇರಿದ್ದ ಡಿ.ಕೆ.ಶಿವಕುಮಾರ್‌ಗೆ ಈಗ ಬಿಜೆಪಿ ನಾಯಕರು ಇಡಿ, ಐಟಿ ಮತ್ತಿತರ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಜೆಡಿಎಸ್‌ ಪಕ್ಷದ ಹಿರಿಯ ಮುಖಂಡ ಬಾಲಕುಂಟಹಳ್ಳಿ ಮುನಿಯಪ್ಪ ಮಾತನಾಡಿ, ಶ್ರೀನಿವಾಸಗೌಡರೇ ವಿಧಾನಸಭೆಯಲ್ಲಿ ಆಪರೇಷನ್‌ ಕಮಲದ ಬಗ್ಗೆ ಬಿಜೆಪಿ ನಾಯಕರು ಕೋಟ್ಯಂತರ ರೂ. ಹಣದ ಆಮಿಷ ನೀಡಿರುವ ಬಗ್ಗೆ ಬಹಿರಂಗವಾಗಿ ಹೇಳಿದ್ದಾರೆ. ಆದರೂ ಈ ಬಗ್ಗೆ ಇ.ಡಿ.ಅಧಿಕಾರಿಗಳು ತನಿಖೆ ಮಾಡಲಿಲ್ಲ. ಇ.ಡಿ ಯಲ್ಲಿ ಸುಮಾರು 2000 ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದ್ದರೂ ಯಾವುದನ್ನು ವಿಚಾರಣೆ ನಡೆಸದೇ ಕೇವಲ ರಾಜಕೀಯ ಕಾರಣಗಳಿಗೆ ಡಿ.ಕೆ.ಶಿವಕುಮಾರ್‌ರನ್ನು ಬಂಧಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷಾತೀತವಾಗಿ ಹೋರಾಟ: ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಬಂಧನ ಖಂಡಿಸಿ ಬೆಂಗಳೂರಿನ ಬಸವನಗುಡಿ ನ್ಯಾಷನಲ್‌ ಕಾಲೇಜು ಆವರಣದಿಂದ ರಾಜ ಭವನದವರೆಗೂ ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಸಲಾಗುವುದು. ಹೋರಾಟವನ್ನು ಪಕ್ಷಾತೀತವಾಗಿ ಹಮ್ಮಿಕೊಳ್ಳಲಾಗಿದೆ.

ಒಕ್ಕಲಿಗ ಸಮುದಾಯದ ವಿವಿಧ ಸಂಘ, ಸಂಸ್ಥೆಗಳು, ಸ್ವಾಮೀಜಿಗಳು, ಮಠಾಧೀಶರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಒಕ್ಕಲಿಗ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದು ರಾಜ್ಯ ಒಕ್ಕಲಿಗರ ಸಂಘದ ರಾಜಕಿಯ ವೇದಿಕೆ ರಾಜ್ಯಾಧ್ಯಕ್ಷರಾದ ಬಾಲಕುಂಟಹಳ್ಳಿ ಮುನಿಯಪ್ಪ ತಿಳಿಸಿದರು.

ಟಾಪ್ ನ್ಯೂಸ್

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

1-gopal

Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

10-gudibande

Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.