ದ್ವಿಪಥ ರಸ್ತೆ ಕಳಪೆ ಕಾಮಗಾರಿ: ಅಧಿಕಾರಿಗಳ ವಿರುದ್ಧ ಆಕ್ರೋಶ

Team Udayavani, Apr 4, 2022, 4:15 PM IST

Untitled-1

ಬಾಗೇಪಲ್ಲಿ: ತಾಲೂಕಿನ ಚೇಳೂರು ಪಟ್ಟಣದ ಮುಖ್ಯ ರಸ್ತೆಯ ದ್ವಿಪಥ ರಸ್ತೆ ಕಾಮಗಾರಿಯನ್ನು ಗುತ್ತಿಗೆದಾರರು ಅತ್ಯಂತ ಕಳಪೆ ಗುಣಮಟ್ಟದಿಂದ ನಿರ್ವಹಿಸಿದ್ದು, ರಸ್ತೆಗೆ ಹಾಕಿರುವ ಟಾರ್‌ 5 ದಿನದಲ್ಲೇ ಕಿತ್ತು ಬರುತ್ತಿದ್ದರೂ, ಕಳಪೆ ಕಾಮಗಾರಿ ನಿಯಂತ್ರಿಸಿ ಗುತ್ತಿಗೆದಾರರ ವಿರುದ್ಧ ಕಾನೂನಿನ ಚಾಟಿ ಬೀಸಬೇಕಾಗಿರುವ ಜಿಲ್ಲಾಡಳಿತ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಗಾಢ ನಿದ್ರೆಗೆ ಜಾರಿದ್ದಾರೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಗೇಪಲ್ಲಿ ತಾಲೂಕಿನ ಚೇಳೂರು ಹೋಬಳಿಯನ್ನು ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನೂತನ ತಾಲೂಕುನ್ನಾಗಿ ಘೋಷಣೆ ಮಾಡಿ ನೂತನ ತಾಲೂಕಿನ ಅಭಿವೃದ್ಧಿ ದೃಷ್ಟಿಯಿಂದ ಚೇಳೂರು ಪಟ್ಟಣದಲ್ಲಿ 1 ಕಿ.ಮೀ. ಉದ್ದದ ದ್ವಿಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಸರ್ಕಾರ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಕಾಮಗಾರಿಗೆ ಅನುಮೋದನೆ ನೀಡಿದೆ.

ಹಳೆ ರಸ್ತೆಗೆ ಹಾಕಿರುವ ಡಾಂಬರನ್ನು ತೆಗೆದು ಕನಿಷ್ಠ 2 ಅಡಿ ರಸ್ತೆ ಹಗೆದು, ಹಗೆದ ರಸ್ತೆಗೆ ಗುಣಮಟ್ಟದ ಮೆಟ್ಟಲಿಂಗ್‌ ಮಾಡಿ ನಂತರ ಟಾರ್‌ ಹಾಕಬೇಕೆಂದು ಕಾಮಗಾರಿ ಎಸ್ಟಿಮೇಟ್‌ನ್ನು ಸಿದ್ಧಪಡಿಸಿ ಗುತ್ತಿಗೆದಾರನಿಗೆ ಟೆಂಡರ್‌ ನೀಡಲಾಗಿದೆ. ಆದರೆ, ಗುತ್ತಿಗೆದಾರರು ಮಣ್ಣಿನ ರಸ್ತೆ ಮೇಲೆ ಕಪ್ಪು ಬಣ್ಣದ ಲೇಪನವನ್ನು ಹಾಕಿ ಪೇಪರ್‌ ದಪ್ಪದಷ್ಟು ಟಾರ್‌ ರಸ್ತೆಗೆ ಹಾಕಿಕೊಂಡು ಕಾಮಗಾರಿಗೆ ಮಾಡಿ ಮುಗಿಸಿದ್ದಾರೆ ಎಂದು ಸ್ಥಳೀಯರು ದೂರಿದರು.

ಕಾಮಗಾರಿ ಕಳಪೆ: ರಾಜ್ಯ ಹೆದ್ದಾರಿ ಗುಣಮಟ್ಟದ ರಸ್ತೆ ಕಾಮಗಾರಿಗೆ ಉಪಯೋಗಿಸುತ್ತಿರುವ ಸಾಮಗ್ರಿಗಳ ಗುಣಮಟ್ಟ, ಟಾರ್‌ ಮಿಕ್ಸಿಂಗ್‌ ಪ್ರಮಾಣದ ಗುಣಮಟ್ಟ ಸೇರಿ ಇತರೆ ಸಾಮಗ್ರಿಗಳ ಗುಣಮಟ್ಟವನ್ನು ಲೋಕೋಪಯೋಗಿ ಇಲಾಖೆ ಎಂಜನಿಯರ್‌ಗಳು ಸ್ಥಳದಲ್ಲೇ ಇದ್ದು ಪರಿಶೀಲಿಸಿ ಗುಣಮಟ್ಟದ ಖಾತ್ರಿ ಪಡಿಸಿಕೊಂಡ ನಂತರ ರಸ್ತೆಗೆ ಟಾರ್‌ ಹಾಕುವುದು ಇಲಾಖೆ ನಿಯಮವಾಗಿದೆ. ಆದರೆ, ಸ್ಥಳದಲ್ಲಿ ಗುಣಮಟ್ಟ ಖಾತ್ರಿ ಪಡಿಸಿಕೊಳ್ಳುವ ಎಂಜನಿಯರ್‌, ಗುತ್ತಿಗೆದಾರರು ಇಲ್ಲದಿದ್ದರೂ ಕೂಲಿ ಕಾರ್ಮಿಕರೇ ತಮಗೆ ಇಷ್ಟ ಬಂದಂತೆ ಟಾರ್‌ ಹಾಕಿಕೊಂಡು ಕಾಮಗಾರಿ ಮಾಡುತ್ತಿದ್ದಾರೆ. ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿರುವ ಕಾರಣ ಹಲವು ಕಡೆ ಈಗಾಗಲೇ ಕಿತ್ತು ಬರುತ್ತಿದ್ದು, ಮಳೆಗಾಲ ಪ್ರಾರಂಭವಾದರೆ ರಸ್ತೆಗೆ ಹಾಕಿರುವ ಟಾರ್‌ ಸಂಪೂರ್ಣ ಕಿತ್ತು ಬರುವುದರಲ್ಲಿ ಅನುಮಾನ ಇಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ಯಾವುದೇ ಪ್ರಯೋಜನವಿಲ್ಲ: ಚೇಳೂರು ಗ್ರಾಪಂ ಮಾಜಿ ಅಧ್ಯಕ್ಷ ಕರೆ ಶ್ರೀರಾಮಪ್ಪ ಮಾತನಾಡಿ, ದ್ವಿಪಥ ರಸ್ತೆಗೆ ಎಸ್ಟಿಮೇಟ್‌ನಲ್ಲಿ ಸೂಚಿರುವ ಆಳತೆಯಂತೆ ಜಲ್ಲಿ ಮತ್ತು ಟಾರ್‌ ಹಾಕಿಲ್ಲ, ಮಣ್ಣಿನ ರಸ್ತೆಯ ಮೇಲೆ ಪೇಪರ್‌ ದಪ್ಪದಷ್ಟು ಮಾತ್ರ ಟಾರ್‌ ಹಾಕಿದ್ದಾರೆ. ಕಳೆಪೆ ಕಾಮಗಾರಿ ಬಗ್ಗೆ ದಾಖಲೆ ಸಮೇತ ಲೋಕೋಪಯೋಗಿ ಇಲಾಖೆಯಲ್ಲಿ ದೂರು ಸಲ್ಲಿಸಿ, ಅಧಿಕಾರಿಗಳ ಗಮನಕ್ಕೆ ತಂದರೂ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿಲ್ಲ. ಕಳಪೆ ಕಾಮಗಾರಿ ಭ್ರಷ್ಟಾಚಾರದ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೂ ತಲೆಕೆಡಿಸಿಕೊಂಡಿಲ್ಲ. ರಸ್ತೆ ಕಾಮಗಾರಿ ಅನುದಾನ ಜನಪ್ರತಿನಿಧಿಗಳ, ಗುತ್ತಿಗೆದಾರರ, ಇಲಾಖೆ ಅಧಿಕಾರಿಗಳ ಜೇಬು ತುಂಬಲಿದ್ದು, ಕಾಮಗಾರಿಯಿಂದ ಭ್ರಷ್ಟರಿಗೆ ಅನುಕೂಲವೇ ಹೊರತು ನಾಗರಿಕರಿಗೆ ಯಾವುದೇ ರೀತಿಯ ಪ್ರಯೋಜನವಿಲ್ಲ ಎಂದು ಆರೋಪಿಸಿದರು.

ಟಾಪ್ ನ್ಯೂಸ್

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.