POP Ganapati: ಪಿಒಪಿ ಗಣಪಗಳ ಮಾರಾಟಕ್ಕೆ ಬೀಳುತ್ತಾ ಬ್ರೇಕ್‌?


Team Udayavani, Aug 19, 2023, 3:46 PM IST

tdy-12

ಚಿಕ್ಕಬಳ್ಳಾಪುರ: ಶ್ರಾವಣ ಮಾಸ ಆರಂಭಗೊಳ್ಳುತ್ತಿದ್ದಂತೆ ಹಬ್ಬಗಳ ಆಚರಣೆ ಶುರುವಾಗುತ್ತಿವೆ. ಇದರ ನಡುವೆ ಗಣೇಶ ಚುತುರ್ಥಿ ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಜಿಲ್ಲಾದ್ಯಂತ ಪರಿಸರಕ್ಕೆ ಹಾನಿ ಉಂಟು ಮಾಡುವ ನಿಷೇಧಿತ ಪಿಒಪಿ ಗಣಪತಿ ಮೂರ್ತಿಗಳ ಮಾರಾಟದ ಆಗದಂತೆ ನೋಡಿ ಕೊಳ್ಳುವ ಸವಾಲು ಜಿಲ್ಲಾಡಳಿತಕ್ಕೆ ಎದುರಾಗಿದೆ.

ಹೌದು, ಪರಿಸರಕ್ಕೆ ಅದರಲ್ಲೂ ಜೀವ ಜಲದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರಿ ಜನರ ಆರೋಗ್ಯವನ್ನು ಕೆಡಿಸುವ ಪ್ಲಾಸ್ಟರ್‌ ಆಫ್ ಪ್ಯಾರೀಸ್‌ (ಪಿಒಪಿ) ಗಣೇಶ ಮೂರ್ತಿಗಳ ಮಾರಾಟ ಆಗ ದಂತೆ ಸುಪ್ರೀಂಕೋರ್ಟ್‌ ನೀಡಿರುವ ನಿರ್ದೇಶನದಂತೆ ಜಿಲ್ಲಾದ್ಯಂತ ಜಿಲ್ಲಾಡಳಿತ ಪಿಒಪಿ ಗಣೇಶ ಮೂರ್ತಿಗಳ ಮಾರಾಟ ಹಾಗೂ ತಯಾರಿ ಮೇಲೆ ಕಣ್ಗಾವಲು ಇರಿಸಿದೆ.

ಇತ್ತೀದಿನ ದಿನಗಳಲ್ಲಿ  ಸಭೆ, ಸಮಾರಂಭಗಳಲ್ಲಿ ನಿಷೇಧಿತ ಪ್ಲಾಸ್ಟರ್‌ ಆಫ್ ಪ್ಯಾರೀಸ್‌ ಗಣಪತಿಗಳನ್ನು ತಯಾರಿಸಿ ಕೆರೆ ಹಾಗೂ ಇತರೇ ಜಲ ಮೂಲಗಳಲ್ಲಿ ಅವೈಜ್ಞಾನಿಕವಾಗಿ ವಿಸರ್ಜನೆ ಮಾಡುತ್ತಿರುವ ಪರಿಣಾಮ ಪರಿಸರ ಮಾಲಿನ್ಯದ ಜೊತೆಗೆ ಜೀವಜಲ ಕೂಡ ಕಲುಷಿತವಾಗಿ ಅಪಾಯಕಾರಿ ರಾಸಾಯನಿಕ ಮಿಶ್ರಣಗಳ ಪರಿಣಾಮ ಜನರ ಆರೋಗ್ಯ ಕೆಡಿಸುವುದರ ಜೊತೆಗೆ ಸುತ್ತಮುತ್ತಲಿನ ಪರಿಸರವನ್ನು ಸಾಕಷ್ಟು ತಲ್ಲಣಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ ಕೂಡ ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಉತ್ತೇಜನ ನೀಡಿ ಪಿಒಪಿ ಗಣಪತಿ ಮೂರ್ತಿಗಳ ಮಾರಾಟ ಹಾಗೂ ತಯಾರಿ ಮೇಲೆ ನಿಗಾ ವಹಿಸಿ ಸೂಕ್ತ ಕಾನೂನು ಕ್ರಮ ವಹಿಸುವಂತೆ ಆದೇ ಶಿಸಿದೆ. ಹೀಗಾಗಿ ಜಿಲ್ಲಾದ್ಯಂತ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಸ್ಥಳಿಯ ನಗರ ಸಂಸ್ಥೆಗಳು ಇದೀಗ ಪಿಒಪಿ ಗಣಪತಿ ಮೂರ್ತಿಗಳ ಮಾರಾಟ ಹಾಗೂ ತಯಾರಿ ಮೇಲೆ ಸಂಪೂರ್ಣ ನಿಷೇಧ ಹೇರಿ ಹಲವು ಕ್ರಮಗಳಿಗೆ ಮುಂದಾಗಿದೆ.

ಜಿಲ್ಲೆಗೆ ಬೆಂಗಳೂರೇ ಕಂಟಕ: ಪಿಒಪಿ ಗಣೇಶ ಮೂರ್ತಿಗಳ ಮಾರಾಟ ಹಾಗೂ ತಯಾರಿ ಜಿಲ್ಲೆಯಲ್ಲಿ ಬಹು ತೇಕ ಕಡಿಮೆ. ಆದರೆ ಹಬ್ಬದ ಕೊನೆ ದಿನಗಳಲ್ಲಿ ರಾಜಧಾನಿ ಬೆಂಗಳೂರಿನಿಂದ ರಾಜ ಕಾರಣಿಗಳು, ಚುನಾಯಿತ ಜನಪ್ರತಿನಿಧಿಗಳು ಜನರ ಅದರಲ್ಲೂ ಯುವ ಜನರ ಓಲೈಕೆಗಾಗಿ ಬೃಹತ್‌ ಗಾತ್ರದ ಪಿಒಪಿ ಗಣೇಶ ಮೂರ್ತಿಗಳನ್ನು ತಂದು ಮಾರಾಟ ಮಾಡುವುದರಿಂದ ಜಿಲ್ಲೆಗೆ ಬೆಂಗಳೂರು ಕಂಟಕವಾಗಿದೆ. ಜನಪ್ರತಿನಿಧಿಗಳು ಮುಂದೆ ನಿಂತು ಗಣೇಶ ಮೂರ್ತಿಗಳನ್ನು ಹಂಚುವುದರಿಂದ ಏನು ಕ್ರಮ ಕೈಗೊಳ್ಳ ಲಾಗದ ಅಸಹಾಯಕ ಸ್ಥಿತಿಯಲ್ಲಿ ಅಧಿಕಾರಿಗಳು ಇರುವುದರಿಂದ ಜಿಲ್ಲೆಯಲ್ಲಿ ಪಿಒಪಿ ಗಣಪತಿಗಳು ಪರಿಸರಕ್ಕೆ ಹಾನಿ ಉಂಟು ಮಾಡುವಂತಾಗಿದೆ.

ಕೊನೆ ಕ್ಷಣದಲ್ಲಿ ಪಿಒಪಿ ಗಣಪತಿಗಳ ಎಂಟ್ರಿ!:

ಜಿಲ್ಲಾಡಳಿತ ಅಥವ ನಗರ ಸ್ಥಳೀಯ ಸಂಸ್ಥೆಗಳು ಆರಂಭದಿಂದ ಹಬ್ಬ ಸಮೀಪಿಸುವವರೆಗೂ ಪ್ಯಾಸ್ಟರ್‌ ಆಫ್ ಪ್ಯಾರೀಸ್‌ (ಪಿಒಪಿ) ಗಣಪತಿ ಮೂರ್ತಿಗಳ ತಯಾರಿ ಹಾಗೂ ಮಾರಾಟದ ಮೇಲೆ ನಿಷೇಧ ಹೇರಿರುತ್ತದೆ. ಆದರೆ ಕೊನೆಯ ಒಂದರೆಡು ದಿನಗಳಲ್ಲಿ ಪಿಒಪಿ ಗಣೇಶನ ಮೂರ್ತಿಗಳು ಕದ್ದುಮುಚ್ಚಿ ಮಾರಾಟಕ್ಕೆ ಅಧಿಕಾರಿಗಳೇ ಅವಕಾಶ ಕೊಡುತ್ತಾರೆಂಬ ಆರೋಪ ಸಾರ್ವಜನಿಕ ವಲಯದಲ್ಲಿ ಅದರಲ್ಲೂ ಪರಿಸರ ಪ್ರೇಮಿಗಳಿಂದ ಕೇಳಿ ಬರುತ್ತಿದೆ. ರಸಾಯನಿಕಗಳನ್ನು ಬಳಸಿ ತಯಾರಿಸುವ ಪಿಒಪಿ ಗಣೇಶ ಮೂರ್ತಿಗಳು ಪರಿಸರಕ್ಕೆ ಹೆಚ್ಚು ಹಾನಿ ಉಂಟು ಮಾಡುತ್ತೇವೆ. ಆದರೆ, ನೈಸರ್ಗಿಕವಾಗಿ ಮಣ್ಣು ಬಳಸಿ ತಯಾರಿಸುವ ಗಣಪಣ ಮೂರ್ತಿಗಳು ಹೆಚ್ಚು ಅಲಂಕಾರಿಕವಾಗಿ ಇರುವುದಿಲ್ಲ ಎಂಬ ಕಾರಣಕ್ಕೆ ಜಿಲ್ಲೆಯಲ್ಲಿ ನಿಷೇಧಿತ ಪಿಒಪಿ ಗಣೇಶ ಮೂರ್ತಿಗಳ ಮಾರಾಟಕ್ಕೆ  ಕೊನೆ ಕ್ಷಣದಲ್ಲಿ ಅವಕಾಶ ಸಿಗುತ್ತಿದ್ದು ಈ ಬಗ್ಗೆ ಜಿಲ್ಲಾಡಳಿತ ಅದರಲ್ಲೂ ಪರಿಸರ ಹಾಗೂ ಸ್ವತ್ಛತೆ ವಿಚಾರದಲ್ಲಿ ಸಾಕಷ್ಟು ಕಾಳಜಿ ವಹಿಸುತ್ತಿರುವ ಜಿಲ್ಲಾಧಿಕಾರಿಗಳು ಇದರ ಬಗ್ಗೆ ಹೆಚ್ಚು ನಿಗಾವಹಿಸಿ ಸಂಬಂದಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ  ನೀಡಬೇಕಿದೆ.

ಸ್ಥಳೀಯ ಸಂಸ್ಥೆಗಳಿಗೆ ಪತ್ರ ಬರೆದ ಮಾಲಿನ್ಯ ನಿಯಂತ್ರಣ ಮಂಡಳಿ :

ಗಣೇಶ ಚತುರ್ಥಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇದ್ದು ಜಿಲ್ಲೆಯಲ್ಲಿ ಅಕ್ರಮವಾಗಿ ಅಥವ ಕದ್ದುಮುಚ್ಚಿ ಪಿಒಪಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡುವುದನ್ನು ತಡೆಯುವಂತೆ ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ವಹಿಸಿ ತಂಡಗಳನ್ನು ರಚಿಸಿ ಕಾರ್ಯಾಚರಣೆ ಮಾಡುವಂತೆ ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ ಅಧಿಕಾರಿಗಳು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ಪತ್ರ ಬರೆದಿದ್ದಾರೆ.

ಕಳೆದ ವರ್ಷ ಒಂದೂ ಪ್ರಕರಣ ದಾಖಲಿಸಿಲ್ಲ :

ಜಿಲ್ಲೆಯ ಪ್ರಾದೇಶಿಕ ಪರಿಸರ ಮಾಲಿನ್ಯ ನಿಯಂತ್ರಣ ಕಚೇ ರಿಯ ಅಧಿಕಾರಿಗಳು ಹೇಳುವ ಪ್ರಕಾರ ಕಳೆದ ವರ್ಷ ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ ಹಾಗು ಮಾರಾಟದ ವಿಚಾರ ದಲ್ಲಿ ಯಾವುದೇ ರೀತಿಯಲ್ಲಿ ಒಂದು ಪ್ರಕರಣ ಕೂಡ ದಾಖಲಿ ಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲಾಡಳಿತ ಬಿಗಿ ಕ್ರಮಗಳನ್ನು ಕೈಗೊಳ್ಳಬೇಕಿದೆ.

ಈಗಾಗಲೇ ನಿಷೇಧಿತ ಪಿಒಪಿ ಗಣೇಶಮೂರ್ತಿಗಳ ಮಾರಾಟದ ಮೇಲೆ ನಿಷೇಧ ಹೇರ ಲಾಗಿದ್ದು, ಈ ಬಗ್ಗೆ ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಮುಖ್ಯ ಸ್ಥರಿಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪತ್ರ ಬರೆದು ಸೂಕ್ತ ನಿರ್ದೇಶನ ನೀಡಲಾಗಿದೆ. ಅಲ್ಲದೇ ಬಣ ಲೇಪಿತ ಗಣೇಶ ಮೂರ್ತಿಗಳನ್ನು ತಯಾರಿಸಿದರೆ ಅಥವ ಮಾರಾಟ ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ವಹಿಸಿ ಮಾರಾಟಗಾರರ ಮೇಲೆ ದೂರು ದಾಖಲಿಸುವಂತೆ ಸೂಚಿಸ ಲಾಗಿದೆ. ಜೇಡಿ ಮಣ್ಣಿನಿಂದ ತಯಾರಿಸಿ ಗಣಪನ ಮೂರ್ತಿಗಳ ಮಾರಾಟ ಮಾಡಿ ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಕ್ರಮ ವಹಿಸಬೇಕೆಂದು ಸೂಚಿಸಲಾಗಿದೆ.-ಟಿ.ಎಂ.ಸಿದ್ದೇಶ್ವರ ಬಾಬು, ಪರಿಸರ ಅಧಿಕಾರಿ, ಪ್ರಾದೇಶಿಕ ಕಚೇರಿ, ಚಿಕ್ಕಬಳ್ಳಾಪುರ. 

ಪರಿಸರಕ್ಕೆ ಹಾನಿ ಉಂಟು ಮಾಡುವ ನಿಷೇಧಿತ ಪ್ಯಾಸ್ಟರ್‌ ಆಫ್ ಪ್ಯಾರೀಸ್‌ (ಪಿಒಪಿ) ಗಣೇಶ ಮೂರ್ತಿಗಳ ಮಾರಾಟ ಆಗದಂತೆ ಸೂಕ್ತ ಎಚ್ಚರಿಕೆ ವಹಿಸುವಂತೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ನಗರಸಭೆಗೆ ಸೂಕ್ತ ತಿಳವಳಿಕೆ ಪತ್ರ ಬರೆದಿದ್ದಾರೆ. ಅದರ ಅನುಸಾರ ನಗರಸಭೆ ವ್ಯಾಪ್ತಿಯಲ್ಲಿ ಪಿಒಪಿ ಗಣೇಶ ಮೂರ್ತಿಗಳ ಮಾರಾಟ ಆಗದಂತೆ ನಗರಸಭೆ ಸೂಕ್ತ ನಿಗಾ ವಹಿಸಲಿದೆ.-ಶ್ರೀಕಾಂತ್‌, ನಗರಸಭೆ ಆಯುಕ್ತರು, ಶಿಡ್ಲಘಟ್ಟ.  -ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

ARMY (2)

Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ

Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

10-gudibande

Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

20

Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.