ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ
Team Udayavani, Sep 23, 2020, 4:14 PM IST
ಚಿಕ್ಕಬಳ್ಳಾಪುರ: ಘನತಾಜ್ಯ ನಿರ್ವಹಣಾ ಘಟಕ ಏಕರೂಪದ ಬ್ರ್ಯಾಂಡಿಂಗ್ ಲೋಕಾರ್ಪಣೆ ಹಾಗೂ ಸ್ವಚ್ಛೋತ್ಸವ-ನಿತ್ಯೋತ್ಸವ ಮಾಸಾಚರಣೆಯನ್ನು ಜಿಲ್ಲಾದ್ಯಂತ ಮಾಡಬೇಕು ಹಾಗೂಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಬಗೆಗಿನ ಸಮಸ್ಯೆಗಳನ್ನು ಆಯಾ ತಾಲೂಕು ಮಟ್ಟದಲ್ಲಿಯೇ ಪರಿಹರಿಸಿ ಕೊಡಲಾಗುತ್ತದೆ ಎಂದು ಜಿಪಂ ಅಧ್ಯಕ್ಷ ಚಿಕ್ಕನರಸಿಂಹಯ್ಯ(ಚಿನ್ನಿ) ತಿಳಿಸಿದರು.
ಜಿಪಂ ಸಭಾಂಗಣದಲ್ಲಿ ಘನತಾಜ್ಯ ನಿರ್ವಹಣಾಘಟಕ ಏಕರೂಪದ ಬ್ರ್ಯಾಂಡಿಂಗ್ ಲೋಕಾರ್ಪಣೆ ಹಾಗೂ ಸ್ವಚ್ಛೋತ್ಸವ -ನಿತ್ಯೋತ್ಸವ ಮಾಸಾಚರಣೆ ಪ್ರಯುಕ್ತ ಏರ್ಪಡಿಸಲಾಗಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಕ್ಟೋಬರ್- 2020 ಮಹಾತ್ಮ ಗಾಂಧೀಜಿ ಯವರ 150ನೇ ಜನ್ಮದಿನದ ಪ್ರಯುಕ್ತ ಸ್ವಚ್ಛ ಭಾರತ ಹಾಗೂ ಗ್ರಾಮ ಅಭಿವೃದ್ಧಿ ನಿರ್ಮಾಣ ಮಾಡುವುದರಿಂದ ಜಿಲ್ಲೆಯ ಜನತೆಯಲ್ಲಿ ಘನಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ಬಗ್ಗೆ ಅರಿವು ಮೂಡಿಸುವುದು ಅವಶ್ಯ ಎಂದರು.
ಪಟ್ಟಣವಲ್ಲದೇ ಗ್ರಾಮಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕೆಂಬ ಆಶಯದಂತೆ ಸಾಮೂಹಿಕ ಶೌಚಾಲಯಗಳ ನಿರ್ಮಾಣ ಸೇರಿದಂತೆ ಸ್ವತ್ಛತೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕೆಂದರು.
ಕಿರುಚಿತ್ರ ಪ್ರದರ್ಶಿಸಿ: ಸ್ಥಳೀಯ ಮಾಧ್ಯಮಗಳಲ್ಲಿ ಜಾಹೀರಾತು ನೀಡುವ ಹಾಗೂ ಬೀದಿ ನಾಟಕಗಳು ಹಳ್ಳಿಗರಲ್ಲಿ ಹೆಚ್ಚಿನ ಪ್ರಭಾವ ಬೀರುವುದರಿಂದ ಆಯಾ ತಾಲೂಕಿನ ಪ್ರತಿಭಾವಂತ ನಾಟಕಕಾರರಿಗೆ ಪ್ರೋತ್ಸಾಹಧನ ನೀಡಿ ಈ ಬಗ್ಗೆ ಪ್ರತಿ ಗ್ರಾಮಗಳಲ್ಲಿ ಅರಿವು ಮೂಡಿಸಲು ತಿಳಿಸಿ ಮತ್ತು ಕಿರುಚಿತ್ರಗಳ ಪ್ರದರ್ಶನ ಮಾಡಿ ಎಂದು ಸಲಹೆ ನೀಡಿದರು.
ಜಿಪಂ ಉಪಕಾರ್ಯದರ್ಶಿ ಡಾ.ಎನ್ .ನೋಮೇಶ್ ಕುಮಾರ್, ಜಿಪಂ ಯೋಜನಾ ನಿರ್ದೇಶಕ ಗಿರಿಜಾ ಶಂಕರ್ ಹಾಗೂ ಜಿಲ್ಲೆಯ ಎಲ್ಲಾ ಕಾರ್ಯನಿರ್ವಹಕಾಧಿಕಾರಿಗಳು, ಪಿಡಿಒಗಳು ಸೇರಿದಂತೆ ಅಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಮುಳಿಯಾರಿನಲ್ಲಿ ಮನೆ ಮುಂದೆ ಐದು ಚಿರತೆ ಪ್ರತ್ಯಕ್ಷ
INDIA ಕೂಟದಿಂದ ಕಾಂಗ್ರೆಸ್ ಹೊರಗಿಡಲು ಆಪ್ ಒತ್ತಾಯ!
Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.