ವೃತ್ತಿಯ ನೈಪುಣ್ಯತೆ ಅಗತ್ಯ
Team Udayavani, Aug 6, 2019, 3:00 AM IST
ಚಿಕ್ಕಬಳ್ಳಾಪುರ: ಪ್ರತಿ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನು ಗಿಟ್ಟಿಸಿಕೊಳ್ಳಲು ತೀವ್ರ ಪೈಪೋಟಿ ಇರುವ ಸಂದರ್ಭದಲ್ಲಿ ಕಾರ್ಮಿಕರು ವೃತ್ತಿ ಕೌಶಲ್ಯ ಹಾಗೂ ನೈಪುಣ್ಯತೆಯನ್ನು ಹೆಚ್ಚಿಸಿಕೊಂಡಾಗ ವೃತ್ತಿಯಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಕಾರ್ಮಿಕ ಇಲಾಖೆ ನಿರೀಕ್ಷಕ ಸೋಮಶೇಖರ್ ತಿಳಿಸಿದರು.
ನಗರದ ಹೊರ ವಲಯದ ನಿರ್ಮಿತಿ ಕೇಂದ್ರದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಪಂ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇಲಾಖೆ ಸಹಯೋಗದೊಂದಿಗೆ ಶ್ರಮ ಸಾಮರ್ಥ್ಯ ಯೋಜನೆಯಡಿ ಜಿಲ್ಲೆಯಲ್ಲಿ ನೋಂದಾಯಿತ ಕಾರ್ಮಿಕರಿಗೆ 30 ದಿನಗಳ ತರಬೇತಿ ಹಾಗೂ ಟೂಲ್ ಕಿಟ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಾಗಾರ: ಕಾರ್ಮಿಕ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಇಲಾಖೆಯು ಜಿಲ್ಲೆಯಲ್ಲಿ ವಿವಿಧ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಅವರಿಗೆ ಸೂಕ್ತ ಮಾರ್ಗದರ್ಶನದ ಜೊತೆಗೆ ತರಬೇತಿ ಮೂಲಕ ಕೌಶಲ್ಯಗಳನ್ನು ಬೆಳೆಸುವ ಮಹತ್ವಕಾಂಕ್ಷೆ ಹೊತ್ತು ಟ್ರೆçನಿಂಗ್-ಕಮ್-ಟೂಲ್‌ಕಿಟ್ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಾಗಾರದಲ್ಲಿ ಸುಮಾರು 21 ವಿವಿಧ ವೃತ್ತಿಗಳಿಗೆ ಸಂಬಂಧಿಸಿದ ತರಬೇತಿ ನೀಡಲಾಗುತ್ತಿದ್ದು, ಸಂಘಟಿತ ಹಾಗೂ ಅಸಂಘಟಿತ ವಲಯದಲ್ಲಿರುವ ಕಾರ್ಮಿಕರಿಗೆ ವೃತ್ತಿಗೆ ಅವಶ್ಯಕವಾದ ಕೌಶಲ್ಯದ ಕೊರತೆ ಇರುವುದರಿಂದ ಈ ಕಾರ್ಯಾಗಾರ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ಹೆಚ್ಚಿನ ಉದ್ಯೋಗಾವಕಾಶ: ಜಿಲ್ಲೆಯಲ್ಲಿರುವ ನೋಂದಾಯಿತತ ಕಾರ್ಮಿಕರಿಗೆ ಹಂತ ಹಂತವಾಗಿ ಈ ತರಬೇತಿ ಕಾರ್ಯಾಗಾರ ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸುವ ಕಾರ್ಮಿಕರಿಗೆ ವಸತಿ ಸೌಲಭ್ಯ ಒದಗಿಸಿದ್ದು, ತರಬೇತಿ ಪೂರ್ಣಗೊಳಿಸಿದ ನಂತರ ವೆಬ್ ವಿಳಾಸದಲ್ಲಿ ಕಾರ್ಮಿಕರ ಹೆಸರು, ವಿಳಾಸವನ್ನು ನೋಂದಾಯಿಸಿ ಕೌಶಲ್ಯ ವರ್ಧಿತ ಕಾರ್ಮಿಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲಾಗುವು ಎಂದು ಹೇಳಿದರು.
ಮಾಸಿಕ ವೇತನ: ಜಿಪಂ ಯೋಜನಾ ನಿರ್ದೇಶಕರಾದ ಗಿರಿಜಾ ಶಂಕರ್ ಮಾತನಾಡಿ, ಅಸಂಘಟಿತ ಕಾರ್ಮಿಕ ವಲಯಕ್ಕೆ ಈ ತರಬೇತಿಯಿಂದ ಬಹಳಷ್ಟು ಪ್ರಯೋಜನವಾಗಲಿದೆ. 30 ದಿನಗಳ ತರಬೇತಿಗೆ ಫಲಾನುಭವಿಗಳು ತಪ್ಪದೇ ಭಾಗವಹಿಸಬೇಕು.
ತರಬೇತಿಯ ನಂತರ ಫಲಾನುಭವಿಗಳ ಮಕ್ಕಳ ಶಿಕ್ಷಣಕ್ಕೆ ಬೇಕಾದ ವಿದ್ಯಾರ್ಥಿ ವೇತನ, ಮಕ್ಕಳ ಮದುವೆಗೆ ಹಣ ಸಹಾಯ, ಮಾಸಿಕ ವೇತನ ಪಡೆದುಕೊಳ್ಳಬಹುದು. ಇದರಿಂದ ತರಬೇತಿ ಪೂರ್ಣಗೊಳಿಸಿದ ಪ್ರತಿಯೊಬ್ಬ ಅಭ್ಯರ್ಥಿಯು ಇತರರನ್ನು ನೋಂದಾಯಿಸಿ ಅವರು ಕೂಡ ಸೌಲಭ್ಯ ಪಡೆದುಕೊಳ್ಳಲು ಸಹಕರಿಸಿ ಆ ಮೂಲಕ ಕಾರ್ಮಿಕರು ಆರ್ಥಿಕವಾಗಿ ಸಬಲರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದರು.
ಕಾರ್ಯಾಗಾರದಲ್ಲಿ ಜಿಲ್ಲಾ ಉದ್ಯೋಗಾಧಿಕಾರಿ ಪ್ರಸಾದ್ ಎಂ., ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಕೃಷ್ಣೇಗೌಡ, ನಿರ್ದೇಶಕರಾದ ನರಸಿಂಹಮೂರ್ತಿ ಸೇರಿದಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳು, ಇತರೆ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಜಿಲ್ಲೆಯ ನೋಂದಾಯಿತ ಕಾರ್ಮಿಕರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.
20 ಸಾವಿರ ಬೆಲೆ ಬಾಳುವ ಟೂಲ್ ಕಿಟ್: 30 ದಿನಗಳ ವೃತ್ತಿ ಕೌಶಲ್ಯ ಹಾಗೂ ನೈಪುಣ್ಯತೆ ತರಬೇತಿಯಲ್ಲಿ ಭಾಗವಹಿಸಿರುವ ಕಾರ್ಮಿಕರಿಗೆ ಜೀವನ ಕೌಶಲ್ಯ, ಆರೋಗ್ಯ ಹಾಗೂ ರಕ್ಷಣೆಯ ಬಗ್ಗೆ ತಿಳುವಳಿಕೆ ಮೂಡಿಸುವುದರ ಜೊತೆಗೆ 20 ಸಾವಿರ ಬೆಲೆ ಬಾಳುವ ಟೂಲ್‌ಕಿಟ್, ಸುರತಕ್ಷತಾ ಕಿಟ್, ಕೌಶಲ್ಯ ಪ್ರಮಾಣ ಪತ್ರ ಮತ್ತು ಉದ್ಯೋಗಾವಕಾಶವನ್ನು ಫಲಾನುಭವಿಗಳು ಪಡೆಯಲಿದ್ದಾರೆ. ತರಬೇತಿಯಲ್ಲಿ ಅಭ್ಯರ್ಥಿಗೆ ಕೂಲಿ ನಷ್ಟ ಪರಿಹಾರಕ್ಕೆ ದಿನಕ್ಕೆ 240 ರೂ. ಮತ್ತು ಪ್ರಯಾಣ ದರ, ಉಪಹಾರ ಹಾಗೂ ಊಟ ನೀಡಲಾಗುತ್ತದೆ ಎಂದು ಕಾರ್ಮಿಕ ನಿರೀಕ್ಷಕ ಸೋಮಶೇಖರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.