ಎಲ್‌ಇಡಿ ದೀಪ ಅಳವಡಿಕೆಗೆ ಪ್ರಸ್ತಾವನೆ ಸಲ್ಲಿಸಿ : ಡೀಸಿ

Team Udayavani, Nov 22, 2020, 4:13 PM IST

ಎಲ್‌ಇಡಿ ದೀಪ ಅಳವಡಿಕೆಗೆ ಪ್ರಸ್ತಾವನೆ ಸಲ್ಲಿಸಿ : ಡೀಸಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಬರುವ ನಗರದ ಎಲ್ಲಾ ಬೀದಿಗಳಲ್ಲೂ ವಿದ್ಯುತ್‌ ದೀಪದ ಬದಲಾಗಿ ಎಲ್‌ಇಡಿ ದೀಪ ಅಳವಡಿಕೆ ಉಪಯುಕ್ತವಾಗಿದ್ದು, ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಅನುಮೋದನೆ ಬಳಿಕ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲುಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಆರ್‌. ಲತಾ ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 158 ವಾರ್ಡ್‌ಗಳಿದ್ದು, 24,802 ಕಂಬಗಳಲ್ಲಿ 19,538 ಬೀದಿ ದೀಪಗಳಿವೆ. ಅದರಲ್ಲಿ ಶೇ.12ರಷ್ಟು ಎಲ್‌ಇಡಿ ದೀಪ ಇರುವುದರಿಂದ, ಜಿಲ್ಲಾದ್ಯಂತ ಪೂರ್ಣವಾಗಿ ಎಲ್‌ಇಡಿ ದೀಪ ಅಳವಡಿಸಿದರೆ ಹೆಚ್ಚಿನ ಅನುಕೂಲವಾಗುತ್ತದೆ. ಹಾಗೆಯೇ ವಿದ್ಯುತ್‌ ಬಿಲ್‌ ಅನ್ನು ತಗ್ಗಿಸಿದಂತಾಗುವುದರ ಜತೆಗೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಹೀಗಾಗಿ ಶೀಘ್ರದಲ್ಲೇ ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಎಲ್‌ ಇಡಿ ಅಳವಡಿಕೆ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಅನುಮೋದನೆಯಾದಕೂಡಲೇ ತುರ್ತಾಗಿ ಟೆಂಡರ್‌ ಕರೆದುಕಾರ್ಯನಿರ್ವಹಿಸಿ ಎಂದು ಸೂಚಿಸಿದರು.

ನಿರ್ವಹಣೆ ಮಾಡಿ: ತ್ಯಾಜ್ಯ ವಿಲೇವಾರಿಗೆ ಆದ್ಯತೆ ನೀಡಿ, ಕಸ ವಿಂಗಡಣೆ ಅತಿ ಮುಖ್ಯ. ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ನಿರ್ವಹಣೆ ಮಾಡುತ್ತಿರುವ ಮಾದರಿಯಲ್ಲೇ ಇತರೆ ತಾಲೂಕುಗಳ ಅಧಿಕಾರಿಗಳು ನಿರ್ವಹಣೆ ಮಾಡಬೇಕು ಎಂದ ಜಿಲ್ಲಾಧಿಕಾರಿಗಳು, ನಗರ ಪ್ರದೇಶಗಳಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಆದ್ಯತೆ ನೀಡಬೇಕು. ಮನೆಗಳಲ್ಲಿ ಕಸ ವಿಂಗಡಣೆ ಮಾಡುವಂತೆ ನಾಗರಿಕರಲ್ಲಿ ಜಾಗೃತಿ ಮೂಡಿಸಿ ಎಂದು ಸಲಹೆ ನೀಡಿದರು.  ಹೀಗೆ ಸಂಗ್ರಹವಾದ ಕಸವನ್ನು ವೈಜ್ಞಾನಿಕ ವಿಂಗಡಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಜರುಗಿಸಲಾಗುವುದುಎಂದುಎಚ್ಚರಿಕೆ ನೀಡಿದರು.

ಸರ್ವೇ ಮಾಡಲಾಗಿದೆ: ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಣುಕಾ ಮಾತನಾಡಿ, ಚಿಕ್ಕಬಳ್ಳಾಪುರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇಂಧನ ಕಾರ್ಯಕ್ಷಮತೆ ಸಾಧಿಸುವ ಸಂಬಂಧ ಸಿಸಿಎಂಎಸ್‌(ಸೆಂಟ್ರಲ್‌ ಕಂಟ್ರೋಲ್‌ ಅಂಡ್‌ ಮಾನಿಟರಿಂಗ್‌ ಸಿಸ್ಟಿಂ) ಮೂಲಕ ಬೀದಿ ದೀಪಗಳ ನಿರ್ವಹಣೆಗೆ ಪೌರಾಡಳಿತ ನಿರ್ದೇಶನಾಲಯದ ಟ್ರ್ಯಾನ್ಸಾಕ್ಷನ್‌ ಅಡ್ವೈಸರ್‌ ಆಗಿರುವ ಪ್ರೈಸ್‌ ವಾಟ್‌ಹೌಸ್‌ ಕಾಪರ್ಸ್‌ ಪ್ರೈವೇಟ್‌ ಲಿಮಿಟೆಡ್‌ ಅವರಿಗೆ ಸರ್ವೇಗೆ ಸೂಚಿಸಲಾಗಿತ್ತು. ಅದರಂತೆ ಸದರಿಯವರು ಚಿಕ್ಕಬಳ್ಳಾಪುರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸರ್ವೇ ಮಾಡಿ, ಒಟ್ಟು 24,802 ಕಂಬಗಳಲ್ಲಿ 19,538 ಬೀದಿ ದೀಪಗಳಿದ್ದು, ಅದರಲ್ಲಿ ಶೇ.12 ಎಲ್‌ಇಡಿ ದೀಪ ಇರುವುದಾಗಿ ಮಾಹಿತಿ ನೀಡಿದ್ದಾರೆಂದರು.

ಸಭೆಯಲ್ಲಿ ಕಾರ್ಯಪಾಲಕ ಅಭಿಯಂತರರು, ಜಿಲ್ಲೆಯ ಎಲ್ಲಾ ಪೌರಾಯುಕ್ತರು, ಎಲ್ಲಾ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಬೇಕು. ಸ್ವಚ್ಛ ಸರ್ವೇಕ್ಷಣಾ ಅಭಿಯಾನಯನ್ನುಯಶಸ್ವಿಗೊಳಿಸಲು ಹೆಚ್ಚಿನ ರೀತಿಯಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಪ್ರತಿ ವಾರ್ಡ್‌ಗಳಲ್ಲಿ ಸ್ವಚ್ಛತಾ ಕ್ಯಾಪ್ಟನ್‌ ನೇಮಕ ಮಾಡಿ, ಸ್ವತ್ಛತಾಕಾರ್ಯದ ಬಗ್ಗೆ ಪ್ರತಿನಿತ್ಯ ಮಾಹಿತಿ ನೀಡಬೇಕು. ಆರ್‌.ಲತಾ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.