ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ
Team Udayavani, Apr 6, 2021, 1:58 PM IST
ಶಿಡ್ಲಘಟ್ಟ: ನಗರ ಪ್ರದೇಶದ ಮಾದರಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ವೈಜ್ಞಾನಿಕವಾಗಿ ಕಸವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಜಿಲ್ಲೆಯಲ್ಲಿ ಸ್ವಚ್ಛ ಭಾರತ್ ಅಭಿಯಾನ ಯೋಜನೆಯಡಿ 38 ಘನ ತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಿಸಲಾಗಿದೆ. ಈತಿಂಗಳ ಅಂತ್ಯದೊಳಗೆ ಹೆಚ್ಚುವರಿ 25ಘಟಕಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಪಂ ಉಪಕಾರ್ಯದರ್ಶಿ ಡಾ.ಎನ್.ನೋಮೇಶ್ ಕುಮಾರ್ ತಿಳಿಸಿದರು.
ನಗರದ ತಾಪಂ ಸಭಾಂಗಣದಲ್ಲಿ ನರೇಗಾ ಹಾಗೂ ಸ್ವಚ್ಛ ಭಾರತ್ ಅಭಿಯಾನ ಯೋಜನೆಯಡಿ ಕೈಗೊಂಡಿರುವ ಅಭಿವೃದ್ಧಿಕಾಮಗಾರಿಗಳ ಕುರಿತು ಗ್ರಾಪಂಗಳ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಲು ಆದ್ಯತೆ ನೀಡಲಾಗಿದೆ. ಗ್ರಾಪಂ ಮಟ್ಟದಲ್ಲಿ ಸ್ವಚ್ಛ ಭಾರತ್ ಅಭಿಯಾನಮೂಲಕ ತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಗ್ರಾಮಸ್ಥರು ಮನೆಯಲ್ಲಿ ಒಣ ಮತ್ತು ಹಸಿ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಿ, ಗ್ರಾಮನೈರ್ಮಲ್ಯವನ್ನು ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡಿದರು.
ಸೌಲಭ್ಯ ವೃದ್ಧಿಗೊಳಿಸಲು ಯೋಜನೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಡಿ ಕಳೆದ ಸಾಲಿನಲ್ಲಿ 69ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡಿ, ಕೃಷಿ,ತೋಟಗಾರಿಕೆ, ರೇಷ್ಮೆ ಹಾಗೂ ಪಶುಸಂಗೋಪನೆ ಕಾಮಗಾರಿಗಳು ಜೊತೆಗೆ ಅಂತರ್ಜಲ ಮಟ್ಟವನ್ನು ವೃದ್ಧಿಗೊಳಿಸುವ ಕೆರೆಗಳ ಪುನಶ್ಚೇತನಕಾಲುವೆಗಳ ನಿರ್ಮಾಣ, ನೀರಿನ ಹೊಂಡಗಳು,ಚೆಕ್‌ಡ್ಯಾಮ್‌ಗಳು, ಬದುಗಳ ನಿರ್ಮಾಣ,ಬಚ್ಚಲು ಗುಂಡಿಗಳು, ಗೋ ಕುಂಟೆ ಹಾಗೂಕಲ್ಯಾಣಿಗಳನ್ನು ನಿರ್ಮಿಸಲು ಆದ್ಯತೆ ನೀಡಲಾಗಿದೆ. ಅದೇ ರೀತಿ ಪ್ರಸಕ್ತ ಸಾಲಿನಲ್ಲಿ 90ಲಕ್ಷ ಮಾನವ ದಿನಗಳನ್ನು ಸೃಜನ ಮಾಡಿ, ಗ್ರಾಮೀಣ ಪ್ರದೇಶದಲ್ಲಿ ಮೂಲಭೂತಸೌಕರ್ಯಗಳನ್ನು ವೃದ್ಧಿಗೊಳಿಸಲು ಯೋಜನೆ ರೂಪಿಸಲಾಗಿದೆ. ಗ್ರಾಪಂ ಅಧಿಕಾರಿಗಳು ಇದಕ್ಕೆಪೂರಕವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ತಾಪಂ ಇಒ ಚಂದ್ರಕಾಂತ್, ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ಜಿಪಂನಮಧು ಹಾಗೂ ವಿವಿಧ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.