ಸಂವಿಧಾನದ ಕಾನೂನುಗಳಿಂದ ಕಾರ್ಮಿಕರ ರಕ್ಷಣೆ
ವೇತನ ಪರಿಷ್ಕರಣೆ, ನಿವೃತ್ತಿಯಾದ ನೌಕರರಿಗೆ ಪಿಂಚಣೆ ಹೀಗೆ ಹತ್ತಾರು ಸವಲತ್ತು ನೀಡಿದ್ದಾರೆ
Team Udayavani, May 24, 2022, 6:31 PM IST
ಗೌರಿಬಿದನೂರು: ಕಾರ್ಮಿಕರ ಅಭಿವೃದ್ಧಿಗೆ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಹಲವಾರು ಸವಲತ್ತು ನೀಡಿ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರೆಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.
ನಗರದ ಹೊರವಲಯದಲ್ಲಿರುವ ಸಾಮಾನತಾ ಸೌಧದಲ್ಲಿ ಅಂಬೇಡ್ಕರ್ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘ, ಶೀಟ್ ಸೆಂಟರಿಂಗ್ ಕಾರ್ಮಿಕರ ಸಂಘ, ಕರ್ನಾಟಕ ಜಾಗೃತಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳ ಕಾರ್ಮಿಕರ ಸಂಘ, ಹಮಾಲಿ ಕಾರ್ಮಿಕರ ಸಂಘ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬಿಂಗ್ ಕಾರ್ಮಿಕ ಸಂಘ, ವೆಲ್ದಿಂಗ್ ಕಾರ್ಮಿಕ ಸಂಘ ಹಾಗೂ ಇತರೆ ಸಂಘಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕಾರ್ಮಿಕ ದಿನಚರಣೆ ಹಾಗೂ ಉಚಿತ ಆರೋಗ್ಯ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.
ಕಾರ್ಮಿಕರು ಈ ದೇಶದ ಬೆನ್ನೆಲುವು ಅವರ ಪರಿಶ್ರಮದಿಂದ ಈ ದೇಶದ ಆರ್ಥಿಕ ಮಟ್ಟ ಏರಿಕೆಯಾಗಿದೆ. ಅಂಬೇಡ್ಕರ್ ಅವರು ಕಾನೂನು ಮಂತ್ರಿಯಾದ ವೇಳೆ ಕಾರ್ಮಿಕ ವಲಯದಲ್ಲಿ ಹಲವಾರು ಬದಲಾವಣೆ ತಂದರು. ಕೆಲಸದ ವೇಳೆ ನಿಗದಿಯಾದ ವೇತನ ಪರಿಷ್ಕರಣೆ, ನಿವೃತ್ತಿಯಾದ ನೌಕರರಿಗೆ ಪಿಂಚಣೆ ಹೀಗೆ ಹತ್ತಾರು ಸವಲತ್ತು ನೀಡಿದ್ದಾರೆ ಎಂದರು.
ಕಾರ್ಮಿಕ ಸಂಘದ ಅಧ್ಯಕ್ಷ ವೆಂಕಟಾದ್ರಿ ಮಾತನಾಡಿ, ಸರ್ಕಾರ ಕಾರ್ಮಿಕರ ಕಲ್ಯಾಣಕ್ಕೆ ಹಲವು ಸೌಲಭ್ಯಗಳನ್ನು ನೀಡಿದೆ. ಇಂದು ಅವರಿಗೆ ಉಚಿತ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಿದೆ ಇದರಿಂದ ಅವರಿಗೆ ಹಲವು ಕಾಯಿಲೆಗಳಿಗೆ ಉಚಿತ ಔಷಧಿ ಸಿಗಲಿದೆ ಎಂದರು. ಇದೇ ವೇಳೆ ಕಾರ್ಮಿಕರಿಗೆ ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ಕಾರ್ಡ್ ಉಚಿತವಾಗಿ ವಿತರಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡಲಾಯಿತು.
ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ವರಲಕ್ಷ್ಮಿ ಅಂಬೇಡ್ಕರ್ ಸಂಘದ ಅಧ್ಯಕ್ಷ ವೆಂಕಟಾದ್ರಿ, ದಲಿತ ಮುಖಂಡ ಸೋಮಯ್ಯ, ವಕೀಲ ಸಂಘದ ಅಧ್ಯಕ್ಷ ಡಿ.ರಾಮದಾಸ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಮರಳೂರು ಹನುಮಂತರೆಡ್ಡಿ, ನಗರಸಬೆ ಸದಸ್ಯ ವೆಂಕಟರೆಡ್ಡಿ, ಕಾರ್ಮಿಕ ಮುಖಂಡ ಜಬೀ, ಇಂತಿಯಾಜ್, ನಜೀರ್, ಇಡಗೂರು ವೈ.ಟಿ.ಪ್ರಸನ್ನಕುಮಾರ್, ನಗರಸಭೆ ಸದಸ್ಯ ರಫೀಕ್, ಸತ್ಯಪ್ರಕಾಶ್ ಮುಖಂಡ ವೆಂಕಟ್, ವೇದಲವೇಣಿ ವೇಣು, ಸುದರ್ಶನ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.