ಸರ್ಕಾರದ ವಿರುದ್ಧ ಪ್ರತಿಭಟನೆ
Team Udayavani, Aug 22, 2020, 1:17 PM IST
ಶಿಡ್ಲಘಟ್ಟ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ, ರೈತ, ಕೂಲಿ ಕಾರ್ಮಿಕರ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಭಾವಚಿತ್ರಕ್ಕೆ ಶಾಸಕ ವಿ.ಮುನಿಯಪ್ಪ ಅವರ ನೇತೃತ್ವದಲ್ಲಿ ಪುಷ್ಪ ನಮನ ಸಲ್ಲಿಸಿದ ಕಾರ್ಯಕರ್ತರು, ತಾಲೂಕು ಕಚೇರಿ ಮುಂದೆ ಪ್ರತಿಭಟಿಸಿದರು.
ಶಾಸಕ ವಿ.ಮುನಿಯಪ್ಪ ಮಾತನಾಡಿ, ರಾಜ್ಯದಲ್ಲಿ ನೆರೆ ಹಾವಳಿ ಮತ್ತು ಕೋವಿಡ್ ಸಂಕಷ್ಟದಿಂದ ಜನಸಾಮಾ ನ್ಯರು ಪರದಾಡುತ್ತಿದ್ದಾರೆ. ಸರ್ಕಾರ ಇವರ ನೆರವಿಗೆ ಧಾವಿಸುವ ಬದಲಿಗೆ ಅವ್ಯವಹಾರಗಳ ವಿರುದ್ಧ ಧ್ವನಿ ಎತ್ತುವ ಕಾಂಗ್ರೆಸ್ ಮುಖಂಡರಿಗೆ ಲೀಗಲ್ ನೋಟಿಸ್ ನೀಡಿ ಹೆದರಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ದೂರಿದರು.
ತಹಶೀಲ್ದಾರ್ ಕೆ.ಅರುಂಧತಿಗೆ ಮನವಿ ಸಲ್ಲಿಸಲಾಯಿತು. ಕೆಎಂಎಫ್ ನಿರ್ದೇಶಕ ಶ್ರೀನಿವಾಸ್ ರಾಮಯ್ಯ, ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ನಾಗರಾಜ್, ಜಿಪಂ ಮಾಜಿ ಅಧ್ಯಕ್ಷ ಬಿ.ಸುಬ್ರಮಣಿ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್, ರಾಜ್ಯ ಮಹಿಳಾ ಕಾರ್ಯದರ್ಶಿ ಯಾಸ್ಮಿàನ್ ತಾಜ್, ಮಹಮದ್ ಹಫೀಜ್, ಕಾರ್ಮಿಕ ಘಟಕದ ಅಧ್ಯಕ್ಷ ಇಂತಿಯಾಜ್, ಬಾಂಬೆ ನವಾಜ್, ಮಳಮಾಚನಹಳ್ಳಿ ರಾಮಾಂಜಿ, ಭಕ್ತರಹಳ್ಳಿ ಚಿದಾನಂದಮೂರ್ತಿ, ಮಿತ್ನಹಳ್ಳಿ ಹರೀಶ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಳೇ ರಘು, ಅಬ್ದುಲ್ ಗಫೂರ್, ಕೃಷ್ಣಾರೆಡ್ಡಿ, ಮುತ್ತೂರು ವೆಂಕಟೇಶ್, ಕಾಕಚೊಕ್ಕಂಡಹಳ್ಳಿ ಮಂಜುನಾಥ್, ಸಾದಿಕ್, ತನ್ವೀರ್ ಪಾಷ, ಫಿದಾಹುಸೇನ್, ಕೃಷ್ಣಮೂರ್ತಿ, ಅನಿಲ್ ಕುಮಾರ್, ಜಂಗಮಕೋಟೆ ಮುನಿರಾಜು ಉಪಸ್ಥಿತರಿದ್ದರು.