ನೂತನ ಪಿಂಚಣಿ ರದ್ದಿಗೆ ಪ್ರತಿಭಟನೆ
Team Udayavani, Oct 4, 2018, 1:24 PM IST
ಚಿಂತಾಮಣಿ: ನೂತನ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು
ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಪದಾಧಿಕಾರಿಗಳು ರಕ್ತ ಕೊಟ್ಟೇವು
ಪಿಂಚಣಿ ಬಿಡೆವು ಎಂಬ ಘೋಷಣೆ ಯಡಿ ರಕ್ತದಾನ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು.
ರಕ್ತದಾನ ಮಾಡಿದ ಎನ್‌ಪಿಎಸ್ ನೌಕರರು ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿಯವರೆಗೆ ಮೆರ
ವಣಿಗೆ ಮೂಲಕ ತೆರಳಿ ತಹಶೀಲ್ದಾರ್ ವಿಶ್ವನಾಥ ಅವರ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ನಮ್ಮ ಹಣಕ್ಕೆ ಭದ್ರತೆ ಇಲ್ಲ: ಸರ್ಕಾರ ನೂತನ ಪಿಂಚಣಿ ಯೋಜನೆ ಜಾರಿ ಮಾಡಿ ಯೋಜನೆಯಡಿಯಲ್ಲಿ ನೌಕರ
ರಿಂದ ವೇತನದಲ್ಲಿ ಪಡೆಯುವ ಶೇ.10 ರಷ್ಟು ಹಣವನ್ನು ಯಾವುದೇ ನಿರ್ಧಿಷ್ಟ ಕಾನೂನು ರಚಿಸದೆ, ಭದ್ರತೆ ನೀಡದೆ
ಷೇರು ಮಾರುಕಟ್ಟೆಗಳಲ್ಲಿ ತೊಡಗಿಸುತ್ತಿದೆ. ಈ ರೀತಿ ಹಣಕ್ಕೆ ಯಾವುದೆ ಭದ್ರತೆ ಇಲ್ಲ ಆದ್ದರಿಂದ ನೂತನ ಪಿಂಚಣಿ
ಯೋಜನೆಯನ್ನು ರದ್ದು ಮಾಡಬೇಕು ಎಂದು ನೌಕರರು ಒತ್ತಾಯಿಸಿದ್ದಾರೆ.
ಈ ಪ್ರತಿಭಟನೆಯಲ್ಲಿ ಎನ್‌ಪಿಎಸ್ ನೌಕರರ ಸಂಘದ ಗೌರವ ಅಧ್ಯಕ್ಷ ಬಿ ಜನಾರ್ದನ ರೆಡ್ಡಿ, ಅಧ್ಯಕ್ಷ ಬಾಹುಬಲಿ
ಹಳಿಂಗಳಿ, ಕಾರ್ಯದರ್ಶಿ ನರೇಂದ್ರ, ಉಪಾಧ್ಯಕ್ಷರಾದ ನರಸಿಂಹ. ಕೆ.ಎಸ್, ಜಗದೀಶ್.ಕೆ.ಎನ್, ಪ್ರಾಥಮಿಕ ಶಾಲಾ
ಶಿಕ್ಷಕರ ಸಂಘದ ಅಧ್ಯಕ್ಷ ಆಶೋಕ್ ಕುಮಾರ್, ರಾಜ್ಯ ಉಪಾಧ್ಯಕ್ಷ ಕೆ.ವಿ ಚೌಡಪ್ಪ, ಆರ್.ವಿ ರವಣಾರೆಡ್ಡಿ, ಸೇರಿದಂತೆ ಅನೇಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ಹೊಸ ಸೇರ್ಪಡೆ
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.