ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ಧರಣಿ
Team Udayavani, Jul 11, 2019, 3:00 AM IST
ಚಿಕ್ಕಬಳ್ಳಾಪುರ: ಸೇವಾ ಜ್ಯೇಷ್ಠತೆಯ ಆಧಾರದಲ್ಲಿ ಕನಿಷ್ಠ ವೇತನ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ಈ ವರ್ಷದಿಂದಲೇ ಆರಂಭಿಸುವಂತೆ ಆಗ್ರಹಿಸಿ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಿಲ್ಲೆಯ ಸಹಸ್ರಾರು ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರವನ್ನು ಆಗ್ರಹಿಸಿದರು.
ನಗರದ ಅಣಕನೂರು ಗ್ರಾಮದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ ಅಂಗನವಾಡಿ ಕಾರ್ಯಕರ್ತರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಘೊಷಣೆಗಳನ್ನು ಕೂಗಿದರು. ಸರ್ಕಾರ ಅಂಗನವಾಡಿ ಕೇಂದ್ರಗಳನ್ನು ಮುಚ್ಚಿಸಲು ಹುನ್ನಾರ ನಡೆಸಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.
ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಬೇಕೆಂದು ಮೊದಲನಿಂದಲೂ ಸರ್ಕಾರದ ಮೇಲೆ ಒತ್ತಡ ತಂದರೂ ಸರ್ಕಾರ ಅಂಗನವಾಡಿ ನೌಕರರ ಹಿತ ಕಾಯುವುದರ ಬದಲು ಅವರನ್ನು ಬೀದಿಪಾಲು ಮಾಡಲು ಹೊರಟಿಸಿರುವುದು ಸರಿಯಲ್ಲ. ಸರ್ಕಾರ ಅಂಗನವಾಡಿ ಕಾರ್ಯಕರ್ತರಿಗೆ ಕಾಲಕಾಲಕ್ಕೆ ಸಮರ್ಪಕವಾಗಿ ವೇತನ ಕೊಡುತ್ತಿಲ್ಲ. ಕೋಳಿ ಮೊಟ್ಟೆ ಹಾಗು ತರಕಾರಿ ಪೂರೈಕೆ ಮಾಡಿರುವ ಹಣ ಸಹ ಬಿಡುಗಡೆ ಮಾಡಿಲ್ಲ.
ಇದರಿಂದ ಅಂಗನವಾಡಿ ಕೇಂದ್ರಗಳ ನಿರ್ವಹಣೆ ತುಂಬ ಕಷ್ಟವಾಗಿದೆ. ಸಮರ್ಪಕ ಮೂಲ ಸೌಕರ್ಯಗಳು ಇಲ್ಲದೇ ಬಹಳಷ್ಟು ಅಂಗನವಾಡಿ ಕೇಂದ್ರಗಳು ಸೊರಗಿವೆ. ಸರ್ಕಾರ ಇದರ ಕಡೆಗೆ ಗಮನ ಕೊಡುತ್ತಿಲ್ಲ ಎಂದು ಪ್ರತಿಭಟನಾನಿರತ ಅಂಗನವಾಡಿ ಕಾರ್ಯಕರ್ತೆಯರು ಬೇಸರ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷೆ ಲಕ್ಷ್ಮೀದೇವಮ್ಮ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರಿಗೆ ಹಲವು ತಿಂಗಳ ಬಾಕಿ ಗೌರವ ಧನ ನೀಡುವಂತೆ ಮನವಿ ಮಾಡಿದರೂ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದರು. ಸರ್ಕಾರ ಸಮಗ್ರ ಮಕ್ಕಳ ಪೋಷಣೆ ಬಗ್ಗೆ ತಾತ್ಸಾರ ಮನೋಭಾವನೆ ಹೊಂದಿದೆ ಎಂದರು.
ಸರ್ಕಾರದ ಮಹತ್ವಕಾಂಕ್ಷೆ ಮಾತೃಪೂರ್ಣ ಯೋಜನೆ ಸೇರಿದಂತೆ ಮಕ್ಕಳ ಪೌಷ್ಟಿಕ ಆಹಾರ ವಿತರಣೆ ಮತ್ತಿತರ ಕಾರ್ಯಕ್ರಮಗಳನ್ನು ಅಂಗನವಾಡಿಗಳ ಮೂಲಕ ಮಾಡಲಾಗುತ್ತಿದೆ. ಆದರೆ ಸರ್ಕಾರ ಅಂಗನವಾಡಿ ಕೇಂದ್ರಗಳ ಪುನಶ್ಚೇತನ ಬದಲಾಗಿ ಮುಚ್ಚುವ ಸ್ಥಿತಿಗೆ ತಂದು ನಿಲ್ಲಿಸುತ್ತಿವೆ ಎಂದರು. ಹಲವು ಬಾರಿ ಸರ್ಕಾರಕ್ಕೆ ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸಿದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆಸಮಾಧಾನ ಹೊರಹಾಕಿದರು.
ಪ್ರತಿಭಟನೆಯಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ರತ್ನಮ್ಮ, ಖಜಾಂಚಿ ವೆಂಕಟಲಕ್ಷ್ಮಮ್ಮ, ಪದಾಧಿಕಾರಿಗಳಾದ ಭಾಗ್ಯಲಕ್ಷ್ಮೀ, ವೆಂಕಟರತ್ನ, ಕೆ.ಗೀತಾ, ಸುಜಾತಾ, ಪದ್ಮ, ಮುನಿರತ್ನಮ್ಮ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಸಾವಿರಾರು ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಅಪರ ಜಿಲ್ಲಾಧಿಕಾರಿಗಳಿಗೆ ಮನವಿ: ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿದ ಬಳಿಕ ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿ ಆರತಿ ಆನಂದ್‌ಗೆ ಪ್ರತಿಭಟನಕಾರರು ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾ ನಿಯಮಾವಳಿ ರಚಿಸಬೇಕು, ಅಂಗನವಾಡಿ ನೌಕರರು ಇತರೇ ಇಲಾಖೆ ಕೆಲಸ ಕಾರ್ಯಗಳಿಗೆ ಹೋಗುವಾಗ ಅಪಘಾತ ನಡೆದು ಮೃತಪಟ್ಟರೆ ತಕ್ಷಣ ಪರಿಹಾರ ನೀಡಬೇಕು. ಅವಲಂಬಿತರಿಗೆ ಅನುಕಂಪದ ಮೇಲೆ ಸರ್ಕಾರಿ ಕೆಲಸ ನೀಡಬೇಕು.
ಕೇಂದ್ರ ಸರ್ಕಾರ ಕಡಿತ ಮಾಡಿರುವ ಅನುದಾನವನ್ನು ವಾಪಸ್ಸು ನೀಡಬೇಕು, ಖಾಲಿ ಇರುವ ಅಂಗನವಾಡಿ ನೌಕರರ ಹಾಗು ಕಾರ್ಯಕರ್ತೆಯರನ್ನು ತಕ್ಷಣ ಭರ್ತಿ ಮಾಡಬೇಕು, ಅಂಗನವಾಡಿ ಕಾರ್ಯಕರ್ತೆಯರಿಗೆ ಬಡ್ತಿ ನೀಡಲು ಇರುವ ಅಡ್ಡಿಗಳನ್ನು ತೆರವುಗೊಳಿಸಬೇಕು. 5 ವರ್ಷ ಪೂರೈಸಿರುವ ಮೇಲ್ವಿಚಾರಕರನ್ನು ಕಡ್ಡಾಯವಾಗಿ ವರ್ಗಾವಣೆ ಮಾಡಬೇಕೆಂದು ಕೋರಿ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
Gudibande: ಹೆಸರಿಗಷ್ಟೇ ಬಸ್ ನಿಲ್ದಾಣ; ಬಸ್‌ಗಳೇ ಬರಲ್ಲ
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.