ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
Team Udayavani, Oct 4, 2020, 2:08 PM IST
ಗುಡಿಬಂಡೆ: ಕೋವಿಡ್ ನಿಯಂತ್ರಿಸುವಲ್ಲಿ ಮತ್ತು ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವಲ್ಲಿ ತಮ್ಮ ಪ್ರಾಣ ಪಣಕ್ಕಿಟ್ಟು ಸೇವೆ ಸಲ್ಲಿಸಿದರೂ ಸಹ ಸರ್ಕಾರ ನಮಗೆ ಸೇವಾ ಭದ್ರತೆ ನೀಡುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಪ್ರತಿಭಟನೆ ಉದ್ದೇಶಿ ಸಂಘಟನೆಯ ತಾಲೂಕು ಅಧ್ಯಕ್ಷ ಈಶಣ್ಣ ಮಾತನಾಡಿ, ಆರೋಗ್ಯ ಇಲಾಖೆಯಲ್ಲಿ ಸುಮಾರು 15ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಕಳೆದ 7 ತಿಂಗಳಿನಿಂದ ಸರಿಯಾಗಿ ಮನೆಗಳಿಗೆ ಹೋಗದೆ ಕೋವಿಡ್ ತಡೆಗೆ ಮತು ಜಾಗೃತಿ ಮೂಡಿಸುವಲ್ಲಿ ಹಗಲಿರುಳು ದುಡಿದಿದ್ದೇವೆ. ಆದರೆ ನಮ್ಮ ದುಡಿಮೆಗೆ ಸಮಾನ ವೇತನ ಸರ್ಕಾರ ನೀಡುತ್ತಿಲ್ಲ. ಕೂಡಲೇ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಗುತ್ತಿಗೆಮತ್ತು ಹೊರ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.
ತಾಲೂಕು ಸಂಚಾಲಕಿ ಮುನಿರತ್ನಮ್ಮ ಮಾತನಾಡಿ, ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಅವಧಿ ವಿಸ್ತರಿಸಬೇಕು, ಮುಷ್ಕರ ಸಮಯದಲ್ಲಿ ಕಡಿತಗೊಳಿಸಿರುವ ವೇತನ ನೀಡಬೇಕು ಹಾಗೂ ನೌಕರರ ಕಲ್ಯಾಣ ನಿಧಿ ಅಥವಾ ಕಲ್ಯಾಣ ಮಂಡಳಿಗಳನ್ನು ರಚಿಸಬೇಕು ಒತ್ತಾಯಿಸಿದರು. ತಾಲೂಕು ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಕೆಲಸಕ್ಕೆ ಹಾಜರಾಗದೆ ಪ್ರತಿಭಟನೆಯಲ್ಲಿ ಭಾಗವಹಿಸಿ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
Gudibande: ಹೆಸರಿಗಷ್ಟೇ ಬಸ್ ನಿಲ್ದಾಣ; ಬಸ್‌ಗಳೇ ಬರಲ್ಲ
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.