ಚಿಕ್ಕಬಳ್ಳಾಪುರದಲ್ಲೂ ಡಿಕೆಶಿ ಪರ ಪ್ರತಿಭಟನೆಯ ಬಿಸಿ: ಹೆದ್ದಾರಿ ತಡೆಗೆ ಕೈ ನಾಯಕರ ಯತ್ನ
Team Udayavani, Sep 4, 2019, 1:10 PM IST
ಚಿಕ್ಕಬಳ್ಳಾಪುರ; ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನ ಖಂಡಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಮಾಜಿ ಸಚಿವರಾದ ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಆರೋಪಿಸಿದರು.
ಹೆದ್ದಾರಿ ತಡೆಗೆ ಯತ್ನ
ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಇಂದು ಬೆಳಗ್ಗೆ ಬೆಂಗಳೂರು ಹೈದರಾಬಾದ್ ನಡುವಿನ ರಾಷ್ಟ್ರೀಯ ಹೆದ್ದಾರಿ ತಡೆಗೆ ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದರು. ಆದರೆ ಪೊಲೀಸರು ಅದಕ್ಕೆ ಅವಕಾಶ ಕೊಡದೇ ಅಲ್ಲಿಂದ ಪ್ರತಿಭಟನಾಕಾರನ್ನು ಚದುರುಸಿದರು.
ಕೈ ಪ್ರತಿಭಟನೆಗೆ ದಳ ಸಾಥ್
ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡು ಡಿಕೆಶಿ ಪರ ಜೈಕಾರಗಳನ್ನು ಕೂಗಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಎಸ್.ಎಂ.ಮುನಿಯಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ, ಜಿಪಂ ಅಧ್ಯಕ್ಷ ಹೆಚ್ ವಿ.ಮಂಜುನಾಥ, ಪಕ್ಷದ ಮುಖಂಡರಾದ ಜಿ.ಹೆಚ್.ನಾಗರಾಜ್, ಯಲುವಹಳ್ಳಿ ನಾಗರಾಜ್, ಕೆಪಿಸಿಸಿ ಸದಸ ಎಸ್.ಪಿ.ಶ್ರೀನಿವಾಸ್ , ಕುಂದಲಗುರ್ಕಿ ಮುನೀಂದ್ರ, ಅಡ್ಡಗಲ್ ಶ್ರೀದರ್ ಹಾಗೂ ಜೆಡಿಎಸ್ ಮುಖಂಡರಾದ ಲಾಯರ್ ನಾರಾಯಸ್ವಾಮಿ, ಬಾಲಕುಂಟಹಳ್ಳಿ ಮುನಿಯಪ್ಪ, ವಿನಯ್ ಶ್ಯಾಮ್ ,ಬಿ ಎಸ್.ರಫೀವುಲ್ಲಾ, ಸುನಿಲ್ ಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದಾರೆ.
ಜಿಲ್ಲಾಧ್ಯಂತ ಪ್ರತಿಭಟನೆ
ಡಿಕೆಶಿ ಬಂಧನ ಖಂಡಿಸಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಶಿಡ್ಲಘಟ್ಟ, ಗೌರಿಬಿದನೂರು ಮತ್ತಿತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೇಂದ್ರದ ವಿರುದ್ದ ದಿಕ್ಕಾರಗಳನ್ನು ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಜಿಲ್ಲೆಯಲ್ಲಿ ಪೊಲೀಸ್ ಭದ್ರತೆ
ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನದ ಹಿನ್ನಲೆಯಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.