ಬಂಗಾರಪೇಟೆ ತಹಶೀಲ್ದಾರ್ ಹತ್ಯೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ
ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ನೀಡುವ ಕಾನೂನು ಜಾರಿಗೆ ಆಗ್ರಹ
Team Udayavani, Jul 10, 2020, 12:55 PM IST
ಚಿಕ್ಕಬಳ್ಳಾಪುರ: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಭೂಮಿ ಸರ್ವೆ ಕಾರ್ಯಕ್ಕೆ ತೆರಳಿದ್ದ ತಹಶೀಲ್ದಾರ್ ಚಂದ್ರಮೌಳೇಶ್ವರನ್ನು ಗುರುವಾರ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಖಂಡಿಸಿ ಶುಕ್ರವಾರ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಮೌನ ಪ್ರತಿಭಟನೆ ನಡೆಸಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಜಿ.ಹರೀಶ್ ಗಂಗಪ್ಪ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸರ್ಕಾರಿ ನೌಕರರು ಪ್ರತಿಭಟನೆ ನಡೆಸಿ ಕೂಡಲೇ ಕೊಲೆ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದರು.
ಸರ್ಕಾರ ಕೂಡಲೇ ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ನೀಡುವ ಕಾನೂನು ರೂಪಿಸಬೇಕೆಂದ ಅವರು ಹತ್ಯೆಯಾದ ತಹಶಿಲ್ದಾರರ ಕುಟುಂಬಕ್ಕೆ ಗರಿಷ್ಟ ಪ್ರಮಾಣದ ಪರಿಹಾರವನ್ನು ನೀಡಬೇಕೆಂದರು.
ಪ್ರತಿಭಟನೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎ.ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ ರಾಮಶೇಷಪ್ಪ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ನಾಗರಾಜ್, ಪದಾಧಿಕಾರಿಗಳಾದ ಸುನೀಲ್, ರಾಜೇಂದ್ರ, ಅರುಣ್, ಅಮರ್, ಎಸ್.ಎ.ಕೃಷ್ಣ, ನಜೀರ್, ಅಶೋಕ್ ಸೇರಿದಂತೆ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?
Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ
Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ
Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.