ಹಳ್ಳಿಗಳಿಗೆ ಕುಡಿವ ನೀರು ಪೂರೈಸಿ
Team Udayavani, Sep 25, 2020, 2:28 PM IST
ಸಾಂದರ್ಭಿಕ ಚಿತ್ರ
ಚಿಂತಾಮಣಿ: ಭಕ್ತರಹಳ್ಳಿ ಅರಸೀಕೆರೆ ನೀರನ್ನು ಕೆರೆಯಲ್ಲೇ ಶುದ್ಧೀಕರಿಸಿ ಅಚ್ಚುಕಟ್ಟುದಾರರಿಗೆ ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸಬೇಕೆಂದು ಪ್ರತಿಭಟಿಸಿದ್ದ ಗ್ರಾಮಸ್ಥ ರೊಂದಿಗೆ ತಹಶೀಲ್ದಾರ್ ಹನುಮಂತರಾಯಪ್ಪ ಮತ್ತು ಇಒ ಮಂಜುನಾಥ ಸಭೆ ನಡೆಸಿ ಗ್ರಾಮಸ್ಥರ ಬೇಡಿಕೆ ಈಡೇರಿಸಲು ಮೇಲಾಧಿಕಾರಿಗಳ ಜೊತೆ ಚರ್ಚೆ ನಡೆಸಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ ಭಕ್ತರಹಳ್ಳಿ, ಅರಿಸೀಕೆರೆಯಲ್ಲಿ ಶುದ್ಧೀಕರಣ ಘಟಕ ಸ್ಥಾಪಿಸಿ ಆ ನೀರನ್ನು ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಅಚ್ಚುಕಟ್ಟುದಾರರಿಗೂ ಹಾಗೂ ಶೆಟ್ಟಿಹಳ್ಳಿಯ ಗ್ರಾ.ಪಂನ ಎರಡೂ ಹಳ್ಳಿ ಜೊತೆಗೆ ನಗರಕ್ಕೆ ಪೈಪ್ ಲೈನ್ ಮೂಲಕ ನೀರು ಹರಿಯುವ ದಾರಿಯಲ್ಲಿ ಬರುವ ಎಲ್ಲಾ ಹಳ್ಳಿಗಳಿಗೂ ಶುದ್ಧ ನೀರು ಒದಗಿಸಬೇಕೆಂದು ಒತ್ತಾಯಿಸಿದರು. ದಂಡಾಧಿಕಾರಿ ಹನುಮಂತರಾಯಪ್ಪ ಮಾತನಾಡಿ,ಈವಿಚಾರವನ್ನು ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆಹರಿಸುವುದಾಗಿ ಭರವಸೆ ನೀಡಿದರು. ನಾನು ರೈತ ಕುಟುಂಬದಿಂದ ಬಂದಿದ್ದು, ನನಗೂ ರೈತರ ಸಮಸ್ಯೆಗಳ ಬಗ್ಗೆ ತಿಳಿದಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ ಎಂದರು.
ತಾಪಂ ಇಒ ಮಂಜುನಾಥ್ ಮಾತನಾಡಿ, ಈ ವಿಚಾರವನ್ನು ಜಿಪಂ ಸಿಇಒ ಬಳಿ ಚರ್ಚಿಸಿದ್ದೇನೆ ಎಂದರು. ಕರ್ನಾಟಕ ನಗರ ನೀರು ಸರಬರಾಜು ಇಲಾಖೆಯ ಎಇಇ ಶ್ರೀನಿವಾಸರೆಡ್ಡಿ ಮತ್ತು ಟಿ.ಎಸ್.ಸುರೇಶ್, ಗ್ರಾಮೀಣ ನೀರು ಸರಬರಾಜು ಇಲಾಖೆಯ ಹೇಮಂತ್, ಶಿವಾನಂದ್, ಡಿವೈಎಸ್‌ಪಿ ವಿ.ಲಕ್ಷ್ಮಯ್ಯ, ಜಿಪಂ ಸದಸ್ಯ ಶ್ರೀನಿವಾಸ್, ಟಿ.ಪಿ.ಎಸ್ ಉಪಾಧ್ಯಕ್ಷ ನಾರಾಯಣಸ್ವಾಮಿ, ನಗರಸಭೆ ಆಯುಕ್ತ ಉಮಾಶಂಕರ್, ಪದ್ಮನಾಭ್, ಗ್ರಾಮಸ್ಥರಾದ ಕತ್ತರಿಗುಪ್ಪೆ, ಹಾಲು ನಾರಾಯಣಸ್ವಾಮಿ, ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.