ಉಪಚುನಾವಣೆಯ ನಂತರ ಸಿದ್ದರಾಮಯ್ಯಗೆ ವಿಪಕ್ಷ ಸ್ಥಾನ ಇರಲ್ಲ: ಪುಟ್ಟಸ್ಚಾಮಿ
Team Udayavani, Nov 25, 2019, 12:14 PM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆ ಫಲಿತಾಂಶದ ಬಳಿಕ ಸಿದ್ದರಾಮಯ್ಯ ವಿಪಕ್ಷ ಸ್ಥಾನ ಕಳೆದುಕೊಳ್ಳಲಿದ್ದಾರೆಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ತಿಳಿಸಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಲು ಕಾಂಗ್ರೆಸ್ ನಾಯಕರೇ ಮುಂದಾಗಿದ್ದಾರೆಂದರು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಯಾರು ಪ್ರಚಾರಕ್ಕೆ ಹೋಗುತ್ತಿಲ್ಲ ಎಂದರು. ಜೆಡಿಎಸ್ ಪಕ್ಷದ ಕುಮಾರಸ್ವಾಮಿ ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರ ಅವರಿಗೆ ಅಭಿವೃದ್ಧಿ, ಸ್ಥಿರ ಸರ್ಕಾರ ಬೇಕಿಲ್ಲ ಎಂದರು. ಉಪ ಚುನಾವಣೆ ಫಲಿತಾಂಶ ಬಳಿಕ ಮತ್ತೆ ಅವಕಾಶಕ್ಕೆ ಎದುರು ನೋಡುತ್ತಿರುವ ಕುಮಾರಸ್ವಾಮಿಗೆ ಹಾಗೂ ಮಧ್ಯಂತರ ಚುನಾವಣೆಗೆ ಕಾಯುತ್ತಿರುವ ಸಿದ್ದರಾಮಯ್ಯಗೆ ಭ್ರಮನಿರಸನವಾಗಲಿದೆ ಎಂದರು. ಕುಮಾರಸ್ವಾಮಿ ಮೈತ್ರಿ ಸರ್ಕಾರದಲ್ಲಿ ಶಾಸಕರನ್ನು ಬಾಡಿಗೆ ಕಾರ್ಮಿಕರಂತೆ ನೋಡಿದರು. ಅವರ ಕ್ಷೇತ್ರಗಳಿಗೆ ಅನುದಾನ ಕೊಡಲಿಲ್ಲ ಎಂದರು. ರಾಜ್ಯದ ಮುಖ್ಯಮಂತ್ರಿಯೊಬ್ಬರು ಐಷಾರಾಮಿ ಹೋಟೆಲ್ ನಲ್ಲಿ ಕೂತು ಆಡಳಿತ ನಡೆಸಿದ ಕೀರ್ತಿ ಕುಮಾರಸ್ಚಾಮಿಗೆ ಸಲ್ಲುತ್ತದೆ. ಉಪ ಚುನಾವಣೆ ಫಲಿತಾಂಶ ಬಳಿಕ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಕಣ್ಮರೆಯಾಗಲಿದೆ ಎಂದರು.
ರಾಜ್ಯದ 15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ರಾಜ್ಯದಲ್ಲಿ ಅಭಿವೃದ್ಧಿ, ಸ್ಥಿರ ಸರ್ಕಾರ ಕೊಡುವ ಶಕ್ತಿ ಕೇವಲ ಬಿಜೆಪಿಗೆ ಮಾತ್ರ ಇದೆ ಎಂದರು. ಅನರ್ಹ ಶಾಸಕರು ಮೈತ್ರಿ ಸರ್ಕಾರದಲ್ಲಿ ಆದ ನೋವು, ಅಪಮಾನ ತಾಳದೇ ಅವರಗಾಗಿಯೆ ಬಿಜೆಪಿ ಸೇರಿದ್ದಾರೆಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.