ಬೆಳೆವಿಮೆ ನೋಂದಣಿಗೆ ಜಾಗೃತಿ ಮೂಡಿಸಿ

ಮಾವು ಸೇರಿ ಇತರೆ ತೋಟಗಾರಿಕೆ, ಕೃಷಿ ಬೆಳೆಗಳಿಗೆ ಜು.31 ಕೊನೆ ದಿನವಾಗಿದೆ.

Team Udayavani, Jun 3, 2022, 5:53 PM IST

ಬೆಳೆವಿಮೆ ನೋಂದಣಿಗೆ ಜಾಗೃತಿ ಮೂಡಿಸಿ

ಚಿಕ್ಕಬಳ್ಳಾಪುರ: 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ “ಕರ್ನಾಟಕ ರೈತ ಸುರಕ್ಷ ಪ್ರಧಾನ ಮಂತ್ರಿ ಫಸಲ್‌ ಭಿಮಾ ಯೋಜನೆ’ಯಡಿ ಜಿಲ್ಲೆಯ ರೈತರು ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಲು ಜಾಗೃತಿ ಮತ್ತು ಮಾಹಿತಿ ನೀಡುವ ಸಂಚಾರ ವಾಹನಗಳಿಗೆ ಗುರುವಾರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾಧಿಕಾರಿ ಆರ್‌.ಲತಾ ಹಸಿರು ನಿಶಾನೆ ತೋರಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾದ್ಯಂತ 6 ಸಂಚಾರ ವಾಹನಗಳು ಜು.31ರವರೆಗೂ ಸಂಚರಿಸಿ ರೈತರಿಗೆ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿಮೆ, ಕರ್ನಾಟಕ ರೈತ ಸುರಕ್ಷ ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆ ಕುರಿತು ಮಾಹಿತಿ ನೀಡಲಿವೆ. ಜೊತೆಗೆ ಕರಪತ್ರ, ಭಿತ್ತಿಪತ್ರಗಳನ್ನು ವಿತರಿಸಿ, ಜಾಗೃತಿ ಮೂಡಿಸಲಿವೆ. ಇದರ ಸದ್ಬಳಕೆ ಮಾಡಿಕೊಂಡು, ಪ್ರತಿಯೊಬ್ಬರು ಸಹ ಬೆಳೆವಿಮೆ ಮಾಡಿಸಬೇಕು ಎಂದು ರೈತರಲ್ಲಿ ಮನವಿ ಮಾಡಿದರು.

ಜು.31ರವರೆಗೆ ಸಂಚಾರ: ಜಿಲ್ಲೆಯಲ್ಲಿ ಈಗಾಗಲೇ ಬಿತ್ತನೆ ಕಾರ್ಯ ಆರಂಭವಾಗಿದ್ದು, ಮುಸುಕಿನ ಜೋಳ, ತೊಗರಿ, ಹುರುಳಿ, ರಾಗಿ ಬೆಳೆಗೆ ಜು.31ರೊಳಗೆ ವಿಮೆ ಮಾಡಿ ಸಬೇಕು, ದ್ರಾಕ್ಷಿ ಬೆಳೆಗಾರರು ಜೂ.30ರೊಳಗೆ ವಿಮೆ ಮಾಡಿಸಬೇಕು. ಈ ನಿಟ್ಟಿನಲ್ಲಿ ಬೆಳೆವಿಮೆ ನೋಂದಣಿ, ಅದರ ಕುರಿತು ಮಾಹಿತಿ/ ಪ್ರಚಾರ ಮಾಡಿ ರೈತರಲ್ಲಿ ಅರಿವು ಮೂಡಿಸಲು ಜು.31ರವರೆಗೆ ಸಂಚಾರ ವಾಹ ನಗಳು ಜಿಲ್ಲಾದ್ಯಂತ ಸಂಚರಿಸಲಿವೆ ಎಂದು ವಿವರಿಸಿದರು.

ರೈತರು ನೋಂದಣಿ ಮಾಡಿಸಲಿ: ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯಡಿ ಜಿಲ್ಲೆಯಲ್ಲಿ ಮುಖ್ಯ ಬೆಳೆಗಳನ್ನು ಗ್ರಾಪಂ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅನುಷ್ಠಾನಗೊಳಿಸಲು ಸರ್ಕಾರ ಮಂಜೂರಾತಿ ನೀಡಿದೆ. ಈ ಯೋಜನೆಗೆ ಒಳಪಡುವ ವಿವಿಧ ಬೆಳೆಗೆ ರೈತರು ಖಾತೆ ಹೊಂದಿರುವ ರಾಷ್ಟ್ರೀಯ ಅ ಧಿಕೃತ ಬ್ಯಾಂಕ್‌ಗಳಲ್ಲಿ, ಸಾಮಾನ್ಯ ಸೇವಾ ಕೇಂದ್ರಗಳು (ಸಿಎಸ್‌ಸಿ) ಹಾಗೂ ಗ್ರಾಮ ಓನ್‌ ಕೇಂದ್ರಗಳಲ್ಲಿ ರೈತರು ನೋಂದಣಿ ಮಾಡಿಸಬಹುದು ಎಂದು ವಿವರಿಸಿದರು.

ಬೆಳೆ ನಷ್ಟವಾದ್ರೆ ವಿಮೆ ಹಣ ಪಡೆಯಬಹುದು: ಈ ಯೋಜನೆಯಡಿ ರೈತರಿಗೆ ಅನಿರೀಕ್ಷಿತ ಅಥವಾ ಹವಾಮಾನ ಪರಿಸ್ಥಿತಿಗಳಿಂದ ಉಂಟಾದ ನಷ್ಟಕ್ಕೆ ಪರಿಹಾರ ಒದಗಿ ಸ ಲಾಗುತ್ತಿದೆ. ಮುಂಗಾರು ಬೆಳೆಗೆ ವಿಮಾ ಮೊತ್ತದ ಶೇ.2, ಹಿಂಗಾರು ಬೆಳೆಗಳಿಗೆ ಶೇ.1.5, ವಾಣಿಜ್ಯ ಹಾಗೂ ತೋಟ ಗಾರಿಕಾ ಬೆಳೆಗಳಿಗೆ ವಿಮಾ ಮೊತ್ತದ ಶೇ.05 ಪ್ರಿಮೀಯಂ ಮೊತ್ತ ಪಾವತಿಸಿ, ಬೆಳೆ ವಿಮೆ ಮಾಡಿ ಸಿ ಕೊಳ್ಳಬೇಕು. ಅತಿವೃಷ್ಟಿ, ಅನಾವೃಷ್ಟಿಯಿಂದ ಬೆಳೆ ನಷ್ಟವಾದಲ್ಲಿ ವಿಮೆ ಹಣ ಪಡೆದುಕೊಳ್ಳಬಹುದು ಎಂದು ಹೇಳಿದರು.

ಕಡ್ಡಾಯವಾಗಿ ಬೆಳೆವಿಮೆ ಮಾಡಿಸಿ: ಜಿಲ್ಲೆಯಲ್ಲಿ ಬೆಳೆ ವಿಮೆ ಮಾಡಿಸಿ, ಅತಿವೃಷ್ಟಿಯಿಂದ ನಾಶವಾದ ಕೃಷಿ ಬೆಳೆ ಗಳ ರೈತರಿಗೆ ಕಳೆದ ಎರಡು ಸಾಲಿನಿಂದ ಈವರೆಗೆ 37 ಕೋಟಿ ರೂ. ಬೆಳೆವಿಮೆ ಪರಿಹಾರ ನೀಡಲಾಗಿದೆ. ಮುಂ ದಿನ ದಿನಗಳಲ್ಲಿ ಹವಾಮಾನ ವೈಪರೀತ್ಯದಿಂದ ಯಾವುದೇ ರೈತರು ಬೆಳೆ ನಷ್ಟದ ಸಂಕಷ್ಟಕ್ಕೆ ಸಿಲುಕದಿರಲು ಕಡ್ಡಾ ಯ ವಾಗಿ ಬೆಳೆವಿಮೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.

ದ್ರಾಕ್ಷಿ ಬೆಳೆಗೆ ಜೂ.30 ಕೊನೆ: 2022-23ನೇ ಸಾಲಿನ ಮುಂಗಾರು, ಹಿಂಗಾರು ಹಂಗಾಮುಗಳ ಅವಧಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಜಿಲ್ಲೆಯಲ್ಲಿ ಮಾವು ಮತ್ತು ದ್ರಾಕ್ಷಿ ಬೆಳೆ ವಿಮೆಯಡಿ ಸೂಚಿಸಲಾಗಿದ್ದು, ಒಂದು ಹೆಕ್ಟೇರ್‌ ದ್ರಾಕ್ಷಿ ಬೆಳೆಗೆ 14 ಸಾವಿರ ರೂ. ವಿಮಾ ಮೊತ್ತ ಹಾಗೂ ಮಾವು ಬೆಳೆಗೆ 4 ಸಾವಿರ ರೂ. ವಿಮಾ ಮೊತ್ತವನ್ನು ಪಾವತಿಸತಕ್ಕದ್ದು.

ಜು.31 ಕೊನೆ ದಿನ: ವಿಮೆ ನೋಂದಣಿಗೆ ದ್ರಾಕ್ಷಿ ಬೆಳೆಗೆ ಜೂ.30, ಮಾವು ಸೇರಿ ಇತರೆ ತೋಟಗಾರಿಕೆ, ಕೃಷಿ ಬೆಳೆಗಳಿಗೆ ಜು.31 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ತಾಲೂಕು ಮಟ್ಟದ ಕಚೇರಿ, ಅಗ್ರಿಕಲ್ಚರ್‌ ಇನ್ಶೂರೆನ್ಸ್‌ ಕಂಪನಿಯ ದೂ.18004250505, ಮೊ.9380976447ಗೆ ಸಂಪರ್ಕಿಸಬಹುದು ಎಂದು ವಿವರಿಸಿದರು.

ಜಂಟಿ ಕೃಷಿ ನಿರ್ದೇಶಕಿ ರೂಪಾ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಎಂ.ಗಾಯತ್ರಿ, ಕೃಷಿ ಉಪನಿರ್ದೇಶಕ ಚಂದ್ರಕುಮಾರ್‌, ವಿವಿಧ ಇಲಾಖೆ ಅಧಿ ಕಾರಿಗಳು, ಸಿಬ್ಬಂದಿ ಹಾಜರಿದ್ದರು. ಈ ವೇಳೆ ಬೆಳೆ ವಿಮೆ ಮಾಹಿತಿಯುಳ್ಳ ಕರಪತ್ರ, ಭಿತ್ತಿಪತ್ರಗಳನ್ನು ಡೀಸಿ ಬಿಡುಗಡೆ ಮಾಡಿದರು.

ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟವಾದಲ್ಲಿ ವಿಮಾ ಕಂಪನಿಯಿಂದ ಪರಿಹಾರ ಹಣವನ್ನು ತ್ವರಿತವಾಗಿ ದೊರಕಿಸಿಕೊಡಲು ಜಿಲ್ಲಾಡಳಿತ ಸಂಪೂರ್ಣ ಜವಾಬ್ದಾರಿ ಕೈಗೆತ್ತಿಕೊಂಡಿದ್ದು, ಯಾವುದೇ ಆಂತಕವಿಲ್ಲದೆ ಧೈರ್ಯದಿಂದ ವಿಮೆ ಮಾಡಿಸಿಕೊಳ್ಳಬಹುದು.
● ಆರ್‌.ಲತಾ,
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ.

ಟಾಪ್ ನ್ಯೂಸ್

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.