ಬೀದಿಗೆ ಬಂದ ರೆಡ್‌ಕ್ರಾಸ್‌ ಒಳ ಜಗಳ

ಸಂಸ್ಥೆಯಲ್ಲಿ ಪದಾಧಿಕಾರಿಗಳ ಕಿತ್ತಾಟ; ಕಾರ್ಯವೈಖರಿಗೆ ಬೇಸರ; ಕಾರ್ಯದರ್ಶಿ ಸ್ಥಾನ ಖಾಲಿ

Team Udayavani, May 9, 2020, 11:37 AM IST

ಬೀದಿಗೆ ಬಂದ ರೆಡ್‌ಕ್ರಾಸ್‌ ಒಳಜಗಳ

ಚಿಕ್ಕಬಳ್ಳಾಪುರ: ಸಂಕಷ್ಟದಲ್ಲಿ ಮನುಷ್ಯನ ಜೀವ ಉಳಿಸುವ ಕಾರ್ಯದಲ್ಲಿ ತೊಡಗಿರುವ ಸಂಸ್ಥೆ ಯಾವುದಾದರೂ ಇದ್ದರೆ ಅದು ರಕ್ತ ದಾನದ ಮೂಲಕ ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ.
ಜಿಲ್ಲೆಯಲ್ಲಿ ಒಂದು ಕಾಲಕ್ಕೆ ರೆಡ್‌ಕ್ರಾಸ್‌ ಸಂಸ್ಥೆಗೆ ತನ್ನದೇ ಆದ ಗೌರವ, ಘನತೆ ಇತ್ತು. ರಕ್ತ ಸಂಗ್ರಹದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನದಲ್ಲಿತ್ತು. ಆದರೆ ಇತ್ತೀಚಿಗೆ ಪ್ರತಿಷ್ಠಿತ ರೆಡ್‌ಕ್ರಾಸ್‌ ಸಂಸ್ಥೆ
ಬೇರೆ ಬೇರೆ ಕಾರಣಗಳಿಗೆ ಅನಾಥವಾಗುತ್ತಿದೆಯೇ ಎಂಬ ಅನುಮಾನ ಜಿಲ್ಲೆಯ ಜನರನ್ನು ಕಾಡುತ್ತಿದೆ.

ರೆಡ್‌ಕ್ರಾಸ್‌ ಸಂಸ್ಥೆಯ ಪದಾಧಿಕಾರಿಗಳ ನಡುವಿನ ಒಳ ಜಗಳ ಬೀದಿಗೆ ಬಂದಿದ್ದು, ಹಲವು ವರ್ಷಗಳಿಂದ ಕಾರ್ಯ ದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಿಡ್ಲಘಟ್ಟದ ಗುರು ರಾಜರಾವ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ. ಜೊತೆಗೆ ಕಳೆದ ಮೂರು ವರ್ಷಗಳಿಂದ ಚುನಾವಣೆ ನಡೆಯದೇ ಇದ್ದರೂ ಅಜೀವ ಸದಸ್ಯತ್ವ ಇಲ್ಲದ ವ್ಯಕ್ತಿಗಳನ್ನು ಸಂಸ್ಥೆಯ ಪದಾಧಿಕಾರಿಗಳ ಸ್ಥಾನಕ್ಕೆ ತುಂಬುವ ಕಾರ್ಯ ನಡೆಯುತ್ತಿದೆ ಎಂಬ ಆರೋಪ ಅವರ ರಾಜೀನಾಮೆ ಬೆನ್ನಲ್ಲೇ ಕೇಳಿ ಬರುತ್ತಿರುವುದು ರೆಡ್‌ಕ್ರಾಸ್‌ ಸಂಸ್ಥೆಯಲ್ಲಿ ಏನೋ ನಡೆಯುತ್ತಿದೆ ಎಂಬ ಅನುಮಾನವನ್ನು ಹುಟ್ಟು ಹಾಕಿದೆ.

ಅಹಿತಕರ ಘಟನೆಗಳಿಗೆ ರಾಜೀನಾಮೆ: ಎನ್‌.ಕೆ.ಗುರುರಾಜ ರಾವ್‌, ರೆಡ್‌ಕ್ರಾಸ್‌ ಸಂಸ್ಥೆಯ ರಕ್ತ ನಿಧಿ ಕೇಂದ್ರದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವುದರಿಂದ ತಮ್ಮ ರಾಜೀನಾಮೆ ಅಂಗೀಕರಿಸಬೇಕೆಂದು ಕಳೆದ 2019ರ ಅಕ್ಟೋಬರ್‌ ತಿಂಗಳಲ್ಲಿ ಜಿಲ್ಲಾಧಿಕಾರಿ ಗಳಿಗೆ ಕೋರಿದ್ದು, ಅದರಂತೆ ಅದೇ ದಿನಾಂಕ ಪರಿಗಣಿಸಿ ಕೆಲ ದಿನಗಳ ಹಿಂದೆ ಜಿಲ್ಲಾಧಿಕಾರಿಗಳು ಗುರುರಾಜ ರಾವ್‌ ರಾಜೀನಾಮೆ ಅಂಗೀಕರಿಸಿದ್ದಾರೆ.

ರೆಡ್‌ಕ್ರಾಸ್‌ನಲ್ಲಿ ಖರೀದಿಯಿಂದ ಹಿಡಿದು ಸಿಬ್ಬಂದಿಗೆ ಸಂಬಳ ನೀಡುವವರೆಗೂ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ. ಅದಕ್ಕೆಲ್ಲಾ ನಾನು ಬಂದ ಬಳಿಕ ತಡೆಯೊಡ್ಡಿದೆ. ಕಚೇರಿಯಲ್ಲಿ ಸಿಬ್ಬಂದಿಗಳ ಕಾರ್ಯವೈಖರಿ ಸರಿಯಿಲ್ಲ. ಆ ಕಾರಣಕ್ಕಾಗಿ ಅಲ್ಲಿ ಕೆಲಸ ಮಾಡಲು ಸಾಧ್ಯ ವಾಗದೇ ರಾಜೀನಾಮೆ ಕೊಟ್ಟಿದ್ದೇನೆ ಎಂದು ಕಾರ್ಯದರ್ಶಿ ಯಾಗಿ ಕೆಲಸ ಮಾಡಿದ್ದ ಗುರುರಾಜರಾವ್‌ ತಿಳಿಸಿದರು. ಒಟ್ಟಿನಲ್ಲಿ ಬಡವರಿಗೆ, ಅಸಹಾ ಯಕರಿಗೆ ತುರ್ತು ಸಂದರ್ಭ ಗಳಲ್ಲಿ ರಕ್ತದ ಕೊರತೆ ನೀಗಿಸುತ್ತಿದ್ದ ರೆಡ್‌ಕ್ರಾಸ್‌ ಸಂಸ್ಥೆಯಲ್ಲಿ ಪದಾಧಿಕಾರಿಗಳ ನಡುವಿನ ಜಗಳ, ಖರೀದಿ ಯಲ್ಲಿ ಅಕ್ರಮದತಂಹ ಆರೋಪಗಳು ಕೇಳಿ ಬರುತ್ತಿರುವೆ.

ಚಿಕ್ಕಬಳ್ಳಾಪುರ ರೆಡ್‌ಕ್ರಾಸ್‌ ಸಂಸ್ಥೆ ಕಾರ್ಯದರ್ಶಿ ಹುದ್ದೆಗೆ ನಾನು ಅರ್ಜಿ ಹಾಕಿರಲಿಲ್ಲ. ನನ್ನ ಸಮಾಜ ಸೇವೆ ಗುರುತಿಸಿ ಕೆಲವರು ಕಾರ್ಯದರ್ಶಿ ಸ್ಥಾನಕ್ಕೆ ತಂದರು. ಆದರೆ
ಅಲ್ಲಿನ ಉಸಿರುಗಟ್ಟುವ ವಾತಾವರಣ, ಸಿಬ್ಬಂದಿಯ ಕಾರ್ಯವೈಖರಿಗೆ ಬೇಸತ್ತು ರಾಜೀನಾಮೆ ನೀಡಿದ್ದೇನೆ.
● ಎನ್‌.ಕೆ.ಗುರುರಾಜ ರಾವ್‌, ನಿಕಟಪೂರ್ವ ಕಾರ್ಯದರ್ಶಿ, ರೆಡ್‌ಕ್ರಾಸ್‌ ಸಂಸ್ಥೆ

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.