3 ವರ್ಷಗಳಿಂದ ನಿರಾಶ್ರಿತರ ಅರ್ಜಿ ಪುರಸಭೆ ಕಚೇರಿಯಲ್ಲಿ!

Team Udayavani, Feb 29, 2020, 5:58 PM IST

cb-tdy-1

ಸಾಂದರ್ಭಿಕ ಚಿತ್ರ

ಬಾಗೇಪಲ್ಲಿ: ಪಟ್ಟಣದ ವ್ಯಾಪ್ತಿಯಲ್ಲಿ ಸರ್ಕಾರಿ ನಿವೇಶನಕ್ಕಾಗಿ ಸಲ್ಲಿಸಿರುವ 3 ಸಾವಿರ ನಿರಾಶ್ರಿತರ ಅರ್ಜಿಗಳು 3 ವರ್ಷಗಳಿಂದ ಪುರಸಭೆ ಕಾರ್ಯಾಲಯದಲ್ಲೇ ಧೂಳು ಹಿಡಿಯುತ್ತಿವೆ.

ಬಾಗೇಪಲ್ಲಿ ಪುರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ವಾಸವಿರುವ ನಿರಾಶ್ರಿತರಿಗೆ ಉಚಿತ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸುವುದಾಗಿ ಕಳೆದ 5 ವರ್ಷಗಳಿಂದ ಪುರಸಭೆ ಸದಸ್ಯರು ಮತದಾರರಿಗೆ ಭರವಸೆ ನೀಡಿ ಪ್ರತಿ ಬಾರಿಯ ಪುರಸಭೆ ಚುನಾವಣೆ ವೇಳೆ ಪಕ್ಷಗಳ ಅಭ್ಯರ್ಥಿಗಳು ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸುವುದು ಸಾಮಾನ್ಯ ಸಂಗತಿಯಾಗಿದೆ. ಚುನಾವಣೆ ಮುಗಿದ ನಂತರ ಭರವಸೆಗಳನ್ನು ಈಡೇರಿಸಬೇಕೆಂಬ ಸೌಜನ್ಯವೂ ಇಲ್ಲ.

ಅನುಮೋದನೆಗೆ ರವಾನೆ: ಸೂರಿಲ್ಲದೆ ಬಾಡಿಗೆ ಮನೆಗಳಲ್ಲಿ ವಾಸ ಮಾಡುತ್ತಿದ್ದಾರೆ. ಪಟ್ಟಣ ಹೊರ ವಲಯದ ಯಗಬಂಡ್ಲಕೆರೆ ಗ್ರಾಮದ ಬಳಿಯ ಸರ್ವೇ ನಂ.667 ರಲ್ಲಿ 3.33 ಗುಂಟೆ, ಸರ್ವೆ ನಂ. 102 ರಲ್ಲಿ 4.30 ಗುಂಟೆ ಸೇರಿ ಒಟ್ಟು 8 ಎಕರೆ 23 ಗುಂಟೆ ಸರ್ಕಾರಿ ಜಮೀನನ್ನು 2016-17 ನೇ ಸಾಲಿ ನಲ್ಲಿ ಪುರಸಭೆ ಆಡಳಿತ ಮಂಡಳಿ ಗುರುತಿಸಿದೆ. ಆಶ್ರಯ ಯೋಜನೆ ಅಧ್ಯಕ್ಷ ಶಾಸಕ ಎಸ್‌.ಎನ್‌. ಸುಬ್ಟಾರೆಡ್ಡಿ ಅಧ್ಯಕ್ಷತೆಯಲ್ಲಿ ನಗರ ಯೋಜನಾ ಪ್ರಾಧಿಕಾರ ಉಪನಿರ್ದೇಶಕ, ತಹಶೀಲ್ದಾರ್‌, ಪುರಸಭೆ ಮುಖ್ಯಾಧಿಕಾರಿಗಳ ಸಭೆ ನಡೆಸಿ ಟೌನ್‌ ಪ್ಲಾನಿಂಗ್‌ ನಕ್ಷೆಗಾಗಿ ನಗರ ಯೋಜನಾ ಪ್ರಾಧಿಕಾರದ ಅನುಮೋದನೆಗೆ ಕಳುಹಿಸಲಾಗಿದೆ. ಆದರೆ ಇದುವರೆಗೂ ಅರ್ಜಿ ಸಲ್ಲಿಸಿರುವ ಒಬ್ಬ ನಿರಾಶ್ರಿತ ನಿಗೂ ನಿವೇಶನ ನೀಡಲು ಯಾರಿಂದಲೂ ಸಾಧ್ಯವಾಗಿಲ್ಲ.

260 ನಿವೇಶನ ಮಾತ್ರ ನಿರ್ಮಿಸಬಹುದು: ಟೌನ್‌ ಪ್ಲಾನಿಂಗ್‌ ನಕ್ಷೆಗೆ ನಗರ ಯೋಜನಾ ಪ್ರಾಧಿಕಾರದ ಅನುಮೋದನೆ ದೊರೆತರೆ 8 ಎಕರೆ 23 ಗುಂಟೆ ಜಮೀನಿನಲ್ಲಿ ಆಟದ ಮೈದಾನ, ರಸ್ತೆ, ಚರಂಡಿ ಹಾಗೂ ಪಾರ್ಕ್‌ಗೆ ಮೀಸಲಿಡುವ ಜಮೀನು ಹೊರತುಪಡಿಸಿದರೆ 260 ನಿವೇಶನ ಮಾತ್ರ ನಿರ್ಮಿಸಬಹುದು.

3 ಸಾವಿರ ಅರ್ಜಿದಾರರು ಈಗಾಗಲೇ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದು, ಉಳಿದ 2740 ಅರ್ಜಿದಾರರಿಗೆ ಎಲ್ಲಿಂದ ನಿವೇಶನ ಮಂಜೂರು ಮಾಡಲಾಗುತ್ತದೆ ಎನ್ನುವುದೇ ಅಧಿಕಾರಿಗಳಿಗೆ ಬಹು ದೊಡ್ಡ ಸವಾಲು ಆಗಿದೆ. ನಿವೇಶನಗಳ ಸಂಖ್ಯೆ ಕಡಿಮೆ ಇರುವುದರಿಂದ ನಿವೇಶನ ಕೊಡಿಸುವ ಜವಾಬ್ದಾರಿ ನನ್ನದು ಎಂದು ಹೇಳಿ ಅರ್ಜಿದಾರರ ಬಳಿ ಕೆಲ ಚುನಾಯಿತ ಜನಪ್ರತಿನಿಧಿಗಳು ಹಾಗೂ ಏಜೆಂಟರು ಹಣಕಾಸಿನ ಒಪ್ಪಂದ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಆಶ್ರಯ ಯೋಜನೆ ನಿವೇಶನಕ್ಕಾಗಿ 3 ಸಾವಿರ ಅರ್ಜಿ ಬಂದಿದ್ದು, ಎಲ್ಲಾ ಅರ್ಜಿಗಳನ್ನು ಆಶ್ರಯ ಯೋಜನೆ ಸಾಮಾನ್ಯ ಸಭೆಯಲ್ಲಿ ಸಮಿತಿ ಸದಸ್ಯರು ಪರಿಶೀಲಿಸಿ 1360 ಅರ್ಜಿದಾರರರನ್ನು ಅಯ್ಕೆ ಮಾಡಿ ಅನುಮೋದಿ ಸಲಾಗಿದೆ.-  ವಿ.ಪಂಕಜಾರೆಡ್ಡಿ,ಪುರಸಭೆ ಮುಖ್ಯಾಕಾರಿ, ಬಾಗೇಪಲ್ಲಿ

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.