20ಕ್ಕೆ ಮೀಸಲಾತಿಗಾಗಿ ಹೋರಾಟ
Team Udayavani, May 16, 2022, 5:57 PM IST
ಗುಡಿಬಂಡೆ: ಪಟ್ಟಣದಲ್ಲಿ ಮೇ 20 ರಂದು ನಡೆಯುವ ಪ.ಜಾತಿ ಮತ್ತು ಪಂಗಡ ಮೀಸಲಾತಿ ಹೋರಾಟದಲ್ಲಿ ಹೆಚ್ಚಿನಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವಾಲ್ಮೀಕಿ ನಾಯಕರ ಸಂಘದ ತಾಲೂಕು ಅಧ್ಯಕ್ಷ ಎನ್.ವಿ.ಗಂಗಾಧರ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 1958ರ ಬಳಿಕನಡೆದ 1961ರ ಮತ್ತು 2011 ಜನಗಣತಿಗೆ ಅನುಗುಣವಾಗಿ ಶೇ. 21 ಜನಸಂಖ್ಯೆ ಹೆಚ್ಚಾಗಿದೆ. 1958 ರಲ್ಲಿ ನಿಗದಿ ಪಡಿಸಿರುವಂತೆ ಈಗಲೂ ಮೀಸಲಾತಿ ನೀಡುತ್ತಿದ್ದು, ಇದನ್ನು ತಿದ್ದು ಪಡಿ ಮಾಡಿ ಮೀಸಲಾತಿ ಹೆಚ್ಚಿಸುವಂತೆ ಕೋರಿದರೂ ಯಾವುದೇ ಕ್ರಮಕೈಗೊಂಡಿಲ್ಲ.
ಈ ಸಂಬಂಧ ಪರಿಶಿಷ್ಟ ಪಂಗಡದ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಹಮ್ಮಿಕೊಂಡಿರುವ ಬೃಹತ್ 400 ಕಿ.ಮೀ ಗೂ ಹೆಚ್ಚು ದೂರದ ಪಾದಯಾತ್ರೆಗೆ ಬೆಂಬಲಿಸಿ ಇದರಿಂದಾಗಿ ಮೇ ತಿಂಗಳ 20ರಂದು ಪಟ್ಟಣದಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯಲ್ಲಿ ಪ.ಜಾತಿ ಮತ್ತು ಪಂಗಡದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಸರ್ಕಾರಕ್ಕೆ ಒತ್ತಡ ಹೇರಲು ಸಹಕರಿಸಬೇಕು ಎಂದರು.
ನಂತರ ಡಿ.ಎಸ್.ಎಸ್. ಮುಖಂಡ ಜಿ.ವಿ.ಗಂಗಪ್ಪ ಮಾತನಾಡಿ, ಪ.ಜಾತಿ ಮತ್ತು ಪ.ಪಂಗಡದವರಿಗೆ ಶೆ„ಕ್ಷಣಿಕ ಮತ್ತು ಸರ್ಕಾರದ ಸೇವೆಗಳಲ್ಲಿನ ಮೀಸಲಾತಿ ಪ್ರಮಾಣವನ್ನು ಜನ ಸಂಖ್ಯೆ ಗನಗುಣವಾಗಿ ಶೇ 17 ಮತ್ತು ಶೇ 7.5ಕ್ಕೆ ಹೆಚ್ಚಿಸಬೇಕು. ಹೀಗಾಗಿ ಧರಣಿಯಲ್ಲಿ ಪಾಲ್ಗೊಳ್ಳುವಂತೆ ಕೋರಿದರು.
ಪ್ರಸ್ ಸುಬ್ಬರಾಯಪ್ಪ, ಬೀಚಗಾನಹಳ್ಳಿ ನರೇಂದ್ರ, ಕಡೇಹಳ್ಳಿ ಅನಂದ, ಅಂಜಿನಪ್ಪ, ಪ.ಪಂ ಮಾಜಿ ಅಧ್ಯಕ್ಷ ನಾಗರಾಜ್, ಜೀವಿಕ ನಾರಾಯಣಸ್ವಾಮಿ, ಅಮರಾ ವತಿ, ನರಸಿಂಹಪ್ಪ, ಶಿವಪ್ಪ, ನಾಗರಾಜ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.