ಗುಂಡಿ ಅಗೆದು ಗಡಿ ಸಂಪರ್ಕ ರಸ್ತೆ ಬಂದ್
ಕೋವಿಡ್-19 ವೈರಸ್ ಭೀತಿ;,ವಾಹನ ಸಂಚಾರ ನಿಷೇಧ
Team Udayavani, Apr 21, 2020, 3:44 PM IST
ಸಾಂದರ್ಭಿಕ ಚಿತ್ರ
ಗುಡಿಬಂಡೆ: ಕೋವಿಡ್-19 ವೈರಸ್ ಭೀತಿ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ – ಕರ್ನಾಟಕ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಗ್ರಾಮೀಣ ಭಾಗಗಳ ಸಂಪರ್ಕ ರಸ್ತೆಗಳಲ್ಲಿ ಜೆಸಿಬಿಯಿಂದ ಗುಂಡಿ ತೆಗೆಯುವ ಮೂಲಕ ವಾಹನ ಓಡಾಟ ಸಂಪೂರ್ಣ ಬಂದ್ ಮಾಡಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಎಲ್ಲೋಡು ಗ್ರಾಮ ಪಂಚಾಯಿತಿ ಪಿಡಿಒ ಫಣೀಂದ್ರ ಬಿ.ಆರ್. ತಿಳಿಸಿದ್ದಾರೆ.
ತಾಲೂಕಿನ ಆಂಧ್ರ-ಕರ್ನಾಟಕ ಗಡಿ ಭಾಗದ ಹಿಂದೂ ಪೂರದ ಸುತ್ತಮುತ್ತಲಿನ ಎಲ್ಲಾ ಗ್ರಾಪಂ ಪಿಡಿಒ ಹಾಗೂ ಜನಪ್ರತಿನಿಧಿಗಳು ಮತ್ತು ಕೊರೊನಾ ಜಾಗೃತಿ ಸಮಿತಿ ಸಭೆ ನಡೆಸಿ ಆಂಧ್ರದಿಂದ ಯಾರೊಬ್ಬರೂ ಹಾಗೂ ವಾಹನಗಳು ಬರುವಂತಿಲ್ಲ. ಇಲ್ಲಿಂದ ಯಾರೂ ಹೋಗುವಂತಿಲ್ಲ. ಬೇರೆ ಪ್ರದೇಶಗಳಿಂದ ಗ್ರಾಪಂ ವಿವಿಧ ಗ್ರಾಮಗಳಿಗೆ ಬಂದಿರುವ ಸುಮಾರು 25 ಜನರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಗ್ರಾಮೀಣ ಭಾಗಗಳ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಿಂದ ಅಧಿಕಾರಿಗಳು ಮತ್ತು ಸ್ವಯಂ ಸೇವಕರು ಒದಗಿಸುತ್ತಿದ್ದಾರೆ.
ಗ್ರಾಮಗಳಿಂದ ಮತ್ತೂಂದು ಗ್ರಾಮಗಳಿಗೆ ವಿನಾಕಾರಣ ಓಡಾಡುವುದನ್ನು ನಿಲ್ಲಿಸಿ ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ. ಅನವಶ್ಯವಾಗಿ ಮನೆಯಿಂದ ಹೊರಗೆ ಬರಬೇಡಿ ಎಂದು ಸಾರ್ವಜನಿಕರಿಗೆ ಎಲ್ಲೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಎನ್.ಮಂಜುನಾಥ ಮನವಿ ಮಾಡಿದ್ದಾರೆ.
ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಬೀಟ್ ಪೊಲೀಸರು, ಹೋಂ ಗಾರ್ಡ್‌ಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರುರು, ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಪಂ ಸಿಬ್ಬಂದಿ ಈ ಕಾರ್ಯದಲ್ಲಿ ನಿರಂತರ ಸೇವೆ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belman: ಹಿಂದೂಗಳ ಮನೆಯಲ್ಲಿ ಗೋದಲಿ ಸಂಭ್ರಮ!
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.