ಕೋವಿಡ್ ನಿಯಂತ್ರಣಕೆ 50 ಲಕ್ಕ ರೂ. ನೆರವು
ಸತ್ಯಸಾಯಿ ಲೋಕ ಸೇವಾ ಸಮೂಹ ಸಂಸ್ಥೆಗಳಿಂದ ಹಸ್ತಾಂತರ
Team Udayavani, Apr 23, 2020, 1:35 PM IST
ಸಾಂದರ್ಭಿಕ ಚಿತ್ರ
ಚಿಕ್ಕಬಳ್ಳಾಪುರ: ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದ ಶ್ರೀ ಸತ್ಯಸಾಯಿ ಲೋಕ ಸೇವಾ ಸಮೂಹ ಸಂಸ್ಥೆಗಳು ಮತ್ತು ಅಂಗ ಸಂಸ್ಥೆಗಳು, ಇವುಗಳ ಪರವಾಗಿ ಸದ್ಗುರು ಶ್ರೀ ಮಧುಸೂದನ್ ಸಾಯಿ, ಕೋವಿಡ್-19 ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಬುಧವಾರ 50 ಲಕ್ಷ ರೂ.ಗಳನ್ನು ನೀಡಿದ್ದಾರೆ ಶ್ರೀ ಸತ್ಯಸಾಯಿ ಮಾನವಾಭ್ಯುದಯ ವಿಶ್ವವಿದ್ಯಾಲಯದ ಕುಲಾಧಿಪತಿ ಬಿ.ಎನ್.ನರಸಿಂಹಮೂರ್ತಿ ಅವರು, ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರನ್ನು ಅಧಿಕೃತ ನಿವಾಸ “ಕಾವೇರಿ’ ಯಲ್ಲಿ ಭೇಟಿಯಾಗಿ, ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ್ ಹಾಗೂ ವೈದ್ಯಕೀಯ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌ರ ಸಮ್ಮುಖದಲ್ಲಿ ಚೆಕ್ ನೀಡಿದರು.
ಶ್ರೀ ಸತ್ಯಸಾಯಿ ಲೋಕ ಸೇವಾ ಸಂಸ್ಥೆ ಮುಖ್ಯ ಸಮನ್ವಯಾಧಿಕಾರಿ ಗೋವಿಂದರೆಡ್ಡಿ, ಆಡಳಿತಾಧಿಕಾರಿ ಶಿವಸುಬ್ರಮಣ್ಯ, ಡಾ.ಸತೀಶ್ ಬಾಬು ಇದ್ದರು. ಅಲ್ಲದೆ, ಸಾಮಾಜಿಕ ಕಳಕಳಿ ಇರುವ ಈ ಸಂಸ್ಥೆ ಸುಮಾರು 30 ಲಕ್ಷ ರೂ. ಮೌಲ್ಯದ ಅಡುಗೆ ಹಾಗೂ ದಿನನಿತ್ಯದ ಅಗತ್ಯ ವಸ್ತುಗಳನ್ನೊಳಗೊಂಡ ಚೀಲಗಳನ್ನು ಹಲವು ರಾಜ್ಯಗಳ ಆರ್ಹ ಜನರಿಗೆ ನೀಡಿದೆ. ಶ್ರೀ ಸತ್ಯಸಾಯಿ ಲೋಕ ಸೇವಾ ಆರೋಗ್ಯ ಕೇಂದ್ರ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಸುಮಾರು 4500 ಮಧುಮೇಹ ಹಾಗೂ ರಕ್ತದೊತ್ತಡ ಕಾಯಿಲೆ ಹೊರ ರೋಗಿಗಳಿಗೆ ಸುಮಾರು 30 ಲಕ್ಷ ರೂ. ಮೌಲ್ಯದ ಮಾತ್ರೆಗಳನ್ನು ಅವರವರ ಮನೆಗಳಿಗೇ ತಲುಪಿಸಿದೆ ಎಂದು ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಗೋವಿಂದರೆಡ್ಡಿ ಸಿಎಂ ಭೇಟಿ ಬಳಿಕ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.