ನಂದಿ ನಾಡ ಕಚೇರಿಯಲ್ಲಿ ಸಕಾಲಸೇವೆ ಸ್ಥಗಿತ : ಸಾರ್ವಜನಿಕರ ಪರದಾಟ
Team Udayavani, Mar 19, 2021, 9:03 PM IST
ಚಿಕ್ಕಬಳ್ಳಾಪುರ : ಸರ್ಕಾರದ ಸೌಲಭ್ಯಗಳನ್ನು ಜನರ ಮನೆಬಾಗಿಲಿಗೆ ತಲುಪಿಸಲು ಸರ್ಕಾರ “ಜಿಲ್ಲಾಡಳಿತದ ನಡಿಗೆ ಗ್ರಾಮದ ಕಡೆಗೆ” ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ನಡೆಸಿ ಜನರ ವಿಶ್ವಾಸವನ್ನುಗಳಿಸುವ ಕೆಲಸವನ್ನು ಮಾಡುತ್ತಿದೆ. ಮತ್ತೊಂದಡೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಎ4 ಪೇಪರ್ ಹಾಗೂ ಇಂಕ್ ಖಾಲಿಯಾಗಿದೆಯೆಂದು ತಾತ್ಕಾಲಿಕವಾಗಿ ಸಕಾಲ ಸೇವೆಯನ್ನು ಸ್ಥಗಿತಗೊಳಿಸಿರುವ ಅಂಶ ಬೆಳಕಿಗೆ ಬಂದಿದೆ.
ಹೌದು ಚಿಕ್ಕಬಳ್ಳಾಪುರ ತಾಲೂಕಿನ ನಂದಿ ನಾಡ ಕಚೇರಿಯ ಹೊರಭಾಗದಲ್ಲಿ ಎ4 ಪೇಪರ್ ಹಾಗೂ ಇಂಕ್ ಖಾಲಿ ಆಗಿರುವುದರಿಂದ ತಾತ್ಕಾಲಿಕವಾಗಿ ಸಕಾಲ ಸೇವೆಯನ್ನು ಸ್ಥಗಿತಗೊಂಡಿರುತ್ತದೆ ಸಾರ್ವಜನಿಕರು ಸಹಕರಿಸಬೇಕಾಗಿ ವಿನಂತಿಸಿಕೊಂಡಿರುವ ಫಲಕ ಅಳವಡಿಸಿದ್ದಾರೆ ಇದರಿಂದ ಸಾರ್ವಜನಿಕರ ಸೇವೆ ಪಡೆಯಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಸಕಾಲಸೇವೆಯನ್ನು ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡು ಬಂದಿದ್ದು ಇದೀಗ ಪೇಪರ್ ಮತ್ತು ಇಂಕ್ ಇಲ್ಲವೆಂದು ತಾತ್ಕಾಲಿಕವಾಗಿ ಸಕಾಲ ಸೇವೆಯನ್ನು ಸ್ಥಿಗಿತಗೊಂಡಿದ್ದರಿಂದ ಮುಂದಿನ ತಿಂಗಳು ಸಕಾಲಸೇವೆಯನ್ನು ಜಿಲ್ಲೆ ಹಿಂದುಳಿಯುವುದೇ? ಎಂಬ ಅನುಮಾನ ಕಾಡುವಂತಾಗಿದೆ ಸಾಮಾನ್ಯವಾಗಿ ಮಾರ್ಚ್ ತಿಂಗಳ ಅಂತ್ಯದೊಳಗೆ ವಿವಿಧ ಇಲಾಖೆಯ ಅಧಿಕಾರಿಗಳು ಸರ್ಕಾರದಿಂದ ಬಂದಿರುವ ಅನುದಾನಗಳನ್ನು ಖರ್ಚು ಮಾಡಿ ಕಚೇರಿಗಳಿಗೆ ಅಗತ್ಯವಾಗಿ ಬೇಕಾಗಿರುವ ಸೌಲಭ್ಯಗಳು ಮತ್ತು ಸಲಕರಣೆಗಳನ್ನು ಪಡೆಯಲು ಕಾಳಜಿವಹಿಸುತ್ತಾರೆ ಆದರೇ ನಂದಿ ನಾಡ ಕಚೇರಿಯಲ್ಲಿ ಪೇಪರ್ ಮತ್ತು ಇಂಕ್ ಇಲ್ಲವೆಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.
ನಾಡ ಕಚೇರಿಗೆ ಎ4 ಪೇಪರ್ ಮತ್ತು ಇಂಕ್ ಖರೀದಿ ಮಾಡಲು ಅಲಾಟ್‍ಮೆಂಟ್ ನೀಡಿಲ್ಲ ಎನ್ನಲಾಗಿದೆ ಇದರಿಂದ ನಾಡ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಸ್ವಂತ ಖರ್ಚಿನಲ್ಲಿ ಪೇಪರ್ ಮತ್ತು ಇಂಕ್ ಖರೀದಿ ಮಾಡಿ ಸರ್ಕಾರಿ ಸೇವೆಯನ್ನು ಒದಗಿಸಿದ್ದಾರೆ ಆದರೇ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಪ್ರತಿಯೊಂದಕ್ಕೆ ಅಲಾಟ್‍ಮೆಂಟ್ ಬಾರದೆ ಯಾವುದೇ ರೀತಿಯ ವಸ್ತುಗಳನ್ನು ಖರೀದಿ ಮಾಡಲು ಸಾಧ್ಯವಾಗದೆ ಸಾರ್ವಜನಿಕರು ಪರದಾಡುವಂತಾಗಿದೆ.
ಈ ಕುರಿತು ಚಿಕ್ಕಬಳ್ಳಾಪುರ ಪ್ರಭಾರ ತಹಶೀಲ್ದಾರ್ ತುಳಸಿ ಅವರನ್ನು ಉದಯವಾಣಿ ಸಂಪರ್ಕಿಸಿದಾಗ ಜಿಲ್ಲಾಧಿಕಾರಿಗಳು ಕಚೇರಿಯಿಂದ ಅಲಾಟಮೆಂಟ್ ಬಂದಿಲ್ಲ ಅನಿಸುತ್ತದೆ ಹೀಗಾಗಿ ಸಕಾಲಸೇವೆಯನ್ನು ಸ್ಥಗಿತಗೊಂಡಿರಬಹುದು ತಾವು ಈ ಸಂಬಂಧ ನಾಡ ಕಚೇರಿಯ ಉಪ ತಹಶೀಲ್ದಾರ್ ಅವರನ್ನು ವಿಚಾರಣೆ ಮಾಡಿ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದರು.
ಅಪರ ಜಿಲ್ಲಾಧಿಕಾರಿ ಅಮರೇಶ್ ಅವರನ್ನು ಸಂಪರ್ಕಿಸಿದಾಗ ನಾಡ ಕಚೇರಿಯಲ್ಲಿ ಪೇಪರ್ ಮತ್ತು ಇಂಕ್ ಇಲ್ಲವೆಂದು ಸಕಾಲ ಸೇವೆ ಸ್ಥಗಿತಗೊಂಡಿರುವುದು ತಮ್ಮ ಗಮನಕ್ಕೆ ಬಂದಿಲ್ಲ ತಾವು ಈ ಸಂಬಂಧ ಚಿಕ್ಕಬಳ್ಳಾಪುರ ತಹಶೀಲ್ದಾರ್ ಹಾಗೂ ನಾಡಕಚೇರಿಯ ತಹಶೀಲ್ದಾರ್ ಅವರನ್ನು ವಿಚಾರಿಸಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ಕೈಗೊಳ್ಳುತ್ತೇನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.