ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್,ಹಾಲು ಒಕ್ಕೂಟ: ಎಸ್.ಟಿ.ಸೋಮಶೇಖರ್‌

st somashekar

Team Udayavani, Nov 17, 2020, 2:26 PM IST

News-tdy-4

ಚಿಕ್ಕಬಳ್ಳಾಪುರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡಿರುವ ಡಿಸಿಸಿ ಬ್ಯಾಂಕ್ ಹಾಗೂ ಕೋಚಿಮುಲ್ ಹಾಲು ಒಕ್ಕೂಟಗಳನ್ನು ಪ್ರತ್ಯೇಕಗೊಳಿಸುವ ವಿಚಾರ ರಾಜ್ಯ ಸಚಿವ‌ ಸಂಪುಟದ ಮುಂದಿದೆ ಎಂದು ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ರಾಜ್ಯ ಸಹಕಾರ ಸೌಹಾರ್ದ ಮಹಾಮಂಡಲ ಹಾಗೂ ಜಿಲ್ಲಾ ಸಹಕಾರ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 67 ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಮಾದರಿಯನ್ನಾಗಿ ಮಾಡಲು ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಸಂಕಲ್ಪ ಮಾಡಿದ್ದಾರೆ ಇವರ‌ ಬೇಡಿಕೆಗಳನ್ಮು ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸ್ತು ಎನ್ನುತಾರೆ  ಜಿಲ್ಲೆಯ ಪ್ರಮುಖ ಬೇಡಿಕೆಗಳಾದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡಿರುವ ಡಿಸಿಸಿ ಬ್ಯಾಂಕ್ ಹಾಗೂ ಕೋಚಿಮುಲ್ ಹಾಲು ಒಕ್ಕೂಟಗಳನ್ನು ಪ್ರತ್ಯೇಕಗೊಳಿಸುವ ವಿಚಾರ ರಾಜ್ಯ ಸಚಿವ‌ ಸಂಪುಟದ ಮುಂದಿದೆ ಅದು ಅತಿ‌ ಶೀಘ್ರದಲ್ಲಿ ಈಡೇರಲಿದೆ ಎಂದರು.

ಕೋವಿಡ್ ಪ್ರಕರಣಗಳ ಕುರಿತು ಮಾತಾನಾಡಿದ ಅವರು,ದೇಶ ವಿದೇಶಗಳಲ್ಲಿ ಜನರ ನೆಮ್ಮದಿ ಭಂಗ ಮಾಡಿರುವ ಕೋವಿಡ್ ಸೋಂಕು ರಾಜ್ಯದಲ್ಲಿ‌ ದಿನೇ ದಿನೇ ಕಡಿಮೆಯಾಗುತ್ತಿದೆ ಮೈಸೂರಿನಲ್ಲಿ ಕೋವಿಡ್ 19 ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ನಾಡಿನ ದಸರಾ ಉತ್ಸವವನ್ನು ಆಚರಿಸಿದ್ದೇವೆ ಎಂದರು. ರಾಜ್ಯದಲ್ಲಿ ಸಹಕಾರ ಕ್ಷೇತ್ರವನ್ನು ಬಲಪಡಿಸಲು ಕ್ರಮ ಕೈಗೊಂಡಿದ್ದು ಭವಿಷ್ಯದಲ್ಲಿ ರಾಜ್ಯದ ಸಹಕಾರ ವ್ಯವಸ್ಥೆಯನ್ನು ದೇಶದಲ್ಲಿ ಪ್ರಥಮ ಸ್ಥಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.

ಇದನ್ನೂ ಓದಿ :ಕೋವಿಡ್ ಮಾರ್ಗಸೂಚಿ ಅನುಸರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಬೇಕು : ಸಚಿವ ಜಗದೀಶ ಶೆಟ್ಟರ್

ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಮಾತಾನಾಡಿದ ಸಚಿವರು, ಪ್ರಧಾನಮಂತ್ರಿ ನರೇಂದ್ರ‌ ಮೋದಿ ನೇತೃತ್ವದ ಕೇಂದ್ರ‌ ಸರ್ಕಾರ ಜಾರಿಗೊಳಿಸಿರುವ‌ ಆತ್ಮನಿರ್ಭರ ಯೋಜನೆಯ‌ ಮೂಲಕ ಸಹಕಾರ ಕ್ಷೇತ್ರಕ್ಕೆ 600 ಕೋಟಿ ರೂ.ಗಳ ನೆರವು ಪಡೆಯಲು ಮುಂದಾಗಿರುವ ರಾಜ್ಯ ಅದು ಕರ್ನಾಟಕ‌ ಮಾತ್ರ ಎಂದ‌ರು. ಕಳೆದ ಸಾಲಿನಲ್ಲಿ ಡಿಸಿಸಿ ಬ್ಯಾಂಕಿನ ಮೂಲಕ 13 ಸಾವಿರ ಕೋಟಿ ರೂ.ಗಳ ಸಾಲವನ್ನು ನೀಡಿದ್ದೇವೆ ಪ್ರಸಕ್ತ ಸಾಲಿನಲ್ಲಿ 15 ಸಾವಿರ ಕೋಟಿ ಸಾಲ ನೀಡುವ ಗುರಿಯನ್ನು ಹೊಂದಿದ್ದೇವೆ ಎಂದರು.

ಜಿಲ್ಲಾ ಒಕ್ಕೂಟದ ಕಟ್ಟಡವನ್ನು ನಿರ್ಮಿಸಲು ರಾಜ್ಯ ಸಹಕಾರ ಇಲಾಖೆಯಿಂದ ಅಗತ್ಯ ನೆರವು ಕಲ್ಪಿಸಲು ಬದ್ದವಾಗಿದ್ದು ಕಟ್ಟಡವನ್ನು‌ ಮಾದರಿಯಾಗಿ ನಿರ್ಮಿಸಬೇಕೆಂದು‌ ಸಲಹೆ‌ ನೀಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಅಭಿವೃದ್ಧಿಗಾಗಿ‌ ಅನೇಕ  ಸೌಲಭ್ಯಗಳನ್ನು ನೀಡುತ್ತಿದ್ದು ಅದನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.

ಸಂಸದ ಬಿ.ಎನ್.ಬಚ್ಚೇಗೌಡ,ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು,ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ಸಹಕಾರ ಇಲಾಖೆಯ‌ ನಿಬಂಧಕರಾದ ಝೀಯಾಉಲ್ಲಾ, ಕೋಚಿಮುಲ್‌ ಅಧ್ಯಕ್ಷ ನಂಜೇಗೌಡ,ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ‌ ಗೋವಿಂದಗೌಡ,ಉಪಾಧ್ಯಕ್ಷ ತೋಪಡ ನಾಗರಾಜ್, ಮಾಜಿ ಶಾಸಕ ಕೆಪಿ ಬಚ್ಚೇಗೌಡ,ಜಿಪಂ‌ ಅಧ್ಯಕ್ಷ ಚಿಕ್ಕನರಸಿಂಹಯ್ಯ (ಚಿನ್ನಿ) ಜಿಲ್ಲಾಧಿಕಾರಿ ಆರ್.ಲತಾ,ಜಿಲ್ಲಾ ಎಸ್ಪಿ ಮಿಥುನ್ ಕುಮಾರ್,ರಾಜ್ಯ ಸೌಹಾರ್ದ ಸಹಕಾರ ಮಂಡಳದ ಅಧ್ಯಕ್ಷ ಕೃಷ್ಣರೆಡ್ಡಿ,ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಹೆಚ್.ಎನ್.ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.