Server Problem: ಸರ್ವರ್ ಕಿರಿಕಿರಿ: ತಿದ್ದುಪಡಿಗೆ 800 ಅರ್ಜಿ ಸಲ್ಲಿಕೆ
Team Udayavani, Sep 13, 2023, 1:57 PM IST
ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಪಡಿತರ ಚೀಟಿಗಳ ತಿದ್ದಿಪಡಿ ಹಾಗೂ ಸೇರ್ಪಡೆಗೆ ಅವಕಾಶ ನೀಡಿದರೂ, ಸರ್ವರ್ ಸಮಸ್ಯೆಯಿಂದ ಜಿಲ್ಲೆಯಲ್ಲಿ ಎರಡು ದಿನದಲ್ಲಿ ಕೇವಲ 800 ಅರ್ಜಿ ಮಾತ್ರ ಸಲ್ಲಿಕೆ ಆಗಿದ್ದು ಸಾವಿರಾರು ಮಂದಿಗೆ ತಿದ್ದುಪಡಿ ಹಾಗೂ ಸೇರ್ಪಡೆಗೆ ಅವಕಾಶ ಗ್ಯಾರಂಟಿ ಯೋಜನೆಗಳು ಕೈ ತಪ್ಪುವ ಆತಂಕ ಎದುರಾಗಿದೆ.
ಹೌದು, ರಾಜ್ಯ ಸರ್ಕಾರ ಮಹತ್ವಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಪಡಿತರ ಚೀಟಿಯಲ್ಲಿ ಯಾಜಮಾನಿ ಎಂದು ನಮೂದಾಗಿರುವರನ್ನು ಮಾತ್ರ ಪರಿಗಣಿಸಿ ಅರ್ಜಿ ಸ್ಪೀಕರಿಸಿದ್ದು, ಇದರಿಂದ ಜಿಲ್ಲೆಯಲ್ಲಿ ಸಾವಿರಾರು ಮಂದಿ ಮಹಿಳೆಯರು ಗೃಹಲಕ್ಷ್ಮಿಯಿಂದ ವಂಚಿತರಾಗಿದ್ದಾರೆ. ಆದರೆ, ಸರ್ಕಾರ ಪಡಿತರ ಚೀಟಿ ತಿದ್ದುಪಡಿ ಹಾಗೂ ಕುಟುಂಬಸ್ಥರ ಹೆಚ್ಚುವರಿ ಸೇರ್ಪಡೆಗೆ ಅವಕಾಶ ಕಲ್ಪಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿಕೆ ಅವಕಾಶ ಕಲ್ಪಿಸಿದರೂ, ಅರ್ಜಿ ಸ್ಪೀಕಾರ ಆರಂಭಗೊಂಡ ದಿನದಿಂದಲೂ ಕೂಡ ತಾಂತ್ರಾಂಶದ ಸರ್ವರ್ ಕಿರಿಕಿರಿಯ ಪರಿಣಾಮ ಸೈಬರ್ ಕೇಂದ್ರಗಳಲ್ಲಿ ಸಾರ್ವಜನಿಕರು ಪಡಿತರ ಚೀಟಿ ತಿದ್ದುಪಡಿ ಹಾಗೂ ಸೇರ್ಪಡೆಗೆ ಅವಕಾಶ ಸಿಗದೇ ತೀವ್ರ ಸಮಸ್ಯೆ ಎದುರಾಗಿದೆ. ಜಿಲ್ಲೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನೀಡಿದ್ದ ಗಡವು ಸೆ.8ಕ್ಕೆ ಕೊನೆಗೊಂಡಿದೆ. ಕೇವಲ ಎರಡು ದಿನದಲ್ಲಿ ಮಾತ್ರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಸರ್ಕಾರ ಅವಕಾಶ ನೀಡಿತ್ತು.
ಗುಡಿಬಂಡೆಯಲ್ಲಿ ಬರೀ 8 ಅರ್ಜಿ ಸಲ್ಲಿಕೆ: ಆನ್ ಲೈನ್ ತಿದ್ದುಪಡಿಗೆ ಸರ್ವರ್ ಸಮಸ್ಯೆ ಬಹುವಾಗಿ ಕಾಡಿದ ಪರಿಣಾಮ ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ಬರೀ 8 ಅರ್ಜಿ ಸಲ್ಲಿಕೆ ಆಗಿದೆ. ನೂರಾರು ಫಲಾನುವಿಗಳು ಗಂಟೆಗಟ್ಟಲೇ ಸೈಬರ್ ಕೇಂದ್ರಗಳ ಮುಂದೆ ತಿದ್ದುಪಡಿ ಹಾಗೂ ಕುಟುಂಬಸ್ಥರ ಹೆಸರು ಸೇರ್ಪಡೆಗೆ ಕಾದು ಕೊನೆಗೂ ಸಾಧ್ಯವಾಗದೇ ವಾಪಸ್ ಹೋಗಿದ್ದಾರೆ. ಇದೇ ರೀತಿಯ ಪರಿಸ್ಥಿತಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕಂಡು ಬಂದಿದೆ.
ಜಿಲ್ಲೆಯಲ್ಲಿ ಗ್ಯಾರಂಟಿ ಸೌಲಭ್ಯಗಳು ಮರೀಚಿಕೆ: ಜಿಲ್ಲೆಯಲ್ಲಿ ಪಡಿತರ ಚೀಟಿಗೆ ಸೇರ್ಪಡೆ ಹಾಗೂ ತಿದ್ದುಪಡಿಗೆ ಸಾಕಷ್ಟು ಮಂದಿ ಹಲವು ದಿನಗಳಿಂದ ಚಾತಕ ಪಕ್ಷಿಗಳಂತೆ ಎದುರು ನೋಡುತ್ತಿದ್ದರು. ಆದರೆ ಸರ್ಕಾರ ಪಡಿತರ ಚೀಟಿಯಲ್ಲಿನ ಮಾಹಿತಿ ತಿದ್ದುಪಡಿ ಹಾಗೂ ಹೆಚ್ಚುವರಿ ಕುಟುಂಬದ ಸದಸ್ಯರ ಸೇರ್ಪಡೆಗೆ ಅವಕಾಶ ಕಲ್ಪಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದರೂ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆಯಿಂದ ಇನ್ನೂ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಸಿಗದೇ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಗಳಿಂದ ವಂಚಿತರಾಗುವಂತಾಗಿದೆ.
ಜಿಲ್ಲೆಯಲ್ಲಿ ಪಡಿತರ ಚೀಟಿ ತಿದ್ದುಪಡಿ ಹಾಗೂ ಹೆಸರು ಸೇರ್ಪಡೆಗೆ ಸೆ.6 ರಿಂದ ಸೆ.8ರ ವರೆಗೂ ಒಟ್ಟು 800 ಅರ್ಜಿಗಳು ಜಿಲ್ಲಾದ್ಯಂತ ಸಲ್ಲಿಕೆಯಾಗಿವೆ. ಜಿಲ್ಲೆಗೆ ಎರಡನೇ ಹಂತದಲ್ಲಿ ಅನ್‌ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ ಸಿಗಬಹುದು. -ಸವಿತಾ, ಉಪ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ
-ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.