ಘನ ತ್ಯಾಜ್ಯ ನಿರ್ವಹಣೆಗೆ ಸೇವಾ ಶುಲ್ಕ ವಸೂಲಿಗೆ ವಿರೋಧ

ಖಾಸಗಿ ಆಸ್ಪತ್ರೆ ವೈದ್ಯರು, ಹೋಟೆಲ್, ಕಲ್ಯಾಣ ಮಂಟಪ ಮಾಲೀಕರ ವಿರೋಧ | ನಗರಸಭೆ ಕ್ರಮಕ್ಕೆ ಬೇಸರ

Team Udayavani, May 25, 2019, 2:42 PM IST

cb-tdy-5..

ಚಿಕ್ಕಬಳ್ಳಾಪುರ ನಗರಸಭೆ ಸಭಾಂಗಣದಲ್ಲಿ ಘನ ತ್ಯಾಜ್ಯ ನಿರ್ವಹಣೆಗೆ ಸೇವಾ ಶುಲ್ಕ ವಿಧಿಸುವ ಸಂಬಂಧ ಕರೆಯಲಾಗಿದ್ದ ಸಭೆಯಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು, ಬಾರ್‌ ಆ್ಯಂಡ್‌ ರೆಸ್ಟೋರೆಂಟ್ ಮಾಲೀಕರು ಉಪಸ್ಥಿತರಿದ್ದರು.

ಚಿಕ್ಕಬಳ್ಳಾಪುರ: ಸ್ಥಳೀಯ ನಗರಸಭೆ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಕಸ ಉತ್ಪಾದಿಸುವವರಿಗೆ ಘನ ತ್ಯಾಜ್ಯ ನಿರ್ವಹಣೆ ನಿಯಮ 2016ರ ಅಡಿ ಸೇವಾ ಶುಲ್ಕ ವಿಧಿಸುವ ನಗರಸಭೆ ಕ್ರಮಕ್ಕೆ ಖಾಸಗಿ ಆಸ್ಪತ್ರೆಗಳ ವೈದ್ಯರು, ಬಾರ್‌ ಆ್ಯಂಡ್‌ ರೆಸ್ಟೋರೆಂಟ್ ಮಾಲೀಕರು, ಹೋಟೆಲ್ ಹಾಗೂ ಕಲ್ಯಾಣ ಮಂಟಪದ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ನಗರಸಭೆ ಸಭಾಂಗಣದಲ್ಲಿ ಈ ಸಂಬಂಧ ನಡೆದ ಸಭೆಯಲ್ಲಿ ಸೇವಾ ಶುಲ್ಕ ವಸೂಲಿ ಮಾಡುವ ನಗರಸಭೆ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಯಿತು. ಘನ ತ್ಯಾಜ್ಯ ನಿರ್ವಹಣೆ ಮಾಡುವುದು ಸ್ಥಳೀಯ ಸಂಸ್ಥೆಗಳ ಹೊಣೆಗಾರಿಕೆಯಾಗಿದೆ. ಅದನ್ನು ನಮ್ಮ ಮೇಲೆ ಹೊರಿಸಿದರೆ ಹೇಗೆ ಎಂದು ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದ ಮಾಲೀಕರು ನಗರಸಭೆ ಅಧಿಕಾರಿಗಳನ್ನು ಪ್ರಶ್ನಿಸಿದರು.

ಹೊಸ ಮಂಡಳಿ ಬರಲಿ: ಭಾರತೀಯ ವೈದ್ಯಕೀಯ ಸಂಘ (ಐಎಂಎ) ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಂ.ವೆಂಕಟಾಚಲಪತಿ ಮಾತನಾಡಿ, ಇದು ತುಂಬಾ ಮಹತ್ವದ ನಿರ್ಧಾರ. ಹೀಗಾಗಿ ಇದನ್ನು ಆಡಳಿತ ಮಂಡಳಿ ಇಲ್ಲದೇ ಅಧಿಕಾರಿಗಳು ತೆಗೆದುಕೊಳ್ಳುವುದು ಬೇಡ. ಚುನಾವಣೆ ಮುಗಿದು ಹೊಸ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬರುವವರೆಗೆ ಅಧಿಕಾರಿಗಳು ಕಾಯಿರಿ. ಬಳಿಕ ಆಡಳಿತ ಮಂಡಳಿ ಸಭೆ ತೆಗೆದುಕೊಳ್ಳುವ ತೀರ್ಮಾನದಂತೆ ಕ್ರಮಕ್ಕೆ ಮುಂದಾಗಿ ಎಂದು ಹೇಳಿದರು.

ನಗರದ ಮಂಜುನಾಥ್‌ ಆಸ್ಪತ್ರೆ ಮಾಲೀಕ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಜಿ.ವಿ.ಮಂಜುನಾಥ್‌ ಮಾತನಾಡಿ, ನಗರದ ಸ್ವಚ್ಛತೆ, ಆರೋಗ್ಯ, ರಸ್ತೆ, ಕುಡಿಯುವ ನೀರು, ಒಳಚರಂಡಿ ನಿರ್ವಹಣೆ ನೋಡಿಕೊಳ್ಳುವುದು ನಗರ ಸ್ಥಳೀಯ ಸಂಸ್ಥೆಗಳ ಜವಾಬ್ದಾರಿ. ಅದಕ್ಕಾಗಿ ಸಾರ್ವಜನಿಕರು ಸರ್ಕಾರಕ್ಕೆ ತೆರಿಗೆ ಪಾವತಿಸುತ್ತಾರೆ.

ಆಸ್ಪತ್ರೆಗಳಿಗೆ ಸೇವಾ ಶುಲ್ಕ ಬೇಡ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಅನುದಾನ ನೀಡುತ್ತವೆ. ಆದ್ದರಿಂದ ತ್ಯಾಜ್ಯದ ನೆಪದಲ್ಲಿ ಸೇವಾ ಶುಲ್ಕ ವಿಧಿಸುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮೂಲಸೌಕರ್ಯ ಒದಗಿಸುವುದು ನಗರ ಸ್ಥಳೀಯ ಸಂಸ್ಥೆಗಳ ಕರ್ತವ್ಯ. ಅದಕ್ಕಾಗಿ ಶುಲ್ಕ ಪಡೆಯುವುದು ಅನೈತಿಕ ಕ್ರಮ ಎಂದು ತಮಿಳುನಾಡು ಗ್ರಾಹಕರ ವೇದಿಕೆ ಆದೇಶ ನೀಡಿದೆ. ಇಂತಹದೇ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಲ್ಲಿ ನಾಲ್ಕು ಪ್ರಕರಣಗಳ ವಿಚಾರಣೆ ಬಾಕಿ ಇದೆ. ಆಸ್ಪತ್ರೆಗಳು ಸೇವಾ ಕ್ಷೇತ್ರಗಳ ವ್ಯಾಪ್ತಿಗೆ ಬರುತ್ತವೆ. ಆದ್ದರಿಂದ ಆಸ್ಪತ್ರೆಗಳಿಗೆ ಸೇವಾ ಶುಲ್ಕ ವಿಧಿಸುವ ನಿರ್ಧಾರ ಕೈಬಿಡಬೇಕು ಎಂದು ಆಗ್ರಹಿಸಿದರು.

ಪರಿಸರ ಅಭಿಯಂತರರ ಗಮನಕ್ಕೆ: ನಗರಸಭೆ ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದಾಗಿ ನಗರದ ಅನೇಕ ಕಡೆಗಳಲ್ಲಿ ನೀರು ಹರಿಯದೇ ಅದ್ವಾನ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಅಧಿಕಾರಿಗಳು ಮೊದಲು ಗಮನ ಹರಿಸಲಿ ಎಂದು ತಿಳಿಸಿದರು.

ಚಿತ್ರಮಂದಿರದವರು ನಗರದಲ್ಲಿ ಎಲ್ಲೆಂದರಲ್ಲಿ ಪೋಸ್ಟರ್‌ಗಳನ್ನು ಅಂಟಿಸಿ, ಗಲೀಜು ಮಾಡುವುದು ನಿಲ್ಲಿಸಬೇಕು. ನಿಗದಿತ ಸ್ಥಳಗಳಲ್ಲಿ ಮಾತ್ರ ಪೋಸ್ಟರ್‌ ಅಂಟಿಸಬೇಕು. ನಗರಸಭೆ ವಾಹನಗಳಿಗೆ ತ್ಯಾಜ್ಯ ನೀಡಬೇಕು. ಪರವಾನಗಿ ನವೀಕರಣ ಮಾಡಿಸಬೇಕು. ಈ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಮೇಲಾಧಿಕಾರಿಗಳ ಗಮನಕ್ಕೆ ತರುತ್ತೇವೆಂದು ಸಭೆಯಲ್ಲಿ ಉಪಸ್ಥಿತರಿದ್ದ ನಗರಸಭೆ ಪರಿಸರ ಅಭಿಯಂತರರಾದ ಶಿವಶಂಕರ್‌ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕೇಂದ್ರದ ವೈದ್ಯ ಡಾ.ಸಿದ್ದಲಿಂಗಪ್ಪ, ಡಾ.ಎಚ್.ಎಸ್‌.ಮಧುಕರ್‌, ಡಾ.ರಜನಿ, ಹೋಟೆಲ್, ಬಾರ್‌, ರೆಸ್ಟೋರೆಂಟ್, ಕಲ್ಯಾಣ ಮಂಟಪಗಳ ಮಾಲೀಕರು ಉಪಸ್ಥಿತರಿದ್ದರು.

ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಶುಲ್ಕ ವಿಧಿಸಲಿ:

ಜೀವನ್‌ ಆಸ್ಪತ್ರೆಯ ಡಾ.ಐ.ಎಸ್‌.ರಾವ್‌ ಮಾತನಾಡಿ, ರಾಜ್ಯದಲ್ಲಿ ಮಾತ್ರ ಕೇಂದ್ರ ಸರ್ಕಾರ ಪ್ರಾಯೋಜಿತ ಆಯುಷ್ಮಾನ್‌ ಭಾರತ ಯೋಜನೆಯ ಲಾಭ ಬರೀ ಸರ್ಕಾರಿ ಆಸ್ಪತ್ರೆಗಳಿಗೆ ದೊರೆಯುವಂತೆ ಸೀಮಿತ ಮಾಡಲಾಗಿದೆ. ಉಚಿತವಾಗಿ ಎಲ್ಲ ಸರ್ಕಾರಿ ಸೌಲಭ್ಯಗಳು ಹೊಂದಿರುವ ಆಸ್ಪತ್ರೆಗಳು, ವೈದ್ಯರಿಗೆ ಸರ್ಕಾರ ಹಣ ಹರಿದು ಹೋಗುತ್ತಿದೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಶುಲ್ಕ ವಿಧಿಸಿ ವಸೂಲಿ ಮಾಡಲಿ ಎಂದು ಸಭೆಯಲ್ಲಿ ಭಾಗವಹಿಸಿದ್ದವರು ಸಲಹೆ ನೀಡಿದರು. ನಾವು ಆಸ್ಪತ್ರೆಯಲ್ಲಿ ಉತ್ಪಾದನೆಯಾಗುವ ಜೈವಿಕ ತ್ಯಾಜ್ಯ ವಿಲೇವಾರಿಗೆ ಖಾಸಗಿ ಕಂಪನಿಗಳ ಸಹಕಾರ ಪಡೆದಿದ್ದೇವೆ. ಇನ್ನು ನಗರಸಭೆ ವಾಹನಗಳಿಗೆ ನೀಡುವುದು ಸಾರ್ವಜನಿಕರಿಂದ ಉತ್ಪಾದನೆಯಾದ ತ್ಯಾಜ್ಯ. ಅದನ್ನು ತೆಗೆದುಕೊಂಡು ಹೋಗುವುದು ನಗರಸಭೆ ಕರ್ತವ್ಯ. ಅದಕ್ಕೆ ನಾವು ಶುಲ್ಕ ಕಟ್ಟಬೇಕು ಎನ್ನುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಪ್ರತಿಯೊಬ್ಬರಿಗೂ ಜವಾಬ್ದಾರಿ ಇರಲಿ:

ನಗರದ ಸ್ವಚ್ಛತೆ ಕಾಯ್ದುಕೊಂಡು ಪರಿಸರ ಸಂರಕ್ಷಣೆ ಮಾಡುವ ಜತೆಗೆ ಮುಂದಿನ ಪೀಳಿಗೆಗಾಗಿ ಯೋಜನಾ ಬದ್ಧವಾಗಿ ನಗರ ಅಭಿವೃದ್ಧಿ ಮಾಡುವುದು ನಗರಸಭೆ ಕರ್ತವ್ಯ. ಆದ್ದರಿಂದ ನಗರದ ಸ್ವಚ್ಛತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದ ಕಸ ಉತ್ಪಾದಕರಿಗೂ ಜವಾಬ್ದಾರಿ ಬರಲಿ ಎಂಬ ಉದ್ದೇಶಕ್ಕೆ ಸೇವಾ ಶುಲ್ಕ ವಿಧಿಸಲು ನಿರ್ಧರಿಸಲಾಗಿದೆ ಎಂದು ನಗರಸಭೆ ಪರಿಸರ ಅಧಿಕಾರಿ ಶಿವಶಂಕರ್‌ ತಿಳಿಸಿದರು. ಪ್ರತಿಯೊಬ್ಬರೂ ಹಸಿ ಮತ್ತು ಒಣ ಕಸವನ್ನು ವಿಂಗಡಿಸಿ ನೀಡಬೇಕು. ಗ್ರಾಹಕರಿಗೆ ಕೂಡ ವರ್ತಕರು ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು. ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳಲ್ಲಿ ಹೆಚ್ಚಿನ ಕಸ ಉತ್ಪಾದನೆಯಾಗುತ್ತಿದೆ. ಜತೆಗೆ ನಿಷೇಧಿತ ಪ್ಲಾಸ್ಟಿಕ್‌ ಗ್ಲಾಸ್‌ ಮತ್ತು ಬ್ಯಾಗನ್ನು ಕೆಲವರು ಕದ್ದುಮುಚ್ಚಿ ಬಳಕೆ ಮಾಡುತ್ತಿದ್ದು, ಕೂಡಲೇ ನಿಲ್ಲಿಸಬೇಕೆಂದು ತಾಕೀತು ಮಾಡಿದರು.

ಟಾಪ್ ನ್ಯೂಸ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Karkala: ಜಾಗದ ವಿಚಾರ; ಮಹಿಳೆಗೆ ಹಲ್ಲೆ; ಪ್ರಕರಣ ದಾಖಲು

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

complaint

Manipal: ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ; ದೂರು ದಾಖಲು

de

Kundapura: ಮಲಗಿದ್ದಲ್ಲಿಯೇ ವ್ಯಕ್ತಿ ಸಾವು

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.