ಸಚಿವರ ಕಾರ್ಯಕ್ರಮದಲ್ಲಿ ಅವಮಾನ
Team Udayavani, Jun 9, 2020, 7:24 AM IST
ಶಿಡ್ಲಘಟ್ಟ: ತಾಲೂಕಿನ ತಾತಹಳ್ಳಿಯ ಸಮೀಪ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪರಿಸರ ದಿನಾಚರಣೆಯ ಅವ್ಯವಸ್ಥೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು ಸರ್ವಾಧಿಕಾರಿ ಧೋರಣೆ ಅನುಸರಿಸಿದ್ದಾರೆ ಎಂದು ಕ್ಷೇತ್ರದ ಶಾಸಕ ವಿ.ಮುನಿಯಪ್ಪ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ಇದೀಗ ತಾಪಂ ಅಧ್ಯಕ್ಷ ರಾಜಶೇಖರ್ ಸಂಘಟಕರ ವಿರುದ ಆಕ್ರೋಶ ವ್ಯಕ್ತಪಡಿಸಿ ತಮಗೂ ಸಹ ಅವಮಾನಗೊಳಿಸಲಾಗಿದೆ ಎಂದು ಕಿಡಿಕಾರಿದ್ದಾರೆ.
ನಗರದ ತಾಪಂ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಸರ ದಿನಾಚರಣೆ ಆಚರಿಸಲು ಸಹಕಾರ ನೀಡಿದ ನಮಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪೊಲೀಸರು ತಡೆಯೊಡ್ಡಿದರು ಎಂದು ರಾಜಶೇಖರ್ ಆರೋಪಿಸಿದರು. ರೈತರು ಮತ್ತು ಪತ್ರಕರ್ತರನ್ನು ತಡೆಯೊಡ್ಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಕ್ರಮದ ಆಯೋಜಕರಿಗೆ ನೋಟಿಸ್ ಜಾರಿಗೊಳಿಸಿ ಅವರಿಂದ ಬರುವ ಮಾಹಿತಿ ಆಧರಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ತಾಪಂ ಇಒ ಬಿ.ಶಿವಕುಮಾರ್ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿ 64.304 ಲಕ್ಷ ರೂ. ವೆಚ್ಚದಲ್ಲಿ ತಾತಹಳ್ಳಿ ಅರಣ್ಯ ಪ್ರದೇಶವನ್ನು ಅಭಿವೃದಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಆದರೆ ಸಂಘಟನೆಯೊಂದರ ಪದಾಧಿಕಾರಿಗಳು ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವುದು ಸತ್ಯಕ್ಕೆ ದೂರ ಎಂದರು. ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಚಂದ್ರಪ್ಪ ಮಾತನಾಡಿ, ತಾಲೂಕಿನಲ್ಲಿ ನರೇಗಾ ಯೋಜನೆಯಡಿ ಬದು ನಿರ್ಮಾಣ ಅಭಿಯಾನ ಆರಂಭಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.