ಶಿಡ್ಲಘಟ್ಟ ಕ್ಷೇತ್ರದಲ್ಲಿ ಸ್ಪರ್ಧಿಸಲು ಕೈ ಟಿಕೆಟ್‌ ಖಾತ್ರಿ

Team Udayavani, Mar 1, 2023, 3:02 PM IST

tdy-18

ಶಿಡ್ಲಘಟ್ಟ: ಕ್ಷೇತ್ರದಲ್ಲಿ ನಾನು ಮಾಡಿರುವ ಸೇವೆಯನ್ನು ರಾಜ್ಯ ಮತ್ತು ರಾಷ್ಟ್ರ ಕಾಂಗ್ರೆಸ್‌ ನಾಯಕರು ಗಮನಹರಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್‌ ನೀಡುವ ಆಶ್ವಾಸನೆಯನ್ನು ನೀಡಿದ್ದಾರೆ.

ಕ್ಷೇತ್ರದಲ್ಲಿ ಮನೆ ಮಗನಾಗಿ ಪಕ್ಷಾತೀತವಾಗಿ ಸಹಾಯ ಮಾಡುವ ಕೆಲಸವನ್ನು ಮಾಡುತ್ತೇವೆ ಎಂದು ಎಬಿಡಿ ಸಂಸ್ಥೆ ಅಧ್ಯಕ್ಷ ಹಾಗೂ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಹೇಳಿದರು.

ತಾಲೂಕಿನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ ಎಲ್ಲರು ಖುಷಿಯಾಗಿದ್ದಾರೆ ನಾನು ಸಂತಸದಲ್ಲಿದ್ದೇನೆ ಎಂದ ಅವರು, ಹೇಮಾರ‌್ಲಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್‌ ಪಕ್ಷವೇ ಇಲ್ಲ ಎನ್ನುವರಿಗೆ ಮತದಾರರು ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಯನ್ನು ಗೆಲ್ಲಿಸಿ ಕಾಂಗ್ರೆಸ್‌ ಎಲ್ಲಿದೆಯೆಂದು ತೋರಿಸಿದ್ದಾರೆ ಈ ಭಾಗದ ಜನರು ನನ್ನ ಮೇಲೆ ವಿಶ್ವಾಸ ಇಟ್ಟು ಗ್ರಾಪಂ ಉಪ ಚುನಾವಣೆಯಲ್ಲಿ ಬೆಂಬಲಿಸಿ ಆಶೀರ್ವಾದ ಮಾಡಿದ್ದಾರೆ. ಅವರಿಗೆ ನಾನು ಸದಾ ಚಿರಋಣಿಯಾಗಿರುತ್ತೇನೆ. ಗ್ರಾಪಂನಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸವನ್ನು ಮಾಡಲು ನೂತನ ಗ್ರಾಪಂ ಸದಸ್ಯ ಕೆ.ಗಂಗಪ್ಪ ಶಕ್ತಿಶಾಲಿಯಾಗಿದ್ದಾರೆ ಎಂದು ಹೇಳಿದರು.

ಕ್ಷೇತ್ರದಲ್ಲಿ ನಾನು ಮಾಡಿರುವ ಸೇವೆಯನ್ನು ಕಾಂಗ್ರೆಸ್‌ ವರಿಷ್ಠರು ಸೂಕ್ಷ್ಮವಾಗಿ ಗಮನಹರಿಸಿದ್ದಾರೆ. ಖಾಸಗಿಯಾಗಿ ಸಮೀಕ್ಷೆ ನಡೆಸಿದ್ದಾರೆ. ರಾಜ್ಯ ಮತ್ತು ರಾಷ್ಟ್ರನಾಯಕರು ಕಾರ್ಯವೈಖರಿ ಮತ್ತು ಸೇವಾ ಕಾರ್ಯವನ್ನು ಪ್ರಶಂಸಿದ್ದಾರೆ. ಈಗಾಗಲೇ ವಿಧಾನಸಭೆ ಕಾಂಗ್ರೆಸ್‌ ಟಿಕೆಟ್‌ ನೀಡಲು ಭರವಸೆ ನೀಡಿದ್ದಾರೆ ಇನ್ನೂ ಕೇವಲ ಅಧಿಕೃತವಾಗಿ ಘೋಷಣೆ ಮಾತ್ರ ಬಾಕಿ ಉಳಿದಿದೆ ಕಾಂಗ್ರೆಸ್‌ ಕಾರ್ಯಕರ್ತರು ಚುನಾವಣೆಗೆ ಸಜ್ಜಾಗಬೇಕು ಎಂದು ಸಲಹೆ ನೀಡಿದರು.

ಮೇಕೆದಾಟು, ಭಾರತ್‌ ಜೋಡೋ, ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ಅತ್ಯಂತ ಪ್ರಾಮಾಣಿಕವಾಗಿ ನಡೆಸಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ ಕೊರೊನಾ ಸಂಕಷ್ಟದ ಸಮಯದಲ್ಲಿ ಕೈಲಾದಷ್ಟು ಸೇವೆ ಸಲ್ಲಿಸಿದ್ದೇನೆ ಮುಂದೆಯೂ ಮಾಡುತ್ತೇನೆ ಕ್ಷೇತ್ರದಲ್ಲಿ ಸಂಘಟಿತರಾಗಿ ಕಾರ್ಯನಿರ್ವಹಿಸಿ ಕ್ಷೇತ್ರದಲ್ಲಿ ಮತ್ತು ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸುವ ಕೆಲಸವನ್ನು ಮಾಡೋಣ ಕಾರ್ಯಕರ್ತರಿಗೆ ಟಿಕೆಟ್‌ ಗೊಂದಲ ಬೇಡ ನನಗೆ ಟಿಕೆಟ್‌ ಸಿಗುತ್ತದೆ ಚುನಾವಣೆಯನ್ನು ಎದುರಿಸಲು ಎಲ್ಲರು ಸಜ್ಜಾಗಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಹನಾ ರಾಡ ಮಾತನಾಡಿ ಹೇಮಾರ‌್ಲಹಳ್ಳಿಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ ನಾವು ಅಭಿವೃದ್ಧಿ ವಿಷಯದಲ್ಲಿ ಭೇದ ಭಾವ ಮಾಡುವುದಿಲ್ಲ ನಮಗೆ ಸಮಾಜ ಕಟ್ಟುವುದೇ ಮುಖ್ಯ ಗುರಿ ಎಂದ ಅವರು ರಾಜೀವ್‌ಗೌಡ ಅವರು ಅನೇಕ ಒಳ್ಳೆಯ ಕೆಲಸವನ್ನು ಮಾಡಿದ್ದಾರೆ ಅವರಿಗೆ ಶಕ್ತಿ ಕೊಡುವ ಕೆಲಸವನ್ನು ತಾವು ಮಾಡಬೇಕು ಎಂದರು.

ರಾಜೀವ್‌ಗೌಡ ಅವರ ತಂದೆ ವರದಪ್ಪ, ಗ್ರಾಪಂ ಸದಸ್ಯ ಕೆ.ಗಂಗಪ್ಪ, ಯುವ ಮುಖಂಡ ನಾರಾಯಣಗೌಡ, ಯಣ್ಣೂರು ಮಂಜುನಾಥ್‌, ವೀರಪ್ಪ, ಚಂದ್ರಪ್ಪ, ಮಹೇಶ್‌, ಮಂಜುನಾಥ್‌, ಶಶಿ, ಕೆಪಿಸಿಸಿ ಮಾಜಿ ಸದಸ್ಯ ಗುಡಿಹಳ್ಳಿ ನಾರಾಯಣಸ್ವಾಮಿ, ತಾಪಂ ಮಾಜಿ ಉಪಾಧ್ಯಕ್ಷ ನಾಗರಾಜ್‌, ಹೇಮಾರ‌್ಲಹಳ್ಳಿ ಆನಂದ್‌ರೆಡ್ಡಿ ಇತರರಿದ್ದರು.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.