ರಾಜಕೀಯ ವೈಷಮ್ಯಕ್ಕೆ ವಾರ್ಡ್ ಬಲಿ
Team Udayavani, Apr 17, 2022, 3:08 PM IST
ಶಿಡ್ಲಘಟ್ಟ: ನಗರಸಭೆಯ ಅಧ್ಯಕ್ಷೆ ಸುಮಿತ್ರ ರಮೇಶ್ ಹಾಗೂ ಉಪಾಧ್ಯಕ್ಷ ಬಿ.ಅಫ್ಸರ್ ಪಾಷ ಅವರ ನಡುವೆ ಭುಗಲೆ ದ್ದಿರುವ ರಾಜಕೀಯ ವೈಷಮ್ಯದಿಂದ ಇಡೀ ವಾರ್ಡಿನ ನಾಗರಿಕರು ಕನಿಷ್ಠ ಸೌಲಭ್ಯಗಳಿಂದ ವಂಚಿತಗೊಂಡಿದ್ದಾರೆ.
ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ರಮೇಶ್ ಹಾಗೂ ಉಪಾಧ್ಯಕ್ಷ ಬಿ.ಅಫ್ಸರ್ ಪಾಷ ಅವರ ನಡುವೆ ಗಲಾಟೆ ನಡೆದು ಪ್ರಕರಣ ಠಾಣೆಯ ಮೆಟ್ಟಲೇರಿತ್ತು. ಆದರೆ ಇಡೀ ವಾರ್ಡಿನ ನಾಗರಿಕರು ಮೂಲ ಸೌಲಭ್ಯಗಳಿಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ವಾರ್ಡಿನಲ್ಲಿ ಕುಡಿಯುವ ನೀರು ಪೂರೈಕೆ ಮಾಡುವ ಸುಮಾರು 5 ಕೊಳವೆಬಾವಿಗಳ ಪೈಕಿ ಮೂರಿನಲ್ಲಿ ಮೋಟರ್ ಕೆಟ್ಟು ಹೋಗಿ ದ್ದು, ಅದು ದುರಸ್ತಿಯಾಗದೆ ಕುಡಿಯಲು ನೀರಿಲ್ಲದಂತಾಗಿದೆ ಎಂದು ನಾಗರಿಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಬೋರ್‌ವೆಲ್ ವಿಚಾರದಲ್ಲಿ ಗಲಾಟೆ: 29ನೇ ವಾರ್ಡಿನಲ್ಲಿರುವ ಸುಮಾರು 5 ಕೊಳವೆ ಬಾವಿಗಳಲ್ಲಿ ಮೋಟರ್ ಹೋಗಿದೆ ಅದನ್ನು ದುರಸ್ತಿ ಮಾಡಿಸುವ ವಿಚಾರದಲ್ಲಿ ನಗರಸಭೆ ಅಧ್ಯಕ್ಷರು ಹಾಗೂ ಉಪಾ ಧ್ಯಕ್ಷರ ಮಧ್ಯೆ ನಡೆದ ಗಲಾಟೆಯಿಂದ ನಾಗರಿಕರು ತೊಂದರೆಯಾಗಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಜಿದ್ದಾಜಿದ್ದಿನಿಂದ ನಮಗೆ ಯಾಕೆ ತೊಂದರೆ ನೀಡುತ್ತಿದ್ದೀರಾ ? ಎಂದಿರುವ ಸ್ಥಳೀಯರು, ಕೆಟ್ಟುನಿಂತಿರುವ ಬೋರ್‌ವೆಲ್ ಮೋಟರ್ ಸರಿಪಡಿಸಿ ಕುಡಿಯುವ ನೀರು ಪೂರೈಕೆ ಮಾಡಲು ಅಧಿಕಾರಿಗಳು ಅಗತ್ಯ ಕ್ರಮವಹಿ ಸಬೇಕೆಂದು ಮನವಿ ಮಾಡಿದ್ದಾರೆ.
ಎಲ್ಲಡೆ ಕಸದ ರಾಶಿ: 29ನೇ ವಾರ್ಡ್ ನಲ್ಲಿ ಎಲ್ಲೆಂದರಲ್ಲಿ ಕಸದ ರಾಶಿಗಳು ಬಿದ್ದಿದ್ದು, ಸುತ್ತಮುತ್ತಲಿನ ಜನರು ಸಾಂಕ್ರಾಮಿಕ ರೋಗದ ಭೀತಿ ಕಾಡುತ್ತಿದೆ. ಸೊಳ್ಳೆಗಳ ಕಾಟ ಮತ್ತು ಬೀದಿನಾಯಿಗಳ ಹಾವಳಿಯಿಂದ ನಾಗರಿಕರ ನೆಮ್ಮದಿ ಹಾಳಾಗಿದೆ. ವಾರ್ಡ್‌ನಲ್ಲಿ ಬಹುತೇಕ ವಿದ್ಯುತ್ ದೀಪಗಳು ಕೆಟ್ಟುಹೋಗಿವೆ. ರಾತ್ರಿವೇಳೆ ದೀಪಗಳು ಇಲ್ಲದೆ ಕತ್ತಲಲ್ಲಿ ಸಂಚರಿಸುವ ಶೋಚನೀಯ ಸ್ಥಿತಿ ನಿರ್ಮಾಣವಾಗಿದೆ ಎಂದು ನಾಗರಿಕರು ತಮ್ಮ ಅಳಲು ತೋಡಿಕೊಂಡರು.
ನಗರಸಭೆ ಉಪಾಧ್ಯಕ್ಷ ಅಫ್ಸರ್‌ಪಾಷ ಅವರಿಗೆ ದೂರು ನೀಡಿದರೆ ನಗರಸಭೆಯ ಅಧಿಕಾರಿಗಳನ್ನು ಕೇಳಿ ಎನ್ನುತ್ತಾರೆ. ನಾವು ಯಾರನ್ನು ಕೇಳಬೇಕು ಎಂದು ತಿಳಿಯ ದಂತಾಗಿದೆ.
ನಮ್ಮ ವಾರ್ಡಿನಲ್ಲಿರುವ ಕೊಳ ವೆಬಾವಿಗಳ ಸಮಸ್ಯೆಯಿಂದಲೇ ನಗರಸಭೆಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ನಡುವೆ ಜಗಳ ವಾಗಿದೆ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿದಿ ಸಮಸ್ಯೆಯನ್ನು ಇತ್ಯರ್ಥ ಪಡಿಸಬೇಕು ಎಂದು ನಾಗರಿಕರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.