ಅವಳಿ ಜಿಲ್ಲೆಗೆ ಎತ್ತಿನ ಹೊಳೆ ನೀರು
Team Udayavani, Mar 2, 2022, 1:57 PM IST
ಚಿಕ್ಕಬಳ್ಳಾಪುರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಫ್ಲೋರೈಡ್ ಮುಕ್ತ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ನಮ್ಮ ಸರ್ಕಾರ ಬದ್ಧವಾಗಿದ್ದು, ಈ ಭಾಗದ ಜನರಿಗೆ ಎತ್ತಿನಹೊಳೆ ಮೂಲಕ ನೀರು ಹರಿಸಲು ಅಗತ್ಯ ಅನುದಾನವನ್ನು ಒದಗಿಸಿ ಭೂ ಸ್ವಾಧೀನ ಪ್ರಕ್ರಿಯೆಗೆ ವೇಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ತಾಲೂಕಿನ ನಂದಿ ಗ್ರಾಮದ ಶ್ರೀ ಭೋಗನಂದೀಶ್ವರ ದೇವಾಲಯದ ಆವರಣದಲ್ಲಿ ಶಿವರಾತ್ರಿ ಅಂಗವಾಗಿ ಆಯೋಜಿಸಿದ್ದ ಶಿವೋತ್ಸವ-2022ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ತುಮಕೂರುಜಿಲ್ಲೆಯ ಪಾವಗಡ ಮತ್ತು ಕೋಲಾರ ಜಿಲ್ಲೆಯ ಮುಳಬಾಗಿಲು ವರೆಗೆಕುಡಿಯುವ ನೀರಿನ ಸಮಸ್ಯೆಯ ಕುರಿತು ತಮಗೆ ಅರಿವು ಇದೆ. ಈ ಭಾಗದಜನರಿಗೆ ಶುದ್ಧ ಕುಡಿವ ನೀರು ಪೂರೈಕೆ ಮಾಡಲು ಈ ಬಾರಿಯ ಬಜೆಟ್‌ನಲ್ಲಿ ಅಗತ್ಯ ಹಣಕಾಸಿನ ವ್ಯವಸ್ಥೆಯನ್ನು ಒದಗಿಸಿ ಯೋಜನೆಯನ್ನು ಕ್ರಮಬದ್ದವಾಗಿ ಅನುಷ್ಠಾನಗೊಳಿಸಲಾಗುವುದು ಎಂದರು.
ತಾವು ಕೋಲಾರ ಜಿಲ್ಲೆಗೆ ಭೇಟಿ ನೀಡಿದಾಗ ಕುಡಿಯುವ ನೀರಿನಲ್ಲಿ ಫ್ಲೋರೈಡ್ ಅಂಶ ಪತ್ತೆಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿ ಪಶ್ಚಿಮವಾಹಿನಿಯ ಮೂಲಕ ವ್ಯರ್ಥವಾಗಿ ಸಮುದ್ರ ಪಾಲಾಗುತ್ತಿರುವ ನೀರನ್ನು ಈಭಾಗಕ್ಕೆ ನೀರು ಪೂರೈಕೆ ಮಾಡಲು ಯೋಜನೆಯನ್ನು ರೂಪಿಸಲಾಗಿತ್ತು. ಆದರೆ,ಹಿಂದಿನ ಎತ್ತಿನಹೊಳೆ ಯೋಜನೆಯನ್ನು 2010ರಲ್ಲಿ ಸಿದ್ದಪಡಿಸಿದರು ಹೊರತುಯೋಜನೆಯ ಅನುಷ್ಠಾನಗೊಳಿಸಲು ಇಚ್ಛಾಶಕ್ತಿ ತೋರಲಿಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಪರೋಕ್ಷವಾಗಿ ಸಿಎಂ ಟಾಂಗ್ ಕೊಟ್ಟರು.
ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ, ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಆಶ್ರಮದ ಶ್ರೀ ಮಧುಸುಧನ್ ಸಾಯಿ, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ್, ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ,ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ರಾಜ್ಯ ಮಾವು ಅಭಿವೃಧ್ದಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜ್, ನಗರಸಭೆಯ ಅಧ್ಯಕ್ಷ ಡಿ.ಎಸ್.ಆನಂದ್‌ರೆಡ್ಡಿ(ಬಾಬು),ಜಿಲ್ಲಾಧಿಕಾರಿ ಆರ್.ಲತಾ,ಜಿಪಂ ಸಿಇಒ ಪಿ.ಶಿವಶಂಕರ್, ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿಹೆಚ್.ಅಮರೇಶ್, ಡಿವೈಎಸ್ಪಿ ವಾಸುದೇವ್, ತಹಶೀಲ್ದಾರ್ ಗಣಪತಿ ಶಾಸ್ತ್ರಿ, ನಗರಸಭಾ ಸದಸ್ಯರು ಇತರರಿದ್ದರು.
ಅರ್ಕಾವತಿ ನದಿ ಪುನಶ್ವೇತನಕ್ಕೆ ಒತ್ತು :
ಜಿಲ್ಲೆಯಲ್ಲಿ ಉಗಮವಾಗುವ ಅರ್ಕಾವತಿ ನದಿಯನ್ನು ಪುನಶ್ಚೇತನಗೊಳಿಸಲು ಅಗತ್ಯ ನೆರವುನೀಡಿ ಪುನಃ ನದಿಯ ನೀರು ಈ ಭಾಗದ ಜನರಿಗೆ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಎಂದು ಭರವಸೆ ನೀಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತ ಮಾಲಾ 01ಮತ್ತು 02 ಆರಂಭಿಸಿದ್ದಾರೆ ಅದೇ ರೀತಿಯಲ್ಲಿ ರಾಜ್ಯದ ಕರಾವಳಿಯ ಬಂದರ್‌ಗಳನ್ನುಜೋಡಿಸುವ ಸಾಗರಮಾಲಾ ಮತ್ತು ಪರ್ವತ್ ಮಾಲೆಯ ಮೂಲಕ ಜಿಲ್ಲೆಯ ಐತಿಹಾಸಿಕನಂದಿಬೆಟ್ಟ ಮತ್ತು ಅಂಜಾನಾದ್ರಿ ಬೆಟ್ಟಕ್ಕೆ ರೋಪ್‌ವೇ ಸೌಲಭ್ಯ ಕಲ್ಪಿಸಲು ಯೋಜನೆಯನ್ನು ರೂಪಿಸಲಾಗಿದೆ ಅದನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಶಂಕರ್‌ನಾಗ್ ಕಂಡ ಕನಸು ನನಸು: ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮಕ್ಕೆ ರೋಪವೇ ನಿರ್ಮಿಸಲು ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರಿಗೆ ನಟ ಶಂಕರ್‌ನಾಗ್ ಅವರು ಪ್ರಸ್ತಾವನೆಯನ್ನು ಸಲ್ಲಿಸಿದರು ಆದರೇ ಅದು ಅನುಷ್ಠಾನವಾಗಿರಲಿಲ್ಲ ಆದರೇ ಅವರ ಕನಸುನನಸು ಮಾಡಲು 90 ಕೋಟಿ ರೂ.ಗಳ ಯೋಜನೆಯನ್ನು ಸಿದ್ಧಪಡಿಸಲಾಗಿದೆ ನನ್ನ ಮಿತ್ರ ಯೋಜನೆಯನ್ನು ನನಸು ಮಾಡುತ್ತಿರುವುದು ಸಂತಸ ತಂದಿದೆ ಎಂದರು.ಅ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.