Chikkaballapura ಕಾಂಗ್ರೆಸ್ ಟಿಕೆಟ್‌ಗೆ ದೆಹಲಿಯಲ್ಲಿ ಶಿವಶಂಕರರೆಡ್ಡಿ ಕಸರತ್ತು
Team Udayavani, Mar 10, 2024, 6:20 AM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿ ಆಗಿರುವ ಮಾಜಿ ಸಚಿವ ಎನ್.ಶಿವಶಂಕರರೆಡ್ಡಿ ಟಿಕೆಟ್‌ಗಾಗಿ ದೆಹಲಿ ಕದ ತಟ್ಟಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಶಿವಶಂಕರರೆಡ್ಡಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್‌ಗೆ ಪಟ್ಟು ಹಿಡಿದಿದ್ದು, ಒಂದು ವೇಳೆ ಟಿಕೆಟ್ ಕೈ ತಪ್ಪಿದರೆ ಬಿಜೆಪಿ ಸೇರುವುದಾಗಿಯೂ ಪರೋಕ್ಷವಾಗಿ ಪಕ್ಷದ ನಾಯಕರಿಗೆ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿವಶಂಕರರೆಡ್ಡಿ ಲೋಕಸಭಾ ಚುನಾವಣೆಗೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಾಕಷ್ಟು ಉತ್ಸುಕತೆ ತೋರಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.
ರಕ್ಷಾ ರಾಮಯ್ಯಗೆ ಚಿಕ್ಕಬಳ್ಳಾಪುರ ಟಿಕೆಟ್ ಖಾತ್ರಿ ಎಂಬ ಸುದ್ದಿ ಒಂದು ಕಡೆ ಹರಿದಾಡುತ್ತಿದೆ. ಮತ್ತೊಂದು ಕಡೆ ಮೊದಲ ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಹೆಸರು ಪ್ರಕಟಗೊಳ್ಳದೇ ಇರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು ಇದರ ಮಧ್ಯೆ ಶಿವಶಂಕರರೆಡ್ಡಿ ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ಸುರ್ಜೇವಾಲ ಹಾಗೂ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಖರ್ಗೆರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ಅವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೇಶವರೆಡ್ಡಿ ಕೂಡ ಸಾಥ್ ಕೊಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
Gudibande: ಹೆಸರಿಗಷ್ಟೇ ಬಸ್ ನಿಲ್ದಾಣ; ಬಸ್‌ಗಳೇ ಬರಲ್ಲ
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.