ಸರ್ಕಾರಿ ಜಮೀನಿನಲ್ಲಿ ಸೋಲಾರ್ ಪ್ಲಾಂಟ್
Team Udayavani, Dec 2, 2019, 3:55 PM IST
ಗುಡಿಬಂಡೆ: ಸರ್ಕಾರ ಜಾನುವಾರುಗಳ ಮೇವಿಗಾಗಿ ಕಾಯ್ದಿರಿಸಿದ 60 ಎಕರೆ ದನಗಳ ಮುಪ್ಪತ್ತು ಜಮೀನನ್ನು ಖಾಸಗಿ ಕಂಪನಿಯವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಸೋಲಾರ್ ಪ್ಲಾಂಟ್ ನಿರ್ಮಾಣ ಮಾಡುತ್ತಿದ್ದರೂ ಸಹ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಜಮೀನನ್ನು ಉಳಿಸುವಲ್ಲಿ ವಿಫಲರಾಗಿದ್ದಾರೆ ಎಂದು ತಾಲೂಕಿನ ರೈತರುಆರೋಪಿಸಿ ಎಸಿಬಿ, ಲೋಕಾಯುಕ್ತ ಹಾಗೂ ಭೂ ಕಬಳಿಕೆ ಆಯೋಗಗಳಿಗೆ ದೂರು ನೀಡಲು ಮುಂದಾಗಿದ್ದಾರೆ.
ಹೌದು, ಇಂತಹದೊಂದು ಘಟನೆ ಗುಡಿಬಂಡೆ ತಾಲೂಕಿನ ಸೋಮೇಶ್ವರ ಗ್ರಾಮದ ಸುತ್ತಮುತ್ತಲಿನ ಗ್ರಾಮದಲ್ಲಿ ಜಾನುವಾರುಗಳಿಗೆ ಕಾಯ್ದಿರಿಸಿದ ಜಮೀನನ್ನು ಸಮತಟ್ಟು ಖಾಸಗಿ ಕಂಪನಿಯವರು ಕಾಮಗಾರಿ ಪ್ರಾರಂಭಿಸಿದ್ದಾರೆ. ಆದರೆ ರೈತರು ತಹಶೀಲ್ದಾರ್‌ಗೆ ಅನೇಕ ದೂರು ನೀಡಿದರೂ ಜಮೀನು ಉಳಿಸಲು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.
ತಹಶೀಲ್ದಾರ್ ತೀವ್ರ ನಿರ್ಲಕ್ಷ್ಯ: ಸೋಮೇಶ್ವರ ಗ್ರಾಮದ ಸರ್ವೆ ನಂ.31 ರಲ್ಲಿ 54 ಎಕರೆ ಮತ್ತು ಸರ್ವೆ ನಂಬರ್ 31 ರಲ್ಲಿ 5 ಎಕರೆ ಜಮೀನು ಸರ್ಕಾರ ಜಾನುವಾರಗಳ ಮೇವಿಗಾಗಿ ದನಗಳ ಮುಪ್ಪತ್ತು ಎಂದುಕಾಯ್ದಿರಿಸಿದೆ. ಈ ಜಮೀನಿನಲ್ಲಿ ಸೋಮೇಶ್ವರಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರು ದನಕರುಗಳನ್ನು ಮೇಯಿಸುತ್ತಿದ್ದರು.ಆದರೆ ಈಗ ಏಕಾಏಕಿ ಖಾಸಗಿ ಕಂಪನಿಯವರು ಸೋಲಾರ್ ಪ್ಲಾಂಟ್ ನಿರ್ಮಾಣ ಮಾಡುತ್ತಿದ್ದಾರೆ. ಈ ಬಗ್ಗೆ ನಾವುಅನೇಕ ಬಾರಿ ತಹಶೀಲ್ದಾರ್‌ಗೆ ಲಿಖೀತವಾಗಿದೂರು ನೀಡಿದರೂ ಸಹ ತಹಶೀಲ್ದಾರ್ ಈಬಗ್ಗೆ ಬಗ್ಗೆ ಗಮನಹರಿಸುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.
ಡೀಸಿ ಗಮನಕ್ಕೂ ತಂದರೂ ಪ್ರಯೋಜನೆ ಆಗಲಿಲ್ಲ: ಸುಮಾರು ಒಂದು ವರ್ಷದಿಂದ ಸರ್ಕಾರಿ ಜಮೀನಿನಲ್ಲಿ ಪ್ರಭಾವಿ ರಾಜಕೀಯ ವ್ಯಕ್ತಿಗಳ ಸಂಬಂಧಿಕರು ಸೋಲಾರ್ ಪ್ಲಾಂಟ್ ನಿರ್ಮಾಣ ಮಾಡುತ್ತಿದ್ದಾರೆ. ಈ ಜಮೀನನ್ನು ಉಳಿಸಿ ನಮಗೆ ಜಾನುವಾರುಗಳ ಮೇವಿಗಾಗಿ ಕಾಯ್ದಿರಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಮತ್ತು ಉಪ ವಿಭಾಗಾಧಿಕಾರಿಗಳಿಗೆ ಅರ್ಜಿ ನೀಡಿದರೂ ಸಹ ಪ್ರಯೋಜನೆ ಆಗುತ್ತಿಲ್ಲ. ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ವಿರುದ್ದ ಎಸಿಬಿಗೆ ದೂರು ನೀಡುತ್ತೇವೆ. ಅಲ್ಲೂ ನ್ಯಾಯ ಸಿಗದಿದ್ದರೆ ನ್ಯಾಯಾಲಯದ ಮೆಟ್ಟಿಲೇರುತ್ತೇವೆ ಎಂದು ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಜಮೀನು ನೆಲಸಮ: ಈ ಹಿಂದೆ ಸೋಮೇಶ್ವರ ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರುಸರ್ಕಾರಿ ಜಮೀನಿನಲ್ಲಿ ಉಳಿಮೆ ಮಾಡಿ ಕೊಳ್ಳುತ್ತಿದ್ದು, ಉಳುಮೆ ಮಾಡಿದ ಜಮೀನಿಗಾಗಿಅರ್ಜಿ ಸಲ್ಲಿಸಿ, ಜಮೀನನ್ನು ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದಾರೆ ಹಾಗೂಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾರೆ.ಈಗ ಏಕಾಏಕಿ ಖಾಸಗಿ ವ್ಯಕ್ತಿಗಳು ಬಂದು ನನ್ನ ಜಮೀನನ್ನು ನೆಲಸಮ ಮಾಡಿ ಸೋಲಾರ್ ಪ್ಲಾಂಟ್ ಹಾಕಲು ಮುಂದಾಗುತ್ತಿದ್ದಾರೆ. ಇದು ನಮ್ಮ ಜಮೀನು ಇದರ ಎಲ್ಲಾ ದಾಖಲೆಗಳು ಇವೆ ಎಂದು ತಿಳಿಸಿದರೆ ಇದುನಿಮ್ಮದಲ್ಲ, ಏನ್ ಮಾಡ್ತಿರೋ ಮಾಡ್ಕೊ ಹೋಗಿ ಎಂದು ಹೆದರಿಸುತ್ತಿದ್ದಾರೆ ಎಂದುರೈತರು ತಮ್ಮ ನೋವನ್ನು ಅಧಿಕಾರಿಗಳ ಮುಂದೆ ವ್ಯಕ್ತಪಡಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
-ವೆಂಕಟೇಶ್ ಎನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.