ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಕಲಶ ಪ್ರತಿಷ್ಠಾಪನೆ
Team Udayavani, Feb 20, 2021, 12:59 PM IST
ಶಿಡ್ಲಘಟ್ಟ: ನಗರದ ಹೊರ ವಲಯದ ನಲ್ಲಿಮರದಹಳ್ಳಿಯ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ ವಿನೂತನವಾಗಿ ನಿರ್ಮಿಸಿದ್ದು, ಕಳೆದ ಮೂರು ದಿನಗಳಿಂದ ದೇವಾಲಯದಲ್ಲಿ ಲಕ್ಷ್ಮೀ ನರಸಿಂಹಸ್ವಾಮಿ ಸ್ಥಿರಬಿಂಬ, ಶಿವಲಿಂಗ, ನಾಗರಾಜ, ಧ್ವಜಸ್ಥಂಬ, ವಿಮಾನಗೋಪುರ ಕಲಶ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಮಹೋತ್ಸವ ನೆರವೇರಿಸಲಾಯಿತು.
ಮುಜರಾಯಿ ಇಲಾಖೆಗೆ ಸೇರುವ ಈ ದೇವಾಲಯವನ್ನು ಶ್ರೀಲಕ್ಷ್ಮೀ ನರಸಿಂಹಸ್ವಾಮಿ ಸೇವಾ ಟ್ರಸ್ಟ್ ಸದಸ್ಯರು ಒಗ್ಗೂಡಿ ಇದೀಗ ಹಳೆಯ ವಿಗ್ರಹವನ್ನು ಹಾಗೆಯೇ ಇದ್ದ ಸ್ಥಳದಲ್ಲಿಯೇ ಉಳಿಸಿಕೊಂಡು ದೇವಾಲಯ ನಿರ್ಮಿಸುವಲ್ಲಿ ಸಫಲರಾಗಿದ್ದಾರೆ.
ಶಿವಾರಪಟ್ಟಣದ ಶಿಲ್ಪಿಗಳು ಕೆತ್ತಿರುವ ಆರು ಅಡಿ ಎತ್ತರ ದ ವಿಗ್ರಹ ಮತ್ತು ಧ್ವಜ ಸ್ತಂಭ ದೇವಾಲಯದ ಮುಕುಟಪ್ರಾಯವಾಗಿದೆ. ದೇವಾಲಯದ ಮೇಲೆದಶಾವತಾರದ ಶಿಲ್ಪಗಳು, ಗೋಪುರದ ಬಳಿ ಆಂಜನೆಯ, ಗರುಡ ಮತ್ತು ಲಕ್ಷ್ಮೀ ನರಸಿಂಹಸ್ವಾಮಿ, ದೇವಸ್ಥಾನದ ಒಳಗೆ ಜಯ ವಿಜಯರ ಮೂರ್ತಿಗಳು, ಧ್ವಾರದಲ್ಲಿನ ಸಿಂಹಗಳು, ಕಂಬಗಳ ಮೇಲೆ ಮಂಗಳವಾದ್ಯಗಳನ್ನು ನುಡಿಸುವವರ ಶಿಲ್ಪಗಳಿಗೆ ಬಣ್ಣ ಬಳಿಯುವ ಮೂಲಕ ಆಕರ್ಷಕಗೊಳಿಸಲಾಗಿದೆ. ಕಲ್ಲಿನ ಮುಖ್ಯಧ್ವಾರದ ಚೌಕಟ್ಟು, ಗರ್ಭಗುಡಿ, ಧ್ವಜಸ್ಥಂಭವನ್ನು ಕಾರ್ಕಳದ ಶಿಲ್ಪಿಗಳು ಕೆತ್ತಿದ್ದರೆ, ಗೋಪುರದ ಶಿಲ್ಪಗಳನ್ನು ಸಿಮೆಂಟಿನಲ್ಲಿ ನಾಗಪಟ್ನಂ ಶಿಲ್ಪಿಗಳು ರೂಪಿಸಿರುವರು.
ಶ್ರದ್ಧಾಭಕ್ತಿಯಿಂದ ಶಿಲಾ ಪ್ರತಿಷ್ಠಾಪನೆ :
ಶಿಡ್ಲಘಟ್ಟ: ತಾಲೂಕಿನ
ವರದನಾಯಕನಹಳ್ಳಿಯ ಪುರಾತನ ದೇವಿಯರಾದ ಪಟಾಲಮ್ಮದೇವಿ ಮತ್ತು ವೀರಸೊಣ್ಣಮ್ಮದೇವಿಯರ ಶಿಲಾ ಪ್ರತಿಷ್ಠಾಪನೆ ಹಾಗೂ ನೂತನ ದೇವಾಲಯ ಜೀರ್ಣೋದ್ಧಾರದ ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು.
ವರದನಾಯಕನಹಳ್ಳಿ ಎಂಬ ಹೆಸರು ವರದನಾಯಕ ಎಂಬ ಪಾಳೇಗಾರಸ್ಥಾಪಿಸಿದ್ದರಿಂದ ಬಂದಿದೆ ಎಂದು ಹಿರಿಯರು ಹೇಳುತ್ತಾರೆ. ಆತನ ಕನಸಿನಲ್ಲಿ ಬಂದ ಗ್ರಾಮದೇವತೆಯರು, ಗ್ರಾಮದಲ್ಲಿ ತಮಗಿರುವ ಗುಡಿ ಸಣ್ಣದು, ದೊಡ್ಡದಾಗಿ ಕಟ್ಟಿಸುವಂತೆ ಆಜ್ಞಾಪಿಸಿದಾಗ ಆತ ಈಗಿರುವ ಸ್ಥಳದಲ್ಲಿ ದೇವಿಯರಿಗೆ ಗುಡಿ ಕಟ್ಟಿಸಿದನಂತೆ. ಭೂಮಿ ಆಗಸ ಒಂದಾಗುವಂತೆ ಕಂಡ ದೇವಿಯರ ದರ್ಶನದಿಂದ ಆತ ಅವರದಾಸಾನುದಾಸನಾದ ಎಂಬುದು ಪ್ರತೀತಿ ಇದೆ. ಈ ಶಕ್ತಿದೇವತೆಗಳ ರಥೋತ್ಸವವನ್ನು ಗ್ರಾಮಸ್ಥರು ಒಗ್ಗೂಡಿ ನೆಂಟರನ್ನೆಲ್ಲಾ ಕರೆಸಿ ಆಚರಿಸುತ್ತಾರೆ. ಅನ್ನಸಂತರ್ಪಣೆ, ಪಾನಕ ಸೇವೆ, ದೀಪೋತ್ಸವ, ಮೆರವಣಿಗೆ, ಕಲಾಪ್ರದರ್ಶನ ಮುಂತಾದವುಗಳೊಂದಿಗೆ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸುತ್ತಾರೆ. ಟ್ರಸ್ಟ್ ವತಿಯಿಂದ ಹಳೆಯ ದೇವಸ್ಥಾನಜೀರ್ಣೋದ್ಧಾರಗೊಳಿಸಿ ದೇವರ ವಿಗ್ರಹ ಹಾಗೂ ವಿನೂತನ ರೀತಿಯಲ್ಲಿ ದೇವಸ್ಥಾನ ಕಟ್ಟಲು ಯೋಜನೆ ರೂಪಿಸಿದ್ದು, ಅದರ ಪ್ರಯುಕ್ತ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.