ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮರೆಡ್ಡಿ ಕೆಂಡ
Team Udayavani, Jul 4, 2019, 3:00 AM IST
ಬಾಗೇಪಲ್ಲಿ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಸಮಯವಿಲ್ಲದಿರುವಾಗ ರೈತರ, ಕೃಷಿ ಕಾರ್ಮಿಕರ ಸಮಸ್ಯೆ ಶಮನ ಮಾಡಲು ಸಾಧ್ಯವೇ ಎಂದು ಮಾಜಿ ಶಾಸಕ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷ ಜಿ.ವಿ.ಶ್ರೀರಾಮರೆಡ್ಡಿ ಪ್ರಶ್ನಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕು ಶಾಖೆ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲೂಕು ಕಚೇರಿ ಮುಂದೆ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಖ ಮಾಡಿಲ್ಲ: ಮಾಜಿ ಸಂಸದ ವೀರಪ್ಪಮೊಯ್ಲಿ 2-3ತಿಂಗಳಿಗೊಮ್ಮೆಯಾದರೂ ತಾಲೂಕಿಗೆ ಭೇಟಿ ನೀಡಿ ಸುಳ್ಳು ಹೇಳಿ ಹೋಗುತ್ತಿದ್ದರು. ಆದರೆ, ಇತ್ತೀಚೆಗೆ ಲೋಕಸಭೆಗೆ ಆಯ್ಕೆಯಾಗಿರುವ ಸಂಸದರು ತಾಲೂಕಿನ ಕಡೆ ಮುಖ ಮಾಡುವುದಿಲ್ಲ. ಇನ್ನು 5ವರ್ಷ ಜನರು ನರಕಯಾತನೆ ಅನುಭವಿಸಬೇಕಾಗಿದೆ ಎಂದು ದೂರಿದರು.
ರಾಜ್ಯದಲ್ಲಿ ಆಡಳಿತ ಯಂತ್ರಾಂಗ ಸ್ಥಗಿತಗೊಂಡಿದೆ. ಶಾಸಕರು ನಾಮಫಲಕ ಹಾಕಿಕೊಂಡು ಮಾರಾಟಕ್ಕೆ ಸಿದ್ಧವಾಗಿ ನಿಂತಿದ್ದಾರೆ. ಮುಳಬಾಗಿಲು ಶಾಸಕರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಮಂತ್ರಿ ಸ್ಥಾನ ನೀಡಿರುವುದೇ ಇದಕ್ಕೆ ಸಾಕ್ಷಿ ಎಂದು ಹೇಳಿದರು.
ಹಳ್ಳಿಗಳಿಗೆ ಹೋಗಿ ಗ್ರಾಮ ವ್ಯಾಸ್ತವ್ಯ ಮಾಡಿ ಪ್ರಚಾರಗಿಟ್ಟಿಸಿಕೊಂಡರೆ ಹಳ್ಳಿಗಳ ಪರಿಸ್ಥಿತಿ ಸುಧಾರಣೆಯಾಗುವುದಿಲ್ಲ. ಮುಖ್ಯ ಮಂತ್ರಿ ಕುಮಾರಸ್ವಾಮಿ ಮಾತಿಗೆ ಮುಂಚೆ ತಾನು ರೈತನ ಮಗ ಎನ್ನುತ್ತಾರೆ. ಆದರೆ ರೈತರ ಜೀವಂತ ಸಮಸ್ಯೆ ಪರಿಹಾರ ಮಾಡಲು ವಿಫಲರಾಗಿದ್ದಾರೆಂದರು.
ಕ್ರಮವಿಲ್ಲ: 2 ವರ್ಷಗಳಿಂದ ರೈತರು ಮಾಡಿಸಿದ್ದ ಬೆಳೆ ವಿಮೆ ಹಣ ಪಾವತಿ ಮಾಡಿಲ್ಲ. ತೀವ್ರ ಬರಗಾಲದಿಂದ ರೈತರು ನಗರ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಕೊರತೆಯಿಂದ ಸರ್ಕಾರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಆಗುತ್ತಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ. ಆದರೆ ಜನಪ್ರತಿನಿಧಿಗಳು ಖಾಲಿ ಇರುವ ಸಿಬ್ಬಂದಿ ತುಂಬಿಸಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದರು.
ಉದ್ಯೋಗ ಖಾತ್ರಿ ಇಲ್ಲ: ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತಾಂಡವವಾಡುತ್ತಿದೆ. ಯಾವುದೇ ಡ್ಯಾಂಗಳಲ್ಲಿ ನೀರು ಶೇಖರಣೆಯಾಗಿಲ್ಲ. ಆದರೆ, ಸರ್ಕಾರ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಹೇಳುತ್ತಿದೆ ಆದರೂ ಪರಿಣಾಮಕಾರಿಯಾಗಿ ಅನುಷ್ಠಾನವಾಗುತ್ತಿಲ್ಲ.
ಸರ್ಕಾರಿ ಮಾನದಂಡಗಳ ಪ್ರಕಾರ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕೂಲಿಗೆ 1ವಾರದೊಳಗೆ ಹಣ ಪಾವತಿಸಬೇಕು. ಅರ್ಜಿ ಸಲ್ಲಿಸಿದ ಕೂಲಿಗೆ 1ವಾರದೊಳಗೆ ಕೂಲಿ ಕೆಲಸ ನೀಡದಿದ್ದರೆ ಶೇ.50 ಹಣ ಪಾವತಿಸಬೇಕಾಗಿದೆ. ಇಂತಹ ಯಾವುದೇ ಮಾನದಂಡಗಳನ್ನು ಅಧಿಕಾರಿಗಳು ಪಾಲಿಸುತ್ತಿಲ್ಲ ಎಂದರು.
ಗಡುವು ವಿಸ್ತರಿಸಿ: ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಜೆಸಿಬಿ ಪಿ.ಮಂಜುನಾಥರೆಡ್ಡಿ, ಶೇ.90ರಷ್ಟು ಜನರು ಕೃಷಿ ನಂಬಿ ಜೀವನ ಸಾಗಿಸುತ್ತಿದ್ದಾರೆ. ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ರೈತರಿಗೆ ಸ್ಪಂದಿಸುತ್ತಿಲ್ಲ. ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಮೂಲಕ ರೈತರಿಗೆ ವಿಶೇಷ ಪ್ಯಾಕೇಜ್ ನೀಡಬೇಕು, ಪಿ.ಎಂ.ಕಿಸಾನ್ ಯೋಜನೆ ಗಡುವು ವಿಸ್ತರಿಸಬೇಕೆಂದರು.
ಇದಕ್ಕೂ ಮೊದಲು ಡಾ.ಎಚ್.ಎನ್.ವೃತ್ತದಿಂದ ಮೆರವಣಿಗೆಯಲ್ಲಿ ಬಂದು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ತಹಶೀಲ್ದಾರ್ ನಾಗರಾಜ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ತಾಲೂಕು ಪ್ರಾಂತ ರೈತ ಸಂಘದ ಅಧ್ಯಕ್ಷ ಎ.ಎನ್.ಶ್ರೀರಾಮಪ್ಪ, ಸಿಪಿಎಂ ಕಾರ್ಯದರ್ಶಿ ಚನ್ನರಾಯಪ್ಪ, ನಗರ ಘಟಕದ ಅಧ್ಯಕ್ಷ ಅಶ್ವತ್ಥಪ್ಪ, ಡಿವೈಎಫ್‌ಐ ಅಧ್ಯಕ್ಷ ಬಿ.ಎಂ.ಹೇಮಚಂದ್ರ, ಸಿಐಟಿಯು ಅಧ್ಯಕ್ಷ ಬಿ.ಆಂಜನೇಯರೆಡ್ಡಿ, ಕಾರ್ಯದರ್ಶಿ ಜಿ.ಮುಸ್ತಾಫ್, ಮುಖಂಡರಾದ ಎ.ರಮೇಶ್, ಫಾತೀಮಾ , ಜೈನಾಬೀ, ಮಂಜುಳಾ, ಗಂಗುಲಮ್ಮ, ಪ್ರಮೀಳಾ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.