ಅಕ್ರಮ ಗಣಿಗಾರಿಕೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ: ಎಡಿಜಿಪಿ ಪ್ರತಾಪ್ ರೆಡ್ಡಿ
Team Udayavani, Feb 23, 2021, 12:12 PM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುವವರ ವಿರುದ್ಧ ಕಠಿಣ ಕಾನೂನು ರೀತಿಯ ಕ್ರಮ ಜರಗಿಸಲಾಗುವುದು ಎಂದು ಎಡಿಜಿಪಿ ಪ್ರತಾಪ್ ರೆಡ್ಡಿ ತಿಳಿಸಿದರು.
ಚಿಕ್ಬಳ್ಳಾಪುರ ಜಿಲ್ಲೆಯಲ್ಲಿ ನಡೆದ ದುರಂತ ಸ್ಥಳಕ್ಕೆ ಭೇಟಿ ಮಾಡಿ ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಈಗಾಗಲೇ ಐದು ಜನರ ಮೃತದೇಹಗಳು ಪತ್ತೆಯಾಗಿದ್ದು ಮತ್ತೊಬ್ಬ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ ಎಂದರು.
ಘಟನೆಯಲ್ಲಿ ಗಾಯಗೊಂಡಿರುವ ಚಾಲಕನನ್ನು ವಿಚಾರಣೆಗೆತ್ತಿಕೊಂಡಿದೆ. ಕಳೆದ 7ರಂದು ಪೊಲೀಸ್ ಇಲಾಖೆಯಿಂದ ದಾಳಿ ನಡೆಸಲಾಗಿದೆ. ಅಧಿಕೃತವಾಗಿ ಕ್ವಾರಿ ನಡೆಸುತ್ತಿದ್ದರೂ ಸಹ ಸ್ಫೋಟಕ ವಸ್ತುಗಳ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಮಾಲೀಕರ ವಿರುದ್ಧ ದೂರು ದಾಖಲಿಸಲಾಗಿದ್ದು ಪ್ರಸ್ತುತ ಅವರು ನಾಪತ್ತೆಯಾಗಿದ್ದಾರೆ ಎಂದರು.
ಇದನ್ನೂ ಓದಿ:ರೈತರ ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರ : ಜಮ್ಮು ಮೂಲದ ಇಬ್ಬರು ಆರೋಪಿಗಳ ಬಂಧನ..!
ಸತತವಾಗಿ ನಡೆಯುತ್ತಿರುವ ಪೊಲೀಸರ ದಾಳಿಯ ಭೀತಿಯಿಂದ ಅಕ್ರಮವಾಗಿ ಶೇಖರಿಸಿದ್ದ ಜಿಲೆಟಿನ್ ಸಾಗಿಸುವ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದ್ದು ಇದರ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಲು ಐಜಿಪಿ ಗಳ ಮೇಲುಸ್ತುವಾರಿಯಲ್ಲಿ ವಿಶೇಷ ತಂಡಗಳನ್ನು ರಚಿಸಲು ಕ್ರಮಕೈಗೊಳ್ಳಲಾಗಿದೆ ಎಂದರು
ಕಳೆದ ತಿಂಗಳು ಶಿವಮೊಗ್ಗ ಜಿಲ್ಲೆಯಲ್ಲಿ ದುರಂತ ಸಂಭವಿಸಿದ ಬಳಿಕ ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಅಕ್ರಮವಾಗಿ ಗಣಿಗಾರಿಕೆ ನಡೆಸಿದ ವಿರುದ್ಧ ಕಠಿಣ ಕ್ರಮ ಜರುಗಿಸಲು ಸೂಚನೆ ನೀಡಿದ್ದಾರೆ. ಇದರನ್ವಯ ಈಗಾಗಲೇ ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಗಣಿಗಾರಿಕೆ ನಡೆಸಿದವರನ್ನು ಪತ್ತೆಹಚ್ಚಿ ಸೂಕ್ತ ರೀತಿಯ ಕಾನೂನು ರೀತಿಯ ಕ್ರಮ ಜರುಗಿಸಲಾಗಿದೆ ಎಂದರು.
ಇದನ್ನೂ ಓದಿ: ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಪೋಟ ಪ್ರಕರಣ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ
ಜಿಲ್ಲೆಯಲ್ಲಿ ಕ್ವಾರಿ ಮತ್ತು ಗಣಿಗಾರಿಕೆಗೆ ನಡೆಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಪರವಾನಿಗೆಯನ್ನು ಪಡೆಯಬೇಕಾಗುತ್ತದೆ. ಕಲ್ಲುಬಂಡೆಗಳನ್ನು ಸ್ಪೋಟಿಸಲು ಡೈರೆಕ್ಟರ್ ಜನರಲ್ ಮೈನಿಂಗ್ ಸೇಫ್ಟಿ ಇಲಾಖೆಯಿಂದ ಪರವಾನಿಗೆ ಪಡೆದವರು ಮಾತ್ರ ಸ್ಪೋಟಿಸಬೇಕು ಎಂದು ಕೇಂದ್ರ ಸರ್ಕಾರ ಸ್ಪಷ್ಟವಾದ ನೀತಿ ನಿಯಮ ರೂಪಿಸಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.