ಸುಧಾಕರ್‌ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ

ಸಚಿವ ಸ್ಥಾನ ಸಿಗದೇ ಅತೃಪ್ತರಾಗಿದ್ದ ಶಾಸಕರು • ಹಿಂದೆ ನೇಮಕವಾದರೂ ತಡೆ ಹಿಡಿದಿದ್ದ ಸಿಎಂ • ಅಧಿಕಾರ ಸ್ವೀಕಾರ

Team Udayavani, Jun 21, 2019, 12:58 PM IST

cb-tdy-2..

ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್‌ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ಚಿಕ್ಕಬಳ್ಳಾಪುರ: ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಮಂತ್ರಿಗಿರಿಯ ಮೇಲೆ ಕಣ್ಣಿಟ್ಟು ತೀವ್ರ ಹೋರಾಡಿ ಕೊನೆಗೂ ಸಚಿವ ಸ್ಥಾನ ಕೈತಪ್ಪಿದ್ದರಿಂದ ಮೈತ್ರಿ ಸರ್ಕಾರದ ಅದರಲೂ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರ ಹಾಕುತ್ತಿದ್ದ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್‌ಗೆ ಕೊನೆಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ.

ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ಗಾಂಧಿ ಈ ಹಿಂದೆ ರಾಜ್ಯದ ಹಲವು ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಅವಕಾಶ ಕಲ್ಪಿಸುವ‌ ಸಂದರ್ಭದಲ್ಲಿ ಶಾಸಕ ಸುಧಾಕರ್‌ರನ್ನು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸುವಂತೆ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಶಿಫಾರಸ್ಸು ಮಾಡಿದ್ದರು. ಆದರೆ ಕುಮಾರಸ್ವಾಮಿ, ಸುಧಾಕರ್‌ ನೇಮಕದ ಕಡತಕ್ಕೆ ಸಹಿ ಮಾಡದೇ ನಿವೃತ್ತ ಐಎಎಸ್‌ ಅಧಿಕಾರಿ ಜಯರಾಮ್‌ ಎಂಬುವರನ್ನು ಮಂಡಳಿ ಅಧ್ಯಕ್ಷರನ್ನಾಗಿ 3 ತಿಂಗಳ ಹಿಂದೆ ನೇಮಕ ಮಾಡಿದ್ದರು.

ಈಗ ಜಯರಾಮ್‌ರಿಂದ ರಾಜೀನಾಮೆ ಪಡೆದು ಸುಧಾಕರ್‌ರನ್ನು ಸಿಎಂ ಕುಮಾರಸ್ವಾಮಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಗುರುವಾರ ಆದೇಶ ಹೊರಡಿಸಿದ್ದಾರೆ.

ನೇಮಕ ತಿರಸ್ಕರಿಸಿದ್ದ ಸಿಎಂ: ಕ್ಷೇತ್ರದಲ್ಲಿ ಸತತ ಎರಡನೇ ಬಾರಿಗೆ ಶಾಸಕರಾಗಿರುವ ಸುಧಾಕರ್‌ಗೆ ಯುವಕರ ಕೋಟಾದಲ್ಲಿ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನಕ್ಕಾಗಿ ಪ್ರಬಲ ಪೈಪೋಟಿ ನಡೆಸಿದ್ದರು. ಆದರೆ ಕಾಂಗ್ರೆಸ್‌ ಪಾಳೆಯದಲ್ಲಿ ರೋಷನ್‌ ಬೇಗ್‌, ರಾಮಲಿಂಗಾರೆಡ್ಡಿ, ಹೆಚ್.ಕೆ.ಪಾಟೀಲ್ರಂತಹ ಘಟಾನುಘಟಿ ನಾಯಕರಿಗೆ ಮಂತ್ರಿಯೋಗ ಕೂಡಿ ಬಾರದ ಹಿನ್ನಲೆಯಲ್ಲಿ ಸುಧಾಕರ್‌ ಸಚಿವ ಸ್ಥಾನಕ್ಕಾಗಿ ನಡೆಸಿದ ಎಲ್ಲ ಯತ್ನಗಳು ವಿಫ‌ಲವಾದವು.

ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸುಧಾಕರ್‌ರನ್ನು ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಸಿಎಂ ಕುಮಾರಸ್ವಾಮಿಗೆ ನಾಲ್ಕು ತಿಂಗಳ ಹಿಂದೆಯೇ ಶಿಪಾರಸ್ಸು ಮಾಡಿದ್ದರೂ ಕೈಗೂಡಲಿಲ್ಲ.

ಅತೃಪ್ತರಲ್ಲಿ ಬಣದಲ್ಲಿದ್ದ ಸುಧಾಕರ್‌: ಮಂತ್ರಿ ಸ್ಥಾನವೂ ಸಿಗದೇ ಇತ್ತ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವು ಕೈ ತಪ್ಪಿದ್ದರಿಂದ ಮೈತ್ರಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದ ಶಾಸಕರು ಮಂತ್ರಿ ಸ್ಥಾನ ಸಿಗದಿದ್ದರಿಂದ ರಮೇಶ್‌ ಜಾರಕಿಹೊಳಿ ಬಣದಲ್ಲಿ ಗುರುತಿಸಿಕೊಂಡಿದ್ದರು. ಲೋಕಸಭಾ ಚುನಾವಣೆ ಫ‌ಲಿತಾಂಶ ಹೊರ ಬಿದ್ದ ಬಳಿಕ ಸುಧಾಕರ್‌ ಬಿಜೆಪಿಯ ಆಪರೇಷನ್‌ ಕಮಲದ ಪಟ್ಟಿಯಲ್ಲಿದ್ದರು. ಒಮ್ಮೆ ಮುಂಬೈಗೂ ಹೋಗಿ ಬಂದಿದ್ದರು.

ಆದರೆ ಇತ್ತೀಚೆಗೆ ವಿಸ್ತರಣೆಗೊಂಡ ಮೂರನೇ ಹಂತದ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಪಕ್ಷೇತರ ಶಾಸಕರಿಗೆ ಮಾತ್ರ ಅವಕಾಶ ನೀಡಿದ್ದಕ್ಕೆ ಪಕ್ಷದ ರಾಜ್ಯ ನಾಯಕರ ವಿರುದ್ಧ ಗರಂ ಆಗಿ ತಮ್ಮ ತೀರ್ಮಾನವನ್ನು ಕ್ಷೇತ್ರದ ಬೆಂಬಲಿಗರೊಂದಿಗೆ ಚರ್ಚಿಸಿ ನಿರ್ಧರಿಸುವುದಾಗಿ ಹೇಳಿದ್ದರು.

ಕಳೆದ ನಾಲ್ಕೈದು ದಿನಗಳಿಂದ ಶಾಸಕರ ತಂದೆ ಪಿ.ಎನ್‌.ಕೇಶವರೆಡ್ಡಿ ಮಗನ ಪರ ಸರಣಿ ಸಭೆಗಳನ್ನು ನಡೆಸಿ ಬಿಜೆಪಿ ಸೇರುವ ಬಗ್ಗೆ ಬೆಂಬಲಿಗರ ಅಭಿಪ್ರಾಯ ಪಡೆಯುತ್ತಿದ್ದರು. ಸುಧಾಕರ್‌ರ ಅತೃಪ್ತಿಯನ್ನು ತಣ್ಣಾಗಿಸಲು ಸಿಎಂ ಕುಮಾರಸ್ವಾಮಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ತಾವೇ ಮೂರು ತಿಂಗಳ ಹಿಂದೆ ನೇಮಕ ಮಾಡಿದ್ದ ಜಯರಾಮ್‌ರಿಂದ ರಾಜೀನಾಮೆ ಪಡೆದು ಈಗ ಸುಧಾಕರ್‌ರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಮೂರು ವರ್ಷ ಅಧಿಕಾರಾವಧಿ: ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಸುಧಾಕರ್‌ಗೆ ಅಧಿಕಾರ ಅವಧಿ ಕೇವಲ ಮೂರು ವರ್ಷ. ಈ ಕುರಿತು ಅವರೇ ಸ್ಪಷ್ಟಪಡಿಸಿದ್ದಾರೆ. ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ನನ್ನನ್ನು ಮೂರು ವರ್ಷದ ಅಧಿಕಾರಾವಧಿಗೆ ನೇಮಕ ಮಾಡಲಾ ಗಿದ್ದು, ಈ ಅವಧಿಯಲ್ಲಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಯವೈಖರಿ ರಾಜ್ಯದ ಇತಿಹಾಸ ಪುಟದಲ್ಲಿ ದಾಖಲಾಗಬೇಕೆಂದರು.

ಹುದ್ದೆಗೆ ಅಪೇಕ್ಷೆ ಪಟ್ಟವನಲ್ಲ

ಚಿಕ್ಕಬಳ್ಳಾಪುರ: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷನಾಗಿ ಬರಬೇಕೆಂದು ಎಂದೂ ಕೂಡ ನಾನು ಅಪೇಕ್ಷೆ ಪಟ್ಟ ವನಲ್ಲ. ವೃತ್ತಿಯಲ್ಲಿ ವೈದ್ಯನಾಗಿರುವ ನನಗೆ ಈ ಹುದ್ದೆ ಸಿಕ್ಕಿರುವುದು ಸಂತಸ ತಂದಿದೆ. ಶಾಸಕನಿಗೆ ಸಿಕ್ಕಿರುವುದು ಇದೇ ಮೊದಲು. ಮಂಡಳಿಗೆ ಉತ್ತಮ ಹೆಸರು ತರುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಶಾಸಕ ಡಾ.ಕೆ.ಸುಧಾಕರ್‌ ತಿಳಿಸಿದರು.

ಕಚೇರಿಯಲ್ಲಿ ಅಧಿಕಾರ ಸ್ವೀಕಾರ ವೇಳೆ ಮಾತನಾಡಿದ ಅವರು, ಪ್ರತಿಯೊಬ್ಬರಿಗೆ ಇದೇ ದಾರಿಯಲ್ಲಿ ಹೋಗಬೇಕೆಂದು ನಿರ್ಧರಿಸಿರುವುದಿಲ್ಲ. ಹಾಗಾಂತ ಯಾವುದೇ ದಾರಿ ಮನುಷ್ಯನಿಗೆ ಶಾಶ್ವತವಾಗುವುದಿಲ್ಲ ಎಂದರು.

ನಮಗೆ ಗೊತ್ತಿಲ್ಲದಂತೆ ಅನೇಕ ದಾರಿಗಳು ಬದಲಾಗುತ್ತವೆ. ನಮ್ಮ ಪ್ರಯಾಣದ ತಾಣಗಳು ಬದಲಾಗುತ್ತವೆ. ಒಬ್ಬ ವೈದ್ಯನಾಗಿ, ಕಾರ್ಪೋರೆಟ್ ಸಂಸ್ಥೆಯಲ್ಲಿ 15 ಸಾವಿರ ಉದ್ಯೋಗಿಗಳು ಕೆಲಸ ಮಾಡಿದ ಸಂಸ್ಥೆಯಲ್ಲಿ ಉಪಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಅದೇ ರೀತಿ ವಿದೇಶದಲ್ಲಿ ಕೆಲಸ ಮಾಡಲಿಕ್ಕೆ ನನ್ನ ರಾಜಕೀಯ ಗುರುಗಳಾದ ಎಸ್‌.ಎಂ.ಕೃಷ್ಣ ರವರು ಶ್ರೀಲಂಕಾದ ವಾಣಿಜ್ಯ ಪ್ರತಿನಿಧಿಯಾಗಿ ನನ್ನನ್ನು ನೇಮಕ ಮಾಡಿದ್ದರು.

ನನ್ನ ಅವಧಿಯಲ್ಲಿ ರಾಜ್ಯದಲ್ಲಿ ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ರೂಪಿಸುತ್ತೇವೆ ಎಂದರು. ಭವಿಷ್ಯದ ದಿನಗಳಲ್ಲಿ ದೆಹೆಲಿಗೆ ಬಂದಿರುವ ಪರಿಸ್ಥಿತಿ ಬೆಂಗಳೂರಿಗೆ ಬರಬಾರದು. ಈ ಬಗ್ಗೆ ನಾವು ಈಗಲೇ ಎಚ್ಚೆತ್ತಿಕೊಳ್ಳಬೇಕಿದೆ ಎಂದರು. ಬೆಂಗಳೂರು ಜನ ಬಳಸಿ ಬಿಡುವ ತ್ಯಾಜ್ಯ ನೀರನ್ನು ಕೋಲಾರ, ಚಿಕ್ಕಬಳ್ಳಾಫ‌ುರ ಜಿಲ್ಲೆಗಳಿಗೆ ಹರಿಸುವ ಕೆಲಸ ಆಗುತ್ತಿದೆ. ಆದ್ದರಿಂದ ಬೆಂಗಳೂರಿನಲ್ಲಿ ಮೊದಲು ಪರಿಸರ ಮಾಲಿನ್ಯ ತಡೆಯಬೇಕಿದೆ. ಈ ನಿಟ್ಟಿನಲ್ಲಿ ಸದಸ್ಯರ, ಕಾರ್ಯದರ್ಶಿಗಳ ಸಂಪೂರ್ಣ ಸಹಕಾರ ಬೇಕಿದೆ ಎಂದರು.

ಜಯರಾಮ್‌ಗೆ ಒಳ್ಳೆಯದಾಗಲಿ: ಮೂರು ತಿಂಗಳಿಂದ ಜಯ ರಾಮ್‌ ಮಂಡಳಿ ಅಧ್ಯಕ್ಷರಾಗಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಹುದ್ದೆ ಸಿಗಲಿ ಎಂದು ಶಾಸಕರು ಹಾರೈಸಿದರು.

ಟಾಪ್ ನ್ಯೂಸ್

Vijay Hazare Trophy; Abhinav Manohar’s brilliant century; Karnataka won easily against Arunchal Pradesh

Vijay Hazare Trophy; ಅಭಿನವ್‌ ಮನೋಹರ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy; Abhinav Manohar’s brilliant century; Karnataka won easily against Arunchal Pradesh

Vijay Hazare Trophy; ಅಭಿನವ್‌ ಮನೋಹರ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

12-udupi

Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

8

Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ

7

Mulki: ಉಗುಳಿದರೆ ದಂಡ; ಹಾಕುವವರು ಯಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.