4 ಕಡೆ ಕಿದ್ವಾಯಿ ಸಂಸ್ಥೆ ಯ ಪ್ರಾದೇಶಿಕ ಕೇಂದ್ರ ಆರಂಭ
Team Udayavani, Mar 7, 2021, 1:10 PM IST
ಚಿಕ್ಕಬಳ್ಳಾಪುರ: ಕ್ಯಾನ್ಸರ್ ರೋಗಿಗಳು ದೂರದ ಪ್ರದೇಶಗಳಿಂದ ಬೆಂಗಳೂರಿಗೆ ಬಂದು ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಕಷ್ಟ ತಪ್ಪಿಸಲು ರಾಜ್ಯದ ನಾಲ್ಕು ಭಾಗಗಳಲ್ಲಿ ಆಸ್ಪತ್ರೆಯ ಪ್ರಾದೇಶಿಕ ಕೇಂದ್ರಗಳನ್ನು ಆರಂಭಿಸುವ ಪ್ರಯತ್ನ ನಡೆದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ರೆಡ್‌ಕ್ರಾಸ್ ಹಾಗೂ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಸಹಯೋಗದಲ್ಲಿ ಚಿಕ್ಕಬಳ್ಳಾಪುರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ನಡೆದ ಕ್ಯಾನ್ಸರ್ ತಪಾಸಣಾ ಹಾಗೂ ಅರಿವು ಶಿಬಿರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಿದ್ವಾಯಿ ಸಂಸ್ಥೆಯಲ್ಲಿ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸಿಎಂ ಬಳಿ ಪ್ರಸ್ತಾವನೆ: ರಾಜ್ಯದ ದೂರದ ಪ್ರದೇಶ ಗಳಿಂದಲೂ ಇಲ್ಲಿಗೆ ರೋಗಿಗಳು ಹೆಚ್ಚಿನ ಸಂಖ್ಯೆ ಯಲ್ಲಿ ಬರುತ್ತಿದ್ದಾರೆ. ದೂರ ಪ್ರಯಾಣ ಮಾಡುವು ದನ್ನು ತಪ್ಪಿಸಲು ನಾಲ್ಕು ಭಾಗಗಳಲ್ಲಿ ಸಂಸ್ಥೆಯ ಕೇಂದ್ರಗಳನ್ನು ಆರಂಭಿಸಲು ಚಿಂತಿಸಲಾಗಿದೆ ಎಂದರು.
ಗುಣಮುಖ ಸಾಧ್ಯ: ಕ್ಯಾನ್ಸರ್ ಎಂದರೆ ಸಾವೇ ಗತಿ ಎಂಬ ತಪ್ಪ ಆಲೋಚನೆ ಇದೆ. ಈಗಿನ ಆಧುನಿಕ ಚಿಕಿತ್ಸಾ ಪದ್ಧತಿಯನ್ನು ಬಳಸಿಕೊಂಡು ಕ್ಯಾನ್ಸರ್‌ಅನ್ನು ಯಶಸ್ವಿಯಾಗಿ ಗುಣಪಡಿಸಬಹುದು. ಆದರೆ ಹೀಗೆ ಚಿಕಿತ್ಸೆ ನೀಡಲು ಆರಂಭಿಕ ಹಂತದಲ್ಲೇ ರೋಗ ಪತ್ತೆ ಮಾಡಬೇಕು.
ತಪಾಸಣೆ ಮಾಡಿಸಿ: ಮಹಿಳೆಯರು ಹೆಚ್ಚಾಗಿ ಸ್ತನ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ. ವರ್ಷಕ್ಕೊಮ್ಮೆ ಕಡ್ಡಾ ಯವಾಗಿ ಕ್ಯಾನ್ಸರ್ ತಪಾಸಣೆ ಮಾಡಿಸಬೇಕು. ಉಚಿತ ವೈದ್ಯಕೀಯ ತಪಾಸಣಾ ಸೌಲಭ್ಯ ಇರು ವುದರಿಂದ ಇದಕ್ಕಾಗಿ ಹಣ ಖರ್ಚು ಮಾಡಬೇಕಿಲ್ಲ. ಮುಂಚಿತವಾಗಿಯೇ ತಪಾಸಣೆ ಮಾಡಿದರೆ ಆರಂಭಿಕ ಹಂತದಲ್ಲೇ ಕ್ಯಾನ್ಸರ್ ಪತ್ತೆ ಮಾಡಿ ಚಿಕಿತ್ಸೆ ನೀಡಬಹುದು. ಕುಟುಂಬಗಳಲ್ಲಿ ಯುವಜನರು ಹಿರಿಯರನ್ನು ಕರೆದುಕೊಂಡು ಹೋಗಿ ಕ್ಯಾನ್ಸರ್ ತಪಾಸಣೆ ಮಾಡಿಸಬೇಕು ಎಂದು ಹೇಳಿದರು.
ಕಿದ್ವಾಯಿಯಲ್ಲಿ ಮೂಲ ಸೌಕರ್ಯಗಳನ್ನು ಹೆಚ್ಚಿಸಲಾಗುತ್ತಿದೆ. ಈ ಆಸ್ಪತ್ರೆಗೆ ಬಡಜನರು ಹೆಚ್ಚಾಗಿ ಬರುತ್ತಿದ್ದು, ಯಾವುದೇ ಶೋಷಣೆಯಾಗದಂತೆ ಎಚ್ಚರ ವಹಿಸಬೇಕು. ಕೆಲ ಸಂದರ್ಭಗಳಲ್ಲಿ ಎಕ್ಸ್‌ರೇ, ಸ್ಕಾÂನಿಂಗ್‌ನಲ್ಲಿ ಹಣ ಪಡೆಯುವ ಸನ್ನಿವೇಶ ಇರು ತ್ತದೆ. ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಿ, ಆಸ್ಪತ್ರೆ ಹಾಗೂ ಸರ್ಕಾರದ ಮೇಲೆ ಜನರಿಗೆ ತಪ್ಪು ಭಾವನೆ ಮೂಡುವುದನ್ನು ತಪ್ಪಿಸಬೇಕು ಎಂದರು.
ಕಿದ್ವಾಯಿ ಆಸ್ಪತ್ರೆಯ ಆಡಳಿತ ಮಂಡಳಿ ಸದಸ್ಯ ಎಂ.ಜಯರಾಂ, ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕ ನ ಸಿಂಹಯ್ಯ (ಚಿನ್ನಿ), ಜಿಲ್ಲಾಧಿಕಾರಿ ಆರ್.ಲತಾ, ಎಸ್ಪಿ ಮಿಥುನ್‌ಕುಮಾರ್, ತಾಪಂ ಅಧ್ಯಕ್ಷ ರಾಮಸ್ವಾಮಿ, ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜು, ನಗರಸಭೆ ಅಧ್ಯಕ್ಷ ಡಿ.ಎಸ್.ಆನಂದ್‌ರೆಡ್ಡಿ(ಬಾಬು), ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ನಾಗಣ್ಣ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.