ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಸೂಕ್ತ ಪೋಲಿಸ್ ಬಂದೋಬಸ್ತ್: SP ಮಿಥುನ್ ಕುಮಾರ್
Team Udayavani, Dec 20, 2020, 9:57 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ, ಚಿಂತಾಮಣಿ ಹಾಗೂ ಬಾಗೇಪಲ್ಲಿ ತಾಲೂಕಿನಲ್ಲಿ ಡಿಸೆಂಬರ್ 22 ರಂದು ನಡೆಯಲಿರುವ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶಾಂತಿ ಹಾಗೂ ಕಾನೂನು ಸುವಸ್ಥೆ ಕಾಪಾಡಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ಜಿಲ್ಲೆಯಲ್ಲಿ ನಡೆಯುತ್ತಿರುವ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಒಟ್ಟು 748 ಮತಗಟ್ಟೆಗಳಿದ್ದು ಅದರಲ್ಲಿ 74 ಸೂಕ್ಷ್ಮ, 74 ಅತಿಸೂಕ್ಷ್ಮ ಹಾಗೂ 562 ಸಾಮಾನ್ಯ ಮತಗಟ್ಟೆಗಳಿದ್ದು ಅದಕ್ಕಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಚಿಂತಾಮಣಿ ತಾಲೂಕಿನಲ್ಲಿ 416,ಶಿಡ್ಲಘಟ್ಟ ತಾಲೂಕಿಗೆ 278 ಹಾಗೂ ಬಾಗೇಪಲ್ಲಿ ತಾಲೂಕಿಗೆ 314 ಪೋಲಿಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು(ಗೃಹರಕ್ಷಕ ಸಿಬ್ಬಂದಿ ಸಹಿತ) ನಿಯೋಜಿಸಲಾಗಿದೆ ಎಂದಿದ್ದಾರೆ.
ಚುನಾವಣೆಯ ಹಿನ್ನೆಲೆಯಲ್ಲಿ ನವೆಂಬರ್ 30 ರಿಂದ ಡಿಸೆಂಬರ್ 31ರ ಸಂಜೆ 5 ಗಂಟೆಯವರೆಗೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತರಕ ಘಟನೆಗಳು ಸಂಭವಿಸದಂತೆ ಅಗತ್ಯ ಕ್ರಮ ಕ್ರಮ ಕೈಗೊಳ್ಳುವ ಜೊತೆಗೆ ಮುಂಜಾಗೃತ ಕ್ರಮಕ್ಕಾಗಿ ಭದ್ರತಾ ಕಾಯ್ದೆಯಡಿಯಲ್ಲಿ ಒಟ್ಟು 702 ಪ್ರಕರಣಗಳನ್ನು ದಾಖಲಿಸಿ 653 ಜನ ಆಪಾದಿತರನ್ನು ಸ್ಥಳೀಯ ತಾಲೂಕು ದಂಡಾಧಿಕಾರಿಗಳ ಮುಂದೆ ಹಾಜರುಪಡಿಸಿ ಸದ್ವರ್ತನೆಯ ಬಗ್ಗೆ ಭದ್ರತಾ ಮುಚ್ಚಳಿಕೆಗಳನ್ನು ಪಡೆಯಲಾಗಿದೆ ಎಂದರು.
ಜಿಲ್ಲಾದ್ಯಂತ ಅಬಕಾರಿ ಕಾಯ್ದೆದಡೆಯಲ್ಲಿ 86 ಪ್ರಕರಣಗಳನ್ನು ದಾಖಲಿಸಿ 62 ಆರೋಪಿಗಳನ್ನು ಬಂಧಿಸಿ ಅವರಿಂದ 803 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದು ಡಿಸೆಂಬರ್ 22 ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಎಲ್ಲರು ಸಹಕಾರ ನೀಡಬೇಕೆಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಿಥುನ್‍ಕುಮಾರ್ ಮನವಿ ಮಾಡಿದ್ದಾರೆ.
ಬಾಗೇಪಲ್ಲಿ ತಾಲೂಕಿನಲ್ಲಿ 23 ಸೂಕ್ಷ್ಮ,35 ಅತಿ ಸೂಕ್ಷ್ಮ,173 ಸಾಮಾನ್ಯ ಸೇರಿದಂತೆ 231 ಮತಗಟ್ಟೆಗಳು, ಚಿಂತಾಮಣಿ ತಾಲೂಕಿನಲ್ಲಿ 31 ಸೂಕ್ಷ್ಮ,47 ಅತಿ ಸೂಕ್ಷ್ಮ,237 ಸಾಮಾನ್ಯ ಸೇರಿದಂತೆ 315 ಮತಗಟ್ಟೆ ಕೇಂದ್ರಗಳು ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ 20 ಸೂಕ್ಷ್ಮ,30 ಅತಿ ಸೂಕ್ಷ್ಮ ಹಾಗೂ 152 ಸಾಮಾನ್ಯ ಮತಗಟ್ಟೆಗಳು ಸಹಿತ 202 ಮತಗಟ್ಟೆ ಕೇಂದ್ರಗಳನ್ನು ತೆರೆಯಲಾಗಿದ್ದು ಪಾರದರ್ಶಕ ಹಾಗೂ ನ್ಯಾಯಸಮ್ಮುವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.