ದೆಹಲಿಯ ರೈತ ಹೋರಾಟಕ್ಕೆ ಬೆಂಬಲ; ರಾಷ್ಟ್ರೀಯ ಹೆದ್ದಾರಿ ತಡೆದು ಧರಣಿ ನಡೆಸಿದ ರೈತರು
Team Udayavani, Dec 2, 2020, 8:40 PM IST
ಚಿಕ್ಕಬಳ್ಳಾಪುರ: ದೆಹಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ(ಕೋಡಿಹಳ್ಳಿ ಚಂದ್ರಶೇಖರ್ ಬಣ) ಕಾರ್ಯಕರ್ತರು ನಗರದ ವಾಪಸಂದ್ರ ರಾಷ್ಟ್ರೀಯ ಹೆದ್ದಾರಿ 7 ತಡೆದು ಪ್ರತಿಭಟನೆ ನಡೆಸಿದರು.
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ(ಕೋಡಿಹಳ್ಳಿ ಚಂದ್ರಶೇಖರ್ ಬಣ) ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ 7 ತಡೆದು ಧರಣಿ ನಡೆಸಿದ ರೈತ ಸಂಘದ ಕಾರ್ಯಕರ್ತರು ಪ್ರಧಾನಮಂತ್ರಿ ನರೇಂದ್ರಮೋದಿ ಮುತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುಧ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ(ಕೋಡಿಹಳ್ಳಿ ಚಂದ್ರಶೇಖರ್ ಬಣ) ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ಮಾತನಾಡಿ ದೇಶದ 74 ವರ್ಷಗಳ ಇತಿಹಾಸದಲ್ಲಿ ದೊಡ್ಡಮೊಟ್ಟದಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡುವ ಮೂಲಕ ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತರ ವಿರೋಧಿ ಧೋರಣೆಯನ್ನು ಅನುಸರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
96 ಸಾವಿರ ಟ್ರಕ್‍ಗಳು ಮತ್ತು 1.25 ಕೋಟಿ ರೈತರು ಬೀದಿಗಿಳಿದು ಹೋರಾಟ ನಡೆಸಿದರು ಸಹ ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿಗಳು ರೈತರ ನ್ಯಾಯಯುತ ಬೇಡಿಕೆಯನ್ನು ಈಡೇರಿಸುವ ಬದಲಿಗೆ ರೈತರ ಹೋರಾಟವನ್ನು ಪೋಲಿಸರು ಮತ್ತು ಮಿಲಿಟರಿ ಮೂಲಕ ಹತ್ತಿಕ್ಕುವ ಕೆಲಸವನ್ನು ಮಾಡಿದ್ದಾರೆ ಅನ್ನದಾತ ರೈತ ಸಿಡಿದರೆ ಸರ್ಕಾರಗಳು ಧೂಳಿಪಟವಾಗಿರುವ ನಿದರ್ಶನಗಳು ನಡೆದಿವೆ ರೈತರ ಸಮಸ್ಯೆಗಳನ್ನು ಆಲಿಸುವ ಸೌಜನ್ಯವನ್ನು ಪ್ರಧಾನಮಂತ್ರಿ ತೋರಿಸಿಲ್ಲ ಅವರಿಗೆ ರೈತರ ಬಗ್ಗೆ ಕಾಳಜಿ ಇಲ್ಲದಂತಾಗಿದೆ ದೇಶದ ರಾಜಕೀಯ ಇತಿಹಾಸದಲ್ಲಿ ಇಂತಹ ಕೆಟ್ಟ ಸರ್ಕಾರ ನೋಡಿಲ್ಲವೆಂದು ಕಿಡಿಕಾರಿದರು.
ವಾಪಸಂದ್ರದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಧರಣಿ ನಡೆಸಿದ ರೈತ ಸಂಘ ಹಾಗೂ ಹಸಿರುಸೇನೆ(ಕೋಡಿಹಳ್ಳಿ ಚಂದ್ರಶೇಖರ್ ಬಣ) ಸುಮಾರು 80 ಮಂದಿ ರೈತರನ್ನು ಬಂಧಿಸಿ ಚಿಕ್ಕಬಳ್ಳಾಪುರ ನಗರ ಪೋಲಿಸ್‍ಠಾಣೆಯಲ್ಲಿ ಬಿಡುಗಡೆಗೊಳಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ರಾಮನಾಥ್,ಕಾರ್ಯದರ್ಶಿ ವೇಣುಗೋಪಾಲ್,ರಾಜ್ಯ ಸಂಚಾಲಕ ಲಕ್ಷ್ಮಣರೆಡ್ಡಿ,,ಮಹಿಳಾ ಘಟಕದ ರಾಜ್ಯ ಸಂಚಾಲಕಿ ಉಮಾ,ಶಿಡ್ಲಘಟ್ಟ ತಾಲೂಕು ಅಧ್ಯಕ್ಷ ತಾದೂರು ಮಂಜುನಾಥ್,ಉಪಾಧ್ಯಕ್ಷ ಮುನಿನಂಜಪ್ಪ,ಕಾರ್ಯದರ್ಶಿ ಬಸವರಾಜು,ಗುಡಿಹಳ್ಳಿ ಕೆಂಪಣ್ಣ,ಗುಡಿಬಂಡೆ ತಾಲೂಕು ಅಧ್ಯಕ್ಷ ಮುರಳಿ,ಬಾಗೇಪಲ್ಲಿ ತಾಲೂಕು ಅಧ್ಯಕ್ಷ ಬೈಯಪ್ಪರೆಡ್ಡಿ,ಗೌರಿಬಿದನೂರು ತಾಲೂಕು ಅಧ್ಯಕ್ಷ ಮಾಳಪ್ಪ,ಚೇಳೂರು ತಾಲೂಕು ಅಧ್ಯಕ್ಷ ಬೈಯಪ್ಪ,ಚಿಕ್ಕಬಳ್ಳಾಪುರ ತಾಲೂಕು ಕಾರ್ಯದರ್ಶಿ ದೇವರಾಜ್,ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.
ಡಿವೈಎಸ್ಪಿ ರವಿಶಂಕರ್ ಅವರ ನೇತೃತ್ವದಲ್ಲಿ ಸೂಕ್ತ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.