10 ನ್ಯಾಯಬೆಲೆ ಅಂಗಡಿ ಪರವಾನಿಗೆ ಅಮಾನತು

ಗೌರಿಬಿದನೂರು ತಾಲೂಕಿನ ಅಂಗಡಿಗಳು ಅಮಾನತು

Team Udayavani, Nov 8, 2020, 4:25 PM IST

10 ನ್ಯಾಯಬೆಲೆ ಅಂಗಡಿ ಪರವಾನಿಗೆ ಅಮಾನತು

ಸಾಂದರ್ಭಿಕ ಚಿತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು  ತಾಲೂಕಿನಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕರು ಮತ್ತು ಆಹಾರ ಇಲಾಖೆಯ ಅಧಿಕಾರಿಗಳ ನಡುವೆ ಸಂಘರ್ಷ ತಾರಕಕ್ಕೇರಿದ್ದು, ಸಗಟು ಗೋದಾಮಿನಿಂದ ಪಡಿತರ ಎತ್ತುವಳಿ ಮಾಡಲು ನಿರಾಕರಿಸಿದ 10 ನ್ಯಾಯಬೆಲೆ ಅಂಗಡಿ ಮಾಲೀಕರ ಪರವಾನಿಗೆ ಅಮಾನತುಗೊಳಿಸಿ ಜಿಲ್ಲಾ ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ ಉಪನಿರ್ದೇಶಕಿ ಪಿ.ಸವಿತಾ ಆದೇಶ ಹೊರಡಿಸಿದ್ದಾರೆ.

ತಾತ್ಕಾಲಿಕ ಪರ್ಯಾಯ ವ್ಯವಸ್ಥೆ: ಪ್ರಸ್ತುತ 10 ಸರ್ಕಾರಿ ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ನಾಗರಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಮೀಪದಲ್ಲಿ ಸಹಕಾರ ಸಂಘಗಳಿಂದ ನಡೆಯುತ್ತಿರುವಅಂಗಡಿಗಳಿಗೆ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಮಾಡಿ ಸ್ಥಿರೀಕರಣಕ್ಕಾಗಿ ವರದಿ ಸಲ್ಲಿಸಲು ಗೌರಿಬಿದನೂರು ತಾಲೂಕಿನ ತಹಶೀಲ್ದಾರ್‌ಗೆ ಆಹಾರ ಇಲಾಖೆಯ ಉಪನಿರ್ದೇಶಕರು ಆದೇಶದಲ್ಲಿ ಸೂಚನೆ ನೀಡಿದ್ದಾರೆ.

ಶೀತಲ ಸಮರ: ಕೋವಿಡ್ ಸಂಕಷ್ಟದಲ್ಲಿರುವ ನಾಗರಿಕರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಆಹಾರ ಭದ್ರತೆ ಕಾಯ್ದೆ 2013ರನ್ವಯ ಜಿಲ್ಲೆಯಲ್ಲಿ ಅನ್ನಭಾಗ್ಯ ಮತ್ತು ಪ್ರಧಾನ ಮಂತ್ರಿ ಗರೀಬ್‌ಕಲ್ಯಾಣ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ಪಡಿತರ ಚೀಟಿದಾರರಿಗೆ ಉಚಿತವಾಗಿ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ.ಆದರೆ ಗೌರಿಬಿದನೂರು ತಾಲೂಕಿನಲ್ಲಿ ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರು ಮತ್ತು ಆಹಾರ ಇಲಾಖೆಯ ಅಧಿಕಾರಿಗಳ ನಡುವೆ ಹೊಂದಾಣಿಕೆ ಕೊರತೆಯಿಂದ ಶೀತಲ ಸಮರ ನಡೆಯುತ್ತಿದೆ. ಆಹಾರ ಇಲಾಖೆಯ ಅಧಿಕಾರಿಗಳ ಧೋರಣೆ ವಿರುದ್ಧ ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೇಳ್ಯ ಅಂಗಡಿ ಅವರಿಂದ ಎತ್ತುವಳಿ: ಗೌರಿಬಿದ ನೂರು ತಾಲೂಕಿನಲ್ಲಿ ಆಹಾರ ಇಲಾಖೆ ಅಧಿಕಾರಿ ಗಳುಕ್ಷಮೆಯಾಚಿಸುವವರೆಗೆ ಗೋದಾಮುಗಳಿಂದ ಆಹಾರಧಾನ್ಯಗಳನ್ನು ಎತ್ತುವಳಿ ಮಾಡಲು ಯಾರು ಹೋಗಬಾರದೆಂದು ನಿರ್ಧರಿಸಿದ್ದಾರೆ. ಕೊನೆಗೂ ತಾಲೂಕಿನಲ್ಲಿರುವ 111 ಸರ್ಕಾರಿ ನ್ಯಾಯಬೆಲೆ ಅಂಗಡಿಗಳ ಪೈಕಿ ಕೇವಲ ಮೇಳ್ಯ ಗ್ರಾಮದ ಅಂಗಡಿ ಮಾಲೀಕರು ಹೊರತುಪಡಿಸಿ ಬೇರೆ ಯಾರು ಸಹ ಆಹಾರ ಧಾನ್ಯಗಳನ್ನು ಗೋದಾಮಿನಿಂದ ಎತ್ತುವಳಿ ಮಾಡಿಲ್ಲವೆಂದು ಆಹಾರ ಇಲಾಖೆಯ ಶಿರಸ್ತೇದಾರ ಮತ್ತು ಆಹಾರ ನಿರೀಕ್ಷಕರು ಉಪನಿರ್ದೇಶಕರಿಗೆ ವರದಿ ಸಲ್ಲಿಸಿದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಉಪನಿದೇಶಕರು ಕರ್ನಾಟಕ ಅಗತ್ಯ ವಸ್ತುಗಳ(ಸಾವಿಪ) ನಿಯಂತ್ರಣ ಆದೇಶ 2016 ರನ್ವಯ ನ್ಯಾಯಬೆಲೆ ಅಂಗಡಿ ಪ್ರಾಧಿಕಾರ ಪಡೆದ ಎಲ್ಲಾ ಪ್ರಾಧಿಕರಣದಾರರು ಸರ್ಕಾರದ ನಿಯಮಗಳನ್ನು ತಪ್ಪದೇ ಪಾಲಿಸಬೇಕಾಗಿರುತ್ತದೆ. ಆದರೆ ತಿಂಗಳ 5ನೇ ತಾರೀಖೀನೊಳಗೆ ಆಹಾರ ಧಾನ್ಯಗಳನ್ನು ಎತ್ತುವಳಿ ಮಾಡಲು ನಿರ್ಲಕ್ಷ್ಯ ವಹಿಸಿರುವ ವಿಚಾರವನ್ನು ಗಂಭೀರವಾಗಿ ಆಹಾರ ಇಲಾಖೆಯ ಉಪನಿರ್ದೇಶಕರು ಪರಿಗಣಿಸಿ 10 ಸರ್ಕಾರಿ ನ್ಯಾಯಬೆಲೆಅಂಗಡಿ ಮಾಲೀಕರ ಪರವಾನಿಗೆ ಅಮಾನತುಗೊಳಿಸಿಆದೇಶ ಹೊರಡಿಸಿದ್ದಾರೆ.

ಅಮಾನತು ಮಾಡಲಾದ ಅಂಗಡಿಗಳು ಯಾವುವು? :  ಗೌರಿಬಿದನೂರು ತಾ.ಹುದಗೂರಿನ ಎಸ್‌.ಎನ್‌. ಕುಸುಮ, ನರಸಾಪುರದ ಜಯಮ್ಮ, ಗೌರಿಬಿದನೂರಿನ ಟಿಎಪಿಸಿಎಂಎಸ್‌, ತೊಂಡೇಬಾವಿಯ ಮದನಗೋಪಾಲ್‌ರೆಡ್ಡಿ, ಮಾಚೇನಹಳ್ಳಿಯ ಎಂ.ಕೆ.ರಾಮಚಂದ್ರಪ್ಪ, ವಾಟದಹೊಸಹಳ್ಳಿ ವಿ.ಎಸ್‌.ಎಸ್‌.ಎನ್‌, ನಗರಗೆರೆ ವಿ.ಎಸ್‌.ಎಸ್‌.ಎನ್‌, ಬಯ್ಯಮ್ಮ ವೆಂಕಟಾಪುರ, ಹಾಲಗಾನಹಳ್ಳಿಯ ವೆಂಕಟೇಶ್‌ಬಾಬು ಹೆಚ್‌.ಎನ್‌. ಹಾಗೂ ತೋಕಲಹಳ್ಳಿಯ ವಿ.ಎಸ್‌.ಎಸ್‌.ಎನ್‌ ಸಂಘಗಳ ಪರವಾನಿಗೆ ಅಮಾನತುಗೊಳಿಸಿ ಆಹಾರ ಇಲಾಖೆಯ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಸಂಘರ್ಷ ತಾರಕಕ್ಕೆ :  ಗೌರಿಬಿದನೂರು ತಾಲೂಕಿನಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರ ನಡುವೆ ಭುಗಿಲೆದ್ದಿರುವ ವಿವಾದ ಮತ್ತು ಸಮಸ್ಯೆ ಬಗೆಹರಿಸಲು ಆಹಾರ ಇಲಾಖೆ ಉಪನಿರ್ದೇಶಕರು ಸಂಧಾನ ನಡೆಸುವ ಕೆಲಸ ಮಾಡಿದ್ದಾರೆ ಎನ್ನಲಾಗಿದೆ. ಆದರೂ ಸಹ ಅಧಿಕಾರಿಗಳು ಮತ್ತು ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರ ನಡುವೆ ಸಂಘರ್ಷ ತಾರಕಕ್ಕೇರಿ ಪರಸ್ಪರ ಏಕವಚನದಲ್ಲಿ ಬೈದಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸಮಸ್ಯೆ ಇತ್ಯರ್ಥಕ್ಕೆ ಅಧಿಕಾರಿಗಳ ಬದಲಿಸಲು ಕ್ರಮ: ಪಿ ಸವಿತಾ : ಗೌರಿಬಿದನೂರು ತಾಲೂಕಿನಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರ ನಡುವೆ ಹೊಂದಾಣಿಕೆ ಕೊರತೆಯಿಂದ ಗೋದಾಮಿನಿಂದ ಆಹಾರಧಾನ್ಯಗಳನ್ನು ಎತ್ತುವಳಿ ಮಾಡಲು ನಿರ್ಲಕ್ಷ್ಯ ವಹಿಸಿರುವ 10 ಸರ್ಕಾರಿ ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ಅಮಾನತುಗೊಳಿಸಿದ್ದೇವೆ ಎಂದು ಆಹಾರ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ ಉಪನಿರ್ದೇಶಕಿ ಪಿ.ಸವಿತಾ ತಿಳಿಸಿದ್ದಾರೆ. ಈ ಸಂಬಂಧ “ಉದಯವಾಣಿ’ಗೆ ಪ್ರತಿಕ್ರಿಯಿಸಿದ ಅವರು, ಪಡಿತರ ಚೀಟಿದಾರರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಸಮಸ್ಯೆ ಬಗೆಹರಿಸಲು ಗೌರಿಬಿದನೂರು ತಾಲೂಕಿನಲ್ಲಿ ಆಹಾರ ಇಲಾಖೆಯ ಅಧಿಕಾರಿಗಳನ್ನು ಬದಲಾಯಿಸಲು ಕ್ರಮ ಕೈಗೊಳ್ಳಲಾಗಿದೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.