ನೀತಿ ಸಂಹಿತೆ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಿ


Team Udayavani, Nov 30, 2019, 3:00 AM IST

niti-samhi

ಚಿಕ್ಕಬಳ್ಳಾಪುರ: ಯಾವುದೇ ಪಕ್ಷ ಇರಲಿ, ಅಭ್ಯರ್ಥಿ ಆಗಿರಲಿ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದರೆ ತಕ್ಷಣ ಕ್ರಮ ಕೈಗೊಳ್ಳಬೇಕು. ಚೆಕ್‌ಪೋಸ್ಟ್‌ಗಳಲ್ಲಿ ಪ್ರತಿ ವಾಹನವನ್ನು ಕಡ್ಡಾಯವಾಗಿ ತಪಾಸಣೆ ನಡೆಸಬೇಕು. ಸ್ಪರ್ಧೆಯಲ್ಲಿರುವ ಅಭ್ಯರ್ಥಿಗಳ ಖರ್ಚು, ವೆಚ್ಚಗಳ ಮೇಲೆ ನಿಗಾ ವಹಿಸಿ, ಕಾಲಕಾಲಕ್ಕೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ವರದಿ ಕೊಡಿ. ಉಪ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಿ..

ಇದು, ರಾಜ್ಯ ಚುನಾವಣಾ ಆಯೋಗ ಉಪ ಚುನಾವಣೆ ಪ್ರಯುಕ್ತ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆ ಅನುಷ್ಠಾನಕ್ಕೆ ನೇಮಕಗೊಂಡಿರುವ ವಿಶೇಷ ಅಧಿಕಾರಿ ಹಾಗೂ ಖಡಕ್‌ ಐಎಎಸ್‌ ಅಧಿಕಾರಿ ಎಂದೇ ಖ್ಯಾತಿಯಾಗಿರುವ ಮುನೀಷ್‌ ಮೌದ್ಗಿಲ್‌, ಜಿಲ್ಲಾಡಳಿತ ಹಾಗೂ ಉಪ ಚುನಾವಣೆಗೆ ನೇಮಕಗೊಂಡಿರುವ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು. ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಗೆ ಶುಕ್ರವಾರ ಮಧ್ಯಾಹ್ನ ದಿಢೀರನೆ ಆಗಮಿಸಿ ಉಪ ಚುನಾವಣೆಯ ಸಿದ್ಧತೆಗಳ ಜೊತೆಗೆ ಮಾದರಿ ನೀತಿ ಸಂಹಿತೆ ಪಾಲನೆ ಹಾಗೂ ಉಲ್ಲಂಘನೆ ಕುರಿತು ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು.

ನಿರ್ಲಕ್ಷ್ಯ ತೋರಿದರೆ ಕ್ರಮ: ಯಾವುದೇ ಲೋಪದೋಷಗಳು ಇಲ್ಲದಂತೆ ಚುನಾವಣೆಯನ್ನು ನ್ಯಾಯ ಸಮ್ಮತವಾಗಿ ನಡೆಸುವಂತೆ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ವಿವಿಧ ತಂಡಗಳ ಮುಖ್ಯಸ್ಥರಿಗೆ ಆದೇಶಿಸಿದರು. ನೀತಿ ಸಂಹಿತೆ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದರೆ ಅಂತಹವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹಿತಾಸಕ್ತಿಗೆ ಒಳಗಾಗದಿರಿ: ಸಭೆಯಲ್ಲಿ ಉಪ ಚುನಾವಣೆ ಸಂಬಂಧ ರಚಿಸಲಾಗಿರುವ ವಿವಿಧ ಮಾದರಿ ನೀತಿ ಸಂಹಿತೆಯ ಅನುಷ್ಠಾನ ತಂಡಗಳಾದ ಎಸ್‌ಎಸ್‌ಟಿ, ಎಫ್ಎಸ್‌ಟಿ, ಅಬಕಾರಿ ಹಾಗೂ ಇತರೆ ತಂಡಗಳ ಕಾರ್ಯ ಚಟುವಟಿಕೆಯನ್ನು ಪ್ರತಿ ದಿನದ ಮೇಲ್ವಿಚಾರಣೆ ಮಾಡುತ್ತೇನೆ. ನೀತಿ ಸಂಹಿತೆ ಉಲ್ಲಂಘನೆ ಮಾಡಿದವರ ವಿರುದ್ಧ ಹಿತಾಸಕ್ತಿಗೆ ಒಳಗಾಗದೇ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದರು.

ಉಪಚುನಾವಣೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ 387 ರೇಡ್‌ಗಳನ್ನು ಮಾಡಲಾಗಿದ್ದು, 136 ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಘೋರ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ ಎಂದು ಸಭೆಯಲ್ಲಿ ಅಬಕಾರಿ ಇಲಾಖೆಯ ಉಪಆಯುಕ್ತರು ನರೇಂದ್ರ ಕುಮಾರ್‌ ಸಭೆಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಆರ್‌.ಲತಾ, ಚುನಾವಣಾ ವೆಚ್ಚ ವೀಕ್ಷಕರಾದ ರಣವಿಜಯ್‌ಕುಮಾರ್‌, ಚುನಾವಣಾ ವೀಕ್ಷಕರಾದ ವೆಂಕಟಮುರಳಿ, ಜಿಪಂ ಸಿಇಒ ಬಿ.ಫೌಜಿಯಾ ತರುನ್ನುಮ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಭಿನವ್‌ ಖರೆ, ಉಪವಿಭಾಗಾಧಿಕಾರಿ ಎ.ಎನ್‌.ರಘುನಂದನ್‌, ಸಹಾಯಕ ಚುನಾವಣಾ ಅಧಿಕಾರಿಗಳಾದ ಕೆ.ನರಸಿಂಹಮೂರ್ತಿ, ಶ್ರೀನಿವಾಸ್‌ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಏಜೆಂಟರು ಉಪಸ್ಥಿತರಿದ್ದರು.

ದೂರುಗಳಿಗೆ 990009911 ಕರೆ ಮಾಡಿ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆ ಉಲ್ಲಂಘನೆ ವಿಚಾರವಾಗಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಅಥವಾ ಏಜೆಂಟರು ಹಾಗೂ ಸಾರ್ವಜನಿಕರು ದೂರುಗಳನ್ನು ನೀಡಬಹುದು. ಇದಕ್ಕಾಗಿ ದೂರವಾಣಿ ಸಂಖ್ಯೆ 990009911 ಗೆ ಸಂಪರ್ಕಿಸಬಹುದು ಎಂದು ಮಾದರಿ ನೀತಿ ಸಂಹಿತೆಯ ವಿಶೇಷ ಅಧಿಕಾರಿಗಳಾಗಿರುವ ಮುನೀಷ್‌ ಮೌದ್ಗಿಲ್‌ ತಿಳಿಸಿದರು.

ಟಾಪ್ ನ್ಯೂಸ್

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.